ನಿಗಮ-ಮಂಡಳಿಗಳಿಗೆ ನೇಮಕ ಚರ್ಚೆ ಅಪೂರ್ಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಲ್ಲಿ : ಬಾಕಿಯಿರುವ ನಿಗಮ-ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆ ನಡೆದ ಚರ್ಚೆ ಅಪೂರ್ಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರ್ಜೆವಾಲ ಅವರೊಂದಿಗೆ ನಾನು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿಗಮ, ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದೇವೆ ಎಂದರು.
ಜು.16ರಂದು ಸಂಜೆ ಸುರ್ಜೆವಾಲಾ ಬೆಂಗಳೂರಿಗೆ ಬರುತ್ತಿದ್ದು, ಆ ಸಂದರ್ಭದಲ್ಲಿ ನಿಗಮ, ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಈ ಸಂದರ್ಭದಲ್ಲಿ ಹೊಸದಿಲ್ಲಿಯಲ್ಲಿನ ರಾಜ್ಯ ಸರಕಾರದ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story





