Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಜೃಂಭಣೆಯ ರಭಸದಲ್ಲಿ ದಸರಾದ ಚಾರಿತ್ರಿಕ‌...

ವಿಜೃಂಭಣೆಯ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು : ಸಿಎಂ ಸಿದ್ದರಾಮಯ್ಯ

► ಸೆ.22ರಿಂದ 11 ದಿನ ಅದ್ಧೂರಿ ದಸರಾ ಉತ್ಸವ ► ʼಮೈಸೂರು ದಸರಾ-2025ʼ ಉನ್ನತ ಮಟ್ಟದ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ28 Jun 2025 3:27 PM IST
share
ವಿಜೃಂಭಣೆಯ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಸರಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು. ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು ಎಂದರು.

ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ. ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು. ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.

ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು. ಸರಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು. ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು. ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದರು.

ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು. ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು ಎಂದು ಸೂಚನೆ ನೀಡಿದರು.

ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು. ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು. ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು. ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು. ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು ಎಂದು ಹೇಳಿದರು.

ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್‌ ಭೈರತಿ, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್‌ ಸೇಠ್‌, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.

ʼಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54 ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು"ಎಚ್.ಸಿ.ಮಹದೇವಪ್ಪ, ಸಚಿವರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X