Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ...

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಹೆಚ್ಚಳ | ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 April 2025 6:54 PM IST
share
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಹೆಚ್ಚಳ | ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ : ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರು ಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಸೋಮವಾರ ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಲೆ ಏರಿಕೆಗೆ ಕೇಂದ್ರ ಸರಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರೇ ದೇಶದ ಜನರ ಮುಂದೆ ಬಿಚ್ಚಿಟ್ಟು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಈಗ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು ಎರಡು ರೂಪಾಯಿಗಳಷ್ಟು ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂಪಾಯಿಯಷ್ಟು ಏರಿಕೆ ಮಾಡಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು ಎಂಬುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಂತರ್‌ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಒಂದೇ ಸಮನೆ ಏರಿಸುತ್ತಾ ಹೋಗಲು ಕಾರಣ ಏನು ಎಂಬುದನ್ನು ಬಿಜೆಪಿ ನಾಯಕರು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಕ್ಕಿ, ಬೇಳೆ, ಮೀನು, ಮಾಂಸ, ತರಕಾರಿಯಿಂದ ಹಿಡಿದು ಹೊಟೇಲ್ ತಿಂಡಿ ವರೆಗೆ ಎಲ್ಲದರ ಬೆಲೆ ಏರಿಕೆಗೆ ಮೂಲ ಕಾರಣ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಇರುವ ಕೇಂದ್ರ ಸರಕಾರದ ಜನವಿರೋಧಿ ನೀತಿ ಎನ್ನುವುದು ಆರ್ಥಿಕ ವ್ಯವಹಾರದ ಸಾಮಾನ್ಯ ಜ್ಞಾನ ಇದ್ದವರಿಗೆಲ್ಲ ಗೊತ್ತು ಎಂದು ಅವರು ತಿಳಿಸಿದ್ದಾರೆ.

ಹೀಗಿದ್ದರೂ, ಬೆಲೆ ಏರಿಕೆಯ ಪಾಪದ ಹೊರೆಯನ್ನು ನಮ್ಮ ತಲೆ ಮೇಲೆ ಕಟ್ಟಲು ಹೊರಟಿರುವ ಬಿಜೆಪಿ ನಾಯಕರ ಮುಖಕ್ಕೆ ಮೋದಿ ಮಸಿ ಬಳಿದಿದ್ದಾರೆ. ಜನಾಕ್ರೋಶ ಯಾತ್ರೆ ಹೊರಟವರು ಒಂದೋ ಪ್ರಧಾನಿ ಮೇಲೆ ಒತ್ತಡ ಹೇರಿ ಕೇಂದ್ರ ಸರಕಾರ ಹೆಚ್ಚಿಸಿರುವ ಬೆಲೆಯನ್ನು ಇಳಿಸುವಂತೆ ಮಾಡಬೇಕು, ಇಲ್ಲವೇ ಯಾತ್ರೆಯನ್ನು ಕೊನೆಗೊಳಿಸಿ ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಮನೆಗೆ ಮರಳಬೇಕು. ಇದರ ಹೊರತಾಗಿ ಈ ಯಾತ್ರೆಯ ಪ್ರಹಸನವನ್ನು ಮುಂದುವರಿಸಿದರೆ ಜನರ ಆಕ್ರೋಶಕ್ಕೆ ತುತ್ತಾಗುವುದು ಖಂಡಿತ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X