Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲ್ಯಾಣ ಕಾರ್ಯಕ್ರಮಗಳಿಂದ ಯಾರೂ...

ಕಲ್ಯಾಣ ಕಾರ್ಯಕ್ರಮಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ, ಸಬಲರಾಗುತ್ತಾರೆ : ಸಿದ್ದರಾಮಯ್ಯ

ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಾಗ : ಸಿಎಂ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ12 July 2025 4:17 PM IST
share
ಕಲ್ಯಾಣ ಕಾರ್ಯಕ್ರಮಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ, ಸಬಲರಾಗುತ್ತಾರೆ : ಸಿದ್ದರಾಮಯ್ಯ

ಬೆಂಗಳೂರು : ಶೇ.100ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ, ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಅತ್ಯಂತ ಯಶಸ್ವಿ ಆಗಿದೆ. ಇದಕ್ಕಾಗಿ ಶ್ರಮಿಸಿದ ಯಲ್ಲಮ್ಮ ಮತ್ತು ಜೊತೆಗಿರುವ ಪ್ರತಿಯೊಬ್ಬರೂ ಅಭಿನಂದನಾರ್ಹರು ಎಂದರು.

ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ಶೋಷಿತ ಜಾತಿ-ಸಮುದಾಯಗಳಿಗೆ ಕೊಟ್ಟಿರುವ ಮಂತ್ರ. ಶೂದ್ರರು ಮತ್ತು ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಆದರೆ ಅಂಬೇಡ್ಕರ್ ಅವರ ಕಾರಣದಿಂದ ಶೂದ್ರ ಮತ್ತು ಮಹಿಳಾ ಕುಲಕ್ಕೆ ಶಿಕ್ಷಣ ಕಲಿಯುವ ಅವಕಾಶ ಒದಗಿ ಬಂತು. ಇದಕ್ಕೆ ನಮ್ಮ ಸಂವಿಧಾನ ನೀಡಿದ ಕಡ್ಡಾಯ ಶಿಕ್ಷಣ ಕಾನೂನು ನೆರವಾಯಿತು ಎಂದರು.

ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು. ಆದರೆ, ನಾನು ಶಾಲೆಗೆ ಹೋಗಿ ಕಾನೂನು ಪದವಿ ಪಡೆದು ಮುಖ್ಯಮಂತ್ರಿಯೂ ಆದೆ. ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ರಾಣಿ ಅಹಲ್ಯಾ ಬಾಯಿ ಅವರ ಶಿಕ್ಷಣ ಕ್ರಾಂತಿ ಎಲ್ಲರಿಗೂ ಈ ಮಹಿಳಾ ಸಂಘಟನೆಗೂ ಪ್ರೇರಣೆ ಆಯಿತು. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲು ಸಾಧ್ಯವಿಲ್ಲ ಎಂದರು.

ರಾಣಿ 20 ವರ್ಷ ಅಧಿಕಾರದಲ್ಲಿದ್ದರೂ ತನ್ನ ಸಾಮ್ರಾಜ್ಯ ಉಳಿಸಲು ಅಗತ್ಯವಾದ ಎಲ್ಲಾ ಅರ್ಹತೆಗಳನ್ನು ಬೆಳೆಸಿಕೊಂಡಿದ್ದರೂ ಸಾಮ್ರಾಜ್ಯ ವಿಸ್ತರಿಸುವ ಹಪಾಹಪಿ ಇರಲಿಲ್ಲ. ಖಜಾನೆ ತುಂಬಿದ್ದರೂ ಸರಳ ಜೀವನ ನಡೆಸುತ್ತಾ, ಸುಸ್ಥಿರ ಆಡಳಿತ, ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿದ್ದ ರಾಣಿ ಅಹಲ್ಯಾ ಬಾಯಿ ಅವರು ಬಾಲ್ಯ ವಿವಾಹ ನಿಲ್ಲಿಸುವ ಮೂಲಕ ಸಾಮಾಜಿಕ ಬದಲಾವಣೆಯಲ್ಲೂ ಪ್ರಮುಖ ಪಾತ್ರ ವಹಿಸಿದರು ಎಂದರು.

ಶಿಕ್ಷಣ ಪಡೆದು ಆರ್ಥಿಕವಾಗಿ ಸಾಮಾಜಿಕವಾಗಿ ಸಭಲರಾದರೆ ಮಾತ್ರ ಅಸಮಾನತೆ ಅಳಿಸಿ ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದರು.

ಸಾಮಾಜಿಕವಾಗಿ ಸಬಲರಾಗುತ್ತಾರೆ :

ನಮ್ಮ ಸರಕಾರದ ಕಲ್ಯಾಣ ಕಾರ್ಯಕ್ರಮಗಳಿಂದ ಯಾರೂ ಸೋಮಾರಿಗಳಾಗುವುದಿಲ್ಲ. ಬದಲಿಗೆ ಸಾಮಾಜಿಕವಾಗಿ ಸಬಲರಾಗುತ್ತಾರೆ. ಮಹಿಳೆಯರ ಸಬಲೀಕರಣಕ್ಕೆ ನಮ್ಮ ಸರಕಾರ ಗೃಹಲಕ್ಷ್ಮಿ, ಶಕ್ತಿ ಯೋಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದಾಗಿದೆ. ಇದರಿಂದ ಸಮಾಜಕ್ಕೆ, ಮಹಿಳಾ ಕುಲಕ್ಕೆ ಶಕ್ತಿ ಬಂದಿದೆಯೇ ಹೊರತು ಯಾರೂ ಸೋಮಾರಿಗಳಾಗಿಲ್ಲ ಎಂದರು.

ರಾಜ್ಯ ಅಹಲ್ಯಾಬಾಯಿ ಮಹಿಳಾ ಸಂಘಕ್ಕೆ ಬೆಂಗಳೂರಿನಲ್ಲಿ ಜಮೀನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X