Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಗಾಂಧಿ ಭಾರತ ಶತಮಾನೋತ್ಸವ’ ಸಮಾರೋಪ |...

‘ಗಾಂಧಿ ಭಾರತ ಶತಮಾನೋತ್ಸವ’ ಸಮಾರೋಪ | ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Sept 2025 9:22 PM IST
share
‘ಗಾಂಧಿ ಭಾರತ ಶತಮಾನೋತ್ಸವ’ ಸಮಾರೋಪ | ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಸೆ.6: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ‘ಗಾಂಧಿ ಭಾರತ ಶತಮಾನೋತ್ಸವ’ದ ಅಂಗವಾಗಿ 2025ರ ಡಿಸೆಂಬರ್ 26ರಂದು ಗಾಂಧಿ ಭಾರತ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ ಇಲ್ಲಿನ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ‘ಗಾಂಧಿ ಭಾರತ ಶತಮಾನೋತ್ಸವ’ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‍ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು ಎಂದು ಹೇಳಿದರು.

ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ ಸ್ವರಾಜ್ ಕುರಿತಾಗಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗುವುದು. ಗಾಂಧೀಜಿ ಅವರು ಭೇಟಿ ನೀಡಿರುವ ಸ್ಮರಣಾರ್ಥ ರಾಜ್ಯದ 120 ಸ್ಥಳಗಳಲ್ಲಿ ಸ್ತಂಭಗಳನ್ನು ನವೆಂಬರ್ ಕೊನೆಯ ಒಳಗಾಗಿ ನಿರ್ಮಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಜ್ಯೋತಿ ಯಾತ್ರೆ: ಗಾಂಧಿ ಭಾರತ ಅಂಗವಾಗಿ ರಾಜ್ಯಾದ್ಯಂತ ಜ್ಯೋತಿ ಯಾತ್ರೆ ಆಯೋಜಿಸಬೇಕು. ಗಾಂಧೀಜಿಯವರ ಧ್ಯಾನಸ್ಥ ಭಂಗಿಯ ಭಾವಚಿತ್ರ ಹಾಗೂ ಅವರು ಬೋಧಿಸಿದ ತತ್ವಗಳನ್ನು ಎಲ್ಲ ಶಾಲೆಗಳಲ್ಲಿ ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು. ರಂಗಾಯಣದ ವತಿಯಿಂದ ಗಾಂಧಿ ವರ್ಸಸ್ ಗಾಂಧಿ, ಪಾಪು-ಬಾಪು ಹಾಗೂ ಮಹಾತ್ಮರ ಬರುವಿಗಾಗಿ ಎಂಬ 3 ನಾಟಕಗಳನ್ನು ನಿರ್ಮಿಸಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ರಾಜ್ಯದ 16 ಜಿಲ್ಲೆಗಳಲ್ಲಿ ಈಗಾಗಲೇ ಗಾಂಧಿ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ನಿವೇಶನ ಸಿಗದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ಸ್ಥಳ ಗುರುತಿಸಿ ಕಾಮಗಾರಿ ಆರಂಭಿಸಬೇಕು. ಎಲ್ಲ ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ನಿರಂತರವಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಮಾಜಿ ಸಿಎಂ ವೀರಪ್ಪ ಮೊಯಿಲಿ, ಹಿರಿಯ ಶಾಸಕ ಆರ್.ವಿ.ದೇಶಪಾಂಡೆ, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಝ್, ಶತಮಾನೋತ್ಸವ ಸಮಿತಿಯ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X