Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂ....

37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂ. ಸಾಲ ವಿತರಣೆಯ ಗುರಿ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ28 Aug 2025 7:14 PM IST
share
37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂ. ಸಾಲ ವಿತರಣೆಯ ಗುರಿ :  ಸಿಎಂ ಸಿದ್ದರಾಮಯ್ಯ
ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು, ಆ.28: ರಾಜ್ಯದಲ್ಲಿ ಪ್ರಸ್ತುತ ವಾರ್ಷಿಕ ಸಾಲಿನಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ಗೃಹ ಕಚೇರಿ ಕೃಷ್ಣದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಇದೇ ವರ್ಷದ ಜುಲೈ ಅಂತ್ಯದವರೆಗೆ 8,69,284 ರೈತರಿಗೆ 8362.68 ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ. ಒಟ್ಟಾರೆ, ಪ್ರಸ್ತುತ ವಾರ್ಷಿಕ ಸಾಲಿನಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಗುರಿ ಹೊಂದಲಾಗಿದೆ. ಈ ಬಗ್ಗೆ ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಅಧಿಕಾರಿಗಳು ಖಾತ್ರಿಪಡಿಸಬೇಕು ಎಂದು ಸೂಚಿಸಿದರು.

ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ 5,600 ಕೋಟಿಗಳಿಂದ 3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೆ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದರು.

ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಅವರು, ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ 7074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಭೆಯಲ್ಲಿ ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X