Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ...

ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಮುಂಚೂಣಿ ರಾಜ್ಯ : ಸಿಎಂ ಸಿದ್ದರಾಮಯ್ಯ

‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಹೂಡಿಕೆದಾರರ ಸಮಾವೇಶ-2025

ವಾರ್ತಾಭಾರತಿವಾರ್ತಾಭಾರತಿ11 Feb 2025 10:23 PM IST
share
ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಮುಂಚೂಣಿ ರಾಜ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತದ ಆರ್ಥಿಕತೆಯ ಪರಿವರ್ತನೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯ. ಇಂದು ದೇಶದಲ್ಲಿಯೇ ಕರ್ನಾಟಕ ಅತ್ಯಂತ ಹೂಡಿಕೆದಾರ ಸ್ನೇಹಿ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ನಗರದ ಅರಮನೆ ಆವರಣದಲ್ಲಿ ರಾಜ್ಯ ಸರಕಾರ ಆಯೋಜಿಸಿದ್ದ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಹೂಡಿಕೆದಾರರ ಸಮಾವೇಶ-2025 ಉದ್ಘಾಟನಾ ಸಮಾರಂಭದಲ್ಲಿ ಏಕಗವಾಕ್ಷಿ ಪೋರ್ಟಲ್‍ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸದೃಢ ನೀತಿ ನಿರೂಪಣೆ, ಸಕ್ರಿಯ ಆಡಳಿತ ಮತ್ತು ವ್ಯವಹಾರ ಸ್ನೇಹಿ ಪರಿಸರ ವ್ಯವಸ್ಥೆಯಿದೆ. ಎಚ್.ಎ.ಎಲ್, ಬಿಇಎಲ್, ಬಿಇಎಂಎಲ್ ಮುಂತಾದ ಸಾರ್ವಜನಿಕ ವಲಯದ ಉದ್ಯಮಗಳಿಗೆ ತವರೂರಾದ ಕರ್ನಾಟಕ ಭಾರತದ ಕೈಗಾರಿಕಾ ಬೆಳವಣಿಗೆಗೆ ಬೆನ್ನೆಲುಬಾಗಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಐಐಎಸ್ಸಿ, ಐಐಎಂ ಬೆಂಗಳೂರು, ಎನ್‍ಎಲ್‍ಎಸ್‍ಯು ಮುಂತಾದ ಜಾಗತಿಕ ಮಟ್ಟದ ಸಂಸ್ಥೆಗಳು ಮತ್ತು 200ಕ್ಕೂ ಹೆಚ್ಚು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಿಂದ ಉತ್ತಮ ಪ್ರತಿಭೆಗಳು ಪ್ರತಿ ವರ್ಷ ಹೊರಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್ ಸ್ಪೇಸ್ ಮತ್ತು ಬಯೋಟೆಕ್ ನಲ್ಲಿ 400ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಹೊಂದಿರುವ ರಾಜ್ಯವು, ಭಾರತದ ಬೌದ್ಧಿಕ ಕೇಂದ್ರವಾಗಿದೆ. ಪ್ರವರ್ಧಮಾನಕ್ಕೆ ಬರುತ್ತಿರುವ ವಲಯಗಳಲ್ಲಿ ಶೈಕ್ಷಣಿಕ ಸಂಸ್ಥೆ ಹಾಗೂ ಉದ್ಯಮಗಳ ಸಹಭಾಗಿತ್ವದಲ್ಲಿ ಯುವಕರಿಗೆ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕವು ಹಸಿರು ಆರ್ಥಿಕತೆ, ಪರಿಸರ ಸ್ನೇಹಿ ಕೈಗಾರಿಕಾ ಸಮುಚ್ಚಯಗಳು ಹಾಗೂ ಸುಸ್ಥಿರ ನಗರಾಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಭಾರತದ ಸೌರ ಶಕ್ತಿ ಉತ್ಪಾದನೆಯಲ್ಲಿ ಕರ್ನಾಟಕ ಮಂಚೂಣಿಯಲ್ಲಿದ್ದು, ಪವನ ಶಕ್ತಿ, ಎಲೆಕ್ಟ್ರಿಕ್ ಮೊಬಿಲಿಟಿ ಮತ್ತು ಸುಸ್ಥಿರ ನಗರಾಭಿವೃದ್ದಿಯಲ್ಲಿಯೂ ನಾಯಕತ್ವ ವಹಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಬಿಯಾಂಡ್ ಬೆಂಗಳೂರು ಪರಿಕಲ್ಪನೆ ರಾಜ್ಯದಾದ್ಯಂತ ಸಮತೋಲಿತ ಕೈಗಾರಿಕಾ ಬೆಳವಣಿಗೆಗೆ ಉತ್ತೇಜನ ನೀಡುತ್ತಿದೆ. ಕರ್ನಾಟಕದ ಸಮೃದ್ಧ ಪ್ರವಾಸೋದ್ಯಮ ಮತ್ತು ಸೇವಾ ವಲಯವು ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಸುಂದರ ನೈಸರ್ಗಿಕ ಪ್ರದೇಶ ಮತ್ತು ವಿಶ್ವಮಟ್ಟದ ಮೂಲಸೌಕರ್ಯಗಳಿಂದಾಗಿ ಪ್ರವಾಸಿಗರು ಮತ್ತು ಜಾಗತಿಕ ಹೂಡಿಕೆದಾರರಿಗೆ ಪ್ರಮುಖ ಗಮ್ಯವನ್ನಾಗಿಸಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ಕೆಂಪೇಗೌಡ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣವೂ ಸೇರಿದಂತೆ ರಾಜ್ಯಾದ್ಯಂತ ಉತ್ತಮ ಸಂಪರ್ಕ ಹೊಂದಿರುವ ವಿಮಾನ ನಿಲ್ದಾಣಗಳನ್ನು ಹೊಂದಿರುವ ಕಾರಣ ಕರ್ನಾಟಕ ವೈಮಾನಿಕ ಸಂಪರ್ಕದಲ್ಲಿಯೂ ಮುಂಚೂಣಿಯಲ್ಲಿದೆ. ಪ್ರಯಾಣಿಕರು ಮತ್ತು ಸರಕುಗಳಿಗೆ ಜಾಗತಿಕ ಕೇಂದ್ರವಾಗಿರುವ ಬೆಂಗಳೂರು ಮತ್ತು ಇತರೆ ನಿರ್ಮಾಣ ಹಂತದ ವಿಮಾನ ನಿಲ್ದಾಣಗಳು ಪ್ರಾದೇಶಿಕ ಮತ್ತು ಅಂತರ್‍ರಾಷ್ಟ್ರೀಯ ಸಂಪರ್ಕವನ್ನು ಉತ್ತೇಜಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ 320 ಕಿ.ಮೀ ಉದ್ದದ ಕರಾವಳಿ ಪ್ರದೇಶವು ಅನೇಕ ಬಂದರುಗಳನ್ನು ಹೊಂದಿದ್ದು, ಕಡಲತೀರದ ವ್ಯಾಪಾರ, ಮೀನುಗಾರಿಕೆ ಮತ್ತು ಕರಾವಳಿ ತೀರದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿವೆ. 15 ಸಾವಿರಕ್ಕೂ ಹೆಚ್ಚು ಸ್ಟಾರ್ಟ್‌ಅಪ್ ಹಾಗೂ 40ಕ್ಕೂ ಹೆಚ್ಚು ಯೂನಿಕಾರ್ನ್ ಗಳನ್ನು ಹೊಂದಿರುವ ಕರ್ನಾಟಕ ಭಾರತದ ಅತಿದೊಡ್ಡ ಸ್ಟಾರ್ಟ್ ಅಪ್ ಹಬ್ ಮತ್ತು ಜಾಗತಿಕವಾಗಿ ಮೊದಲ ಐದರಲ್ಲಿ ಗುರುತಿಸಿಕೊಂಡಿದೆ ಎಂದು ಅವರು ನುಡಿದರು.

ಎಲಿವೇಟ್ 100 ಮತ್ತು ಬಿಯಾಂಡ್ ಬೆಂಗಳೂರು ನಂತಹ ಯೋಜನೆಗಳು ನಾವೀನ್ಯತೆಯನ್ನು ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಕೊಂಡೊಯ್ದು ಡಿಜಿಟಲ್ ಪರಿವರ್ತನೆಯಲ್ಲಿ ತನ್ನ ನಾಯಕತ್ವವನ್ನು ಒತ್ತಿ ಹೇಳುತ್ತದೆ. ಸೆಮಿಕಂಡಕ್ಟರ್ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ತನ್ನ ಸ್ಥಾನವನ್ನು ಭದ್ರಗೊಳಿಸಿಕೊಳ್ಳುತ್ತಿರುವ ಕರ್ನಾಟಕ ಇಂಟೆಲ್, ಟಿಎಸ್‍ಎಂಸಿ ಮತ್ತು ಮೈಕ್ರಾನ್ ಸಂಸ್ಥೆಗಳಿಂದ ಪ್ರಮುಖ ಹೂಡಿಕೆಗಳನ್ನು ಹೊಂದಿದೆ ಎಂದು ಅವರು ಹೇಳಿದರು.

ಭಾರತದ ಎಲೆಕ್ಟ್ರಾನಿಕ್ ಉತ್ಪನ್ನಗಳ ರಫ್ತಿನಲ್ಲಿ ಶೇ.60 ರಷ್ಟನ್ನು ಪೂರೈಸುವ ಮೂಲಕ ಕರ್ನಾಟಕ ನೆಕ್ಸ್ಟ್ ಜೆನ್ ಚಿಪ್ಸ್ ಹಾಗೂ ಸಾಧನಗಳ ಜಾಗತಿಕ ಪೂರೈಕೆದಾರವಾಗಿದೆ. ಇನ್ಫೋಸಿಸ್, ವಿಪ್ರೋ, ಟಿಸಿಎಸ್, ಗೂಗಲ್, ಅಮೆಜಾನ್ ಮತ್ತು ಆಪಲ್ ನಂತಹ ಪ್ರಮುಖ ಟೆಕ್ ಕಂಪನಿಗಳಿಗೆ ನೆಲೆಯಾಗಿರುವ ಕರ್ನಾಟಕ ಭಾರತದ ಸಾಫ್ಟ್ ವೇರ್ ರಫ್ತಿಗೆ ಶೇ.40 ರಷ್ಟು ಕೊಡುಗೆ ನೀಡುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಡಿಜಿಟಲ್ ಅರ್ಥಿಕತೆಯನ್ನು ಭವಿಷ್ಯಕ್ಕೆ ಸೂಕ್ತವಾಗುವ ರೀತಿಯಲ್ಲಿ ಅಣಿಮಾಡಲು ಕರ್ನಾಟಕವು ಎಐ ಆಡಳಿತ, ಬ್ಲಾಕ್ ಚೈನ್ ಅಳವಡಿಕೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ಗಳಲ್ಲಿ ಹೂಡಿಕೆ ಮಾಡುತ್ತಿದೆ. ರಾಜ್ಯದಲ್ಲಿ ಟೆಸ್ಲಾ, ಓಲಾ ಎಲೆಕ್ಟ್ರಿಕ್, ಏಥರ್ ಎನರ್ಜಿ ಮತ್ತು ಮಹಿಂದ್ರಾ ಎಲೆಕ್ಟ್ರಿಕ್ ಹೂಡಿಕೆ ಮಾಡುವ ಮೂಲಕ ಕರ್ನಾಟಕವು ಭಾರತದ ಇವಿ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ರಾಜ್ಯದಲ್ಲಿ ಶೇ.65ಕ್ಕೂ ಹೆಚ್ಚು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆ ಆಗುತ್ತಿದೆ. ರೇಷ್ಮೆ ಉತ್ಪಾದನೆ ಹಾಗೂ ಉಡುಪುಗಳ ರಫ್ತು, ಬಯೋಟೆಕ್ ಸಂಶೋಧನೆ, ಲಸಿಕೆ ಮತ್ತು ಜೀವ ವಿಜ್ಞಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ವೈದ್ಯಕೀಯ ಸಂಶೋಧನೆ ಮತ್ತು ಅಭಿವೃದ್ಧಿಗೆ ಪ್ರಮುಖ ತಾಣವಾಗಿದೆ. ಕಬ್ಬಿಣದ ಅದಿರು, ಚಿನ್ನ ಮತ್ತಿತರ ಖನಿಜಗಳ ನಿಕ್ಷೇಪವನ್ನು ಹೊಂದಿರುವ ರಾಜ್ಯ ಕೈಗಾರಿಕೆ ಮತ್ತು ಆರ್ಥಿಕ ಬೆಳವಣಿಗೆಗೆ ಕಾರಣೀಭೂತವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕ್ವಿನ್ ಸಿಟಿ ಯನ್ನು (ಕರ್ನಾಟಕ ವಲ್ರ್ಡ್ ಇನ್ನೊವೇಷನ್ ನೆಟ್‍ವರ್ಕ್)ಕೃತಕ ಬುದ್ಧಿಮತ್ತೆ, ಅಂತರಿಕ್ಷ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ಬಯೋಟೆಕ್ ಗಾಗಿಯೇ ಮೀಸಲಿಡಲಾಗಿದೆ. ವಿಶ್ವಮಟ್ಟದ ವೈದ್ಯಕೀಯ ಕೇಂದ್ರವಾಗುವ ಆರೋಗ್ಯ ನಗರ(ಹೆಲ್ತ್ ಸಿಟಿ)ವನ್ನು ಅಭಿವೃದ್ಧಿಗೊಳಿಸುತ್ತಿದ್ದು, ಜಾಗತಿಕ ಆರೋಗ್ಯ ಅಗತ್ಯಗಳು, ವೈದ್ಯಕೀಯ ಪ್ರವಾಸೋದ್ಯಮ ಮತ್ತು ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಗಳನ್ನು ಒದಗಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಹೂಡಿಕೆದಾರರಿಗೆ ಕಾನೂನು ಸುವ್ಯವಸ್ಥೆ ಪಾಲನೆಯನ್ನೂ ಒಳಗೊಂಡು ಸುಭದ್ರವಾದ ಉದ್ಯಮ ಸ್ನೇಹಿ ವಾತಾವರಣ ಕಲ್ಪಿಸಲು ಸರಕಾರ ಬದ್ಧವಾಗಿದೆ. ಈ ಸಮಾವೇಶದ ವಸ್ತುಪ್ರದರ್ಶನದಲ್ಲಿ 40ಕ್ಕೂ ಹೆಚ್ಚು ಜಾಗತಿಕ ಕಂಪನಿಗಳು, ಸ್ಟಾರ್ಟ್ ಅಪ್ ಕಂಪನಿಗಳಿಂದ, ಡ್ರೋನ್ ತಂತ್ರಜ್ಞಾನ, ಅಂತರಿಕ್ಷ ತಂತ್ರಜ್ಞಾನ, ಆರೋಗ್ಯ ವಲಯ, ಕೃಷಿ ಹಾಗೂ ಆರೋಗ್ಯ ತಂತ್ರಜ್ಞಾನ ಮತ್ತು ವೈಮಾನಿಕ ಮತ್ತು ರಕ್ಷಣಾ ವಲಯಗಳ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ವಲಯಗಳ ಕುರಿತು ಸ್ವಾಯತ್ತ ಪರಿಹಾರಗಳನ್ನು ಒದಗಿಸುತ್ತಿರುವುದನ್ನು ಬಿಂಬಿಸಲಿದೆ ಎಂದು ಅವರು ಹೇಳಿದರು.

ಸುಭದ್ರ ನೀತಿಗಳು, ವಿಶ್ವ ಮಟ್ಟದ ಮೂಲಸೌಕರ್ಯ, ಕೌಶಲ್ಯಭರಿತ ಸಂಪನ್ಮೂಲ ಮತ್ತು ಸುಸ್ಥಿರತೆಯ ಮೇಲಿನ ತನ್ನ ಗಮನದಿಂದಾಗಿ ಭವಿಷ್ಯಕ್ಕೆ ಸಿದ್ಧವಾಗಿರುವ ಹೂಡಿಕೆಗಳಿಗೆ ಕರ್ನಾಟಕ ಸೂಕ್ತವಾದ ತಾಣವಾಗಿದೆ. ಬೆಳವಣಿಗೆಯನ್ನು ಉತ್ತೇಜಿಸುವ ಪರಿಸರ ವ್ಯವಸ್ಥೆಯನ್ನು ನಾವು ನಿರ್ಮಿಸುತ್ತಿದ್ದು, ಉದ್ಯೋಗ ಸೃಜನೆ ಮತ್ತು ಜಾಗತಿಕ ಮಹತ್ವಾಕಾಂಕ್ಷೆಯನ್ನು ಬಲಪಡಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಡಿಜಿಟಲೀಕರಣಗೊಂಡಿರುವ ನಮ್ಮ ವ್ಯವಸ್ಥೆ, ಸುವ್ಯವಸ್ಥಿತ ಪ್ರಕ್ರಿಯೆಗಳು, ಸದೃಢ ಬೆಂಬಲಿತ ಕಾರ್ಯವಿಧಾನಗಳು ಸರಳೀಕೃತ ವ್ಯವಹಾರವನ್ನು ಖಾತ್ರಿಪಡಿಸುತ್ತವೆ. ಐಟಿ ಉತ್ಪಾದನೆಯಿದ ಹಿಡಿದು, ಡೀಪ್‍ಟೆಕ್ ನಿಂದ ನವೀಕರಿಸಬಹುದಾದ ಇಂಧನದವರೆಗೆ, ಏರೋಸ್ಪೇಸ್ ನಿಂದ ಆರೋಗ್ಯದವರೆಗೆ, ಕರ್ನಾಟಕ ಯಶಸ್ಸನ್ನು ಪೋಷಿಸಲು ಹಾಗೂ ಈ ದಾರಿಯಲ್ಲಿ ಮುನ್ನಡೆಯಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ನೂತನ ಕೈಗಾರಿಕಾ ನೀತಿ-2025, ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಳ್ಳುವ ಬೆಳವಣಿಗೆಯನ್ನು ಸೇರಿದಂತೆ ಕರ್ನಾಟಕದ ಮಹತ್ವಾಕಾಂಕ್ಷಿ ದೂರದೃಷ್ಟಿಯನ್ನು ಒತ್ತಿಹೇಳಿದೆ. ಉತ್ಪಾದನಾ ವಲಯದಲ್ಲಿ ಶೇ.12 ರಷ್ಟು ವಾರ್ಷಿಕ ಬೆಳವಣಿಗೆಯ ದರದ ಗುರಿಯನ್ನು ಹೊಂದಿದ್ದು, 2030 ರೊಳಗೆ 7.5 ಲಕ್ಷ ಕೋಟಿ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಜನೆಯ ಗುರಿಯನ್ನು ಹೊಂದಿದೆ.

ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X