Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ...

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ18 Nov 2025 2:54 PM IST
share
ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ : ಸಿದ್ದರಾಮಯ್ಯ
► ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ : ಹೂಡಿಕೆದಾರರಿಗೆ ಸಿಎಂ ಕರೆ ► ʼಬೆಂಗಳೂರು ಟೆಕ್ ಸಮ್ಮಿಟ್ 2025ʼ

ಬೆಂಗಳೂರು : ಸರಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಮುಖ ನೀತಿಗಳ ರಚನೆ-ಐತಿಹಾಸಿಕ ಹೆಜ್ಜೆ :

ಈ ಶೃಂಗಸಭೆಯಲ್ಲಿ, ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ 2025–2030, ಬಾಹ್ಯಾಕಾಶ ತಂತ್ರಜ್ಞಾನ ನೀತಿ 2025-2030, ಮತ್ತು ಸ್ಟಾರ್ಟ್ಅಪ್ ನೀತಿ 2025-2030ಗಳಂತಹ ಮೂರು ಪ್ರಮುಖ ನೀತಿಗಳನ್ನು ರಚಿಸುವ ಮೂಲಕ ಐತಿಹಾಸಿಕ ಹೆಜ್ಜೆಯನ್ನು ಇಡಲಾಗಿದೆ. ದತ್ತಾಂಶ ಚಾಲಿತ ಹಾಗೂ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾದ ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿಯಿಂದ, ರಾಜ್ಯವನ್ನು ನಾವೀನ್ಯತೆ ಮತ್ತು ಡೀಪ್ ಟೆಕ್ ಗಳಿಗೆ ಜಾಗತಿಕ ತಾಣವಾಗಿಸುವ ಗುರಿಯನ್ನು ಸರಕಾರ ಹೊಂದಿದೆ. 2034 ರ ವೇಳೆಗೆ ಕರ್ನಾಟಕವನ್ನು ಭಾರತದ ಪ್ರಮುಖ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರವಾಗಿ ಪರಿವರ್ತಿಸುವ ನಮ್ಮ ಗುರಿಗೆ ಬಾಹ್ಯಾಕಾಶ ತಂತ್ರಜ್ಞಾ ನೀತಿ 2025-30 ಸಹಕಾರಿಯಾಗಲಿದೆ. ಹೊಸ ಸ್ಟಾರ್ಟ್ಅಪ್ ನೀತಿಯಿಂದ ಮುಂದಿನ ಐದು ವರ್ಷಗಳಲ್ಲಿ ಬಂಡವಾಳ ನೆರವು, ಮಾರುಕಟ್ಟೆ ಅವಕಾಶ, ಮೂಲಸೌಲಭ್ಯ, ಕೌಶಲ್ಯಾಭಿವೃದ್ಧಿಯಂತಹ ಕ್ರಮಗಳ ಮೂಲಕ 25,000 ಸ್ಟಾರ್ಟ್ಅಪ್‌ಗಳ ಸ್ಥಾಪನೆಗೆ ನೆರವಾಗುವ ಗುರಿಯನ್ನು ಸರಕಾರ ಹೊಂದಿದೆ ಎಂದರು.

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ಒಂದು ಸಮಾವೇಶಕ್ಕಿಂತಲೂ ಹೆಚ್ಚಾಗಿ ಹೊಸ ಹೊಸ ವಿಚಾರಗಳು, ಸಂವಾದಗಳು, ಬಂಡವಾಳ ಹೂಡಿಕೆ ಆವಿಷ್ಕಾರ ಮತ್ತು ಪರಿವರ್ತನೆಯ ಮನ್ವಂತರಕ್ಕೆ ವೇದಿಕೆಯಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಹಲವು ಉತ್ತಮ ಅವಕಾಶಗಳಿಗೆ ಜಾಗತಿಕ ವೇದಿಕೆಯಾಗಿ ಹೊಸ ಮುನ್ನುಡಿ ಬರೆಯಲಿ ಎಂದು ಹಾರೈಸುತ್ತೇನೆ ಎಂದರು.

ಈ ವರ್ಷದ ಧ್ಯೇಯವಾಕ್ಯ: "ಭವಿಷ್ಯೀಕರಣಗೊಳ್ಳಿ-ಅಜ್ಞಾತವನ್ನು ರೂಪಿಸುತ್ತಾ, ಊಹಿಸಿಲಾಗದ್ದನ್ನು ಅಳೆಯುತ್ತಾ , ಜಗತ್ತನ್ನು ಮುಂದೆ ಕೊಂಡೊಯ್ಯುವುದು" ಎಂಬುದಾಗಿದೆ. ಈ ಆಶಯ ನಮ್ಮ ಸಾಮೂಹಿಕ ಧ್ಯೇಯದ ಸಂಕಲ್ಪವನ್ನು ಎತ್ತಿ ಹಿಡಿಯುತ್ತದೆ. ಈ ಧ್ಯೇಯ ವಾಕ್ಯದ ಆಶಯದಂತೆ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ- 2025, ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ 600ಕ್ಕೂ ಹೆಚ್ಚು ಜಾಗತಿಕ ಭಾಷಣಕಾರರು, 1200ಕ್ಕೂ ಹೆಚ್ಚು ಪ್ರದರ್ಶಕರು, 60ಕ್ಕೂ ಹೆಚ್ಚು ದೇಶದ ನಿಯೋಗಗಳು ಮತ್ತು ಸಾವಿರಾರು ಪರಿಣತರು ಮುಂದಿನ ದಶಕಗಳಲ್ಲಿ ತಂತ್ರಜ್ಞಾನದ ರೂಪುರೇಷೆಗಳನ್ನು , ಹೊಸ ಸಾಧ್ಯತೆಗಳನ್ನು ಇಲ್ಲಿ ಸಂವಾದಿಸಿ, ಕೇವಲ ಕರ್ನಾಟಕಕ್ಕಾಗಲಿ ಅಥವಾ ಭಾರತಕ್ಕೆ ಆಗಲಿ ಮಾತ್ರವಲ್ಲ, ಇಡೀ ಜಗತ್ತಿಗೇ ತೆರೆದಿಡುತ್ತಾರೆ . ಬೆಂಗಳೂರು ತಂತ್ರಜ್ಞಾನ ಶೃಂಗಸಭೆ- 2025 ಪರಿವರ್ತನೆಯ ಹರಿಕಾರ ಎಂಬುದನ್ನು ಈಗಾಗಲೇ ಹೇಳಿದ್ದೇನೆ. ಇದು ಶೈಕ್ಷಣಿಕ ವಲಯವನ್ನು ಉದ್ಯಮಕ್ಕೆ ಬೆಸೆಯುತ್ತದೆ. ನವೋದ್ಯಮಗಳನ್ನು ಹೂಡಿಕೆದಾರರಿಗೆ ಪರಿಚಯಿಸುತ್ತದೆ. ಅನ್ಯ ದೇಶಗಳ ಪರಿಣಿತರನ್ನು ಸಂಶೋಧಕರನ್ನು, ನೀತಿ ನಿರೂಪಕರನ್ನು ಪರಸ್ಪರ ಬೆಸೆಯುವುದಲ್ಲದೇ, ಜಾಗತಿಕ ಮಾರುಕಟ್ಟೆಗಳನ್ನು ಸಂಪರ್ಕಿಸಲು ಬೃಹತ್ ವೇದಿಕೆಯಾಗಿದೆ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ ಎಂದರು.

ಕರ್ನಾಟಕವು ಜ್ಞಾನಕಾಶಿ ಎಂಬುದನ್ನು ಹೆಮ್ಮೆಯಿಂದ ಹೇಳುತ್ತೇನೆ‌. 85 ವಿಶ್ವವಿದ್ಯಾಲಯಗಳು, 243 ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಸುಮಾರು 1,800 ಐಟಿಐಗಳಿಗೆ ಕರ್ನಾಟಕ ನೆಲೆಯಾಗಿದೆ. ರಾಜ್ಯದ ನಿರುದ್ಯೋಗ ಪ್ರಮಾಣ 4.3% ರಷ್ಟು ಮಾತ್ರ ಇದ್ದು, ಇದು ರಾಜ್ಯದ ಸಮರ್ಥ ಉತ್ಪಾದಕತೆ ಮತ್ತು ಉದ್ಯೋಗಾವಕಾಶಗಳನ್ನು ಎತ್ತಿ ತೋರಿಸುತ್ತದೆ. ಬೆಂಗಳೂರು ನಗರವು IISc, IIM-B, IIIT-B, NCBS, JNCASR, NIMHANS, DRDO ಪ್ರಯೋಗಾಲಯಗಳು, ISRO ಕೇಂದ್ರಗಳು ಮತ್ತು ಹಲವಾರು ವಿಶ್ವ ದರ್ಜೆಯ ಖಾಸಗಿ ವಿಶ್ವವಿದ್ಯಾಲಯಗಳಂತಹ ಪ್ರಮುಖ ಸಂಸ್ಥೆಗಳ ತವರಾಗಿ, ಸಾಟಿಯಿಲ್ಲದ ಬೌದ್ಧಿಕ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ ಮತ್ತು ಪೋಷಿಸುತ್ತದೆ ಎಂಬುದು ಅತ್ಯಂತ ಮಹತ್ವದ ವಿಚಾರ ಎಂದು ಹೇಳಿದರು.

ಕ್ವಾಂಟಮ್ ತಂತ್ರಜ್ಞಾನಕ್ಕೆ ಒತ್ತು ನೀಡಿದ ಮೊದಲ ರಾಜ್ಯ ಕರ್ನಾಟಕ :

ಡೀಪ್ ಸೈನ್ಸ್ ಮತ್ತು ಸುಧಾರಿತ ಇಂಜಿನಿಯರಿಂಗ್ ವ್ಯವಸ್ಥೆ ಒದಗಿಸಲು ರಾಜ್ಯ ಬದ್ಧವಾಗಿದ್ದು, ಎಐ, ಸೈಬರ್-ಭದ್ರತೆ, ದತ್ತಾಂಶ ವಿಜ್ಞಾನ, ಅನಿಮೇಷನ್ ಮತ್ತು ರೊಬೊಟಿಕ್ಸ್ನಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.ಕ್ವಾಂಟಮ್ ತಂತ್ರಜ್ಞಾನದ ಮಾರ್ಗಸೂಚಿಗಳನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ‘ಬಿಯಾಂಡ್ ಬೆಂಗಳೂರು’ ಉಪಕ್ರಮದ ಮೂಲಕ ತಂತ್ರಜ್ಞಾನ ಆರ್ಥಿಕತೆಯ ವಿಕೇಂದ್ರೀಕರಣಕ್ಕೆ ಮುಂದಾಗಿರುವ ನಮ್ಮ ಸರ್ಕಾರ, ಮುಂದಿನ ಪೀಳಿಗೆಗಾಗಿ ಟೈರ್ 2 ನಗರಗಳನ್ನು ನಾವಿನ್ಯತೆಯ ಕ್ಲಸ್ಟರ್ ಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.

ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ- ಹೂಡಿಕೆದಾರರಿಗೆ ಸಿಎಂ ಕರೆ

ಈ ಎಲ್ಲ ಕ್ರಮಗಳು ಕೇವಲ ಆರ್ಥಿಕತೆಯನ್ನು ಕೇಂದ್ರೀಕರಿಸದೇ, ಸಮಾನ ಬೆಳವಣಿಗೆಗೂ ಬದ್ಧವಾಗಿವೆ. ರಾಜ್ಯದ ಪ್ರತಿ ಜಿಲ್ಲೆಯೂ ಹಾಗೂ ಯುವಪೀಳಿಗೆಯು ಡಿಜಿಟಲ್ ಯುಗಕ್ಕೆ ತೆರೆದುಕೊಳ್ಳುವ ಅವಕಾಶವನ್ನು ನೀಡಲಾಗಿದೆ. ನಮ್ಮ ಆಡಳಿತದ ಮಾದರಿಯು ಪಾರದರ್ಶಕತೆ, ನಿರೀಕ್ಷಿತ ನಡೆ ಹಾಗೂ ಸ್ಥಿರತೆಗೆ ಬದ್ಧವಾಗಿದೆ. ನಮ್ಮ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿ ಮುಂದುವರೆದಿದೆ. ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರವಾಗಲಿ, ಸ್ಟಾರ್ಟ್ ಅಪ್ ಆಗಲಿ, ಶೈಕ್ಷಣಿಕ ಸಂಶೋಧನೆಯಾಗಲಿ, ಯಾವುದೇ ಕ್ಷೇತ್ರದ ಬಂಡವಾಳ ಹೂಡಿಕೆ ಕರ್ನಾಟಕ ರಾಜ್ಯ ತಾಣವಾಗಿವೆ. ಎಐ , ಕ್ವಾಂಟಮ್ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ವಿಫುಲ ಅವಕಾಶಗಳನ್ನು ಬಳಸಿಕೊಂಡು ಮಾನವ ಪ್ರಗತಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X