Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ ಕರೆ

ವಾರ್ತಾಭಾರತಿವಾರ್ತಾಭಾರತಿ28 Dec 2025 5:47 PM IST
share
ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ ಕರೆ
"ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ; ಇದೊಂದು ನಿರಂತರ ಚಳುವಳಿ ಮತ್ತು ಸಿದ್ಧಾಂತ"

ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ, ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ , ಸಮಾನ ಅವಕಾಶಗಳನ್ನು ಎಲ್ಲರಿಗೂ ಕೊಡಬೇಕು ಎನ್ನುವ ಸಿದ್ಧಾಂತ ನಮ್ಮದು ಎಂದರು.

ರಾಷ್ಟ್ರಪಿತ ಗಾಂಧೀಜಿಯವರ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮ ಪಂಚಾಯಿತಿಯಿಂದ ರಾಜ್ಯ ಮಟ್ಟದವರೆಗೆ ಜನವರಿ 5 ರಿಂದ ನಿರಂತರವಾಗಿ ಆಂದೋಲನವನ್ನು ಪ್ರಾರಂಭಿಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು :

ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು. MGNAREGA ಕಾರ್ಯಕ್ರಮದಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು . ಕೇಂದ್ರ ಸರಕಾರ ರಾಜ್ಯಗಳ ಅನುದಾನವನ್ನು ಕೊಡುತ್ತಿತ್ತು. ಈಗ ಹೊಸ ಕಾಯ್ದೆ ಜಾರಿಗೆ ತಂದು, 60% ಕೇಂದ್ರ 40% ರಾಜ್ಯ ಸರಕರ ಕೊಡಬೇಕು ಎಂದು ತೀರ್ಮಾನಿಸಿದ್ದಾರೆ. ರಾಜ್ಯಗಳ ಮೇಲೆ ಭಾರಿ ಹೊರೆಯನ್ನೇ ಹೊರೆಸುತ್ತಿದ್ದಾರೆ. ಇದನ್ನು ವಿಫಲಗೊಳಿಸಬೇಕು ಎಂದರು.

ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷದವರು :

ಬ್ರಿಟಿಷ್ ಅಧಿಕಾರಿ ಎ.ಒ ಹ್ಯೂಮ್ ಅವರು ಕಾಂಗ್ರೆಸ್ ಪಕ್ಷವನ್ನು 1885ರಲ್ಲಿ ಪ್ರಾರಂಭಿಸಿ 148 ವರ್ಷಗಳಾಗಿವೆ. ಬ್ರಿಟಿಷ್ ಆಡಳಿತದ ದಬ್ಬಾಳಿಕೆಯ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾರಂಭವಾದ ಕಾಂಗ್ರೆಸ್ ನಾಗರಿಕರ ಹಕ್ಕುಗಳ ರಕ್ಷಣೆ, ನ್ಯಾಯಯುತ ಆಡಳಿತಕ್ಕಾಗಿ ಒತ್ತಾಯಿಸಿತು. ಮುಂಬೈ ನಲ್ಲಿ ಮಾಡಲಾ ಅಧಿವೇಶನ ಪ್ರಾರಂಭವಾದ ನಂತರ ನಿಧಾನವಾಗಿ ಬೆಳಕನ್ನು ಕಾಣುವಂತಾಯಿತು. 1915 ರಲ್ಲಿ ಮಹಾತ್ಮಾ ಗಾಂಧಿಯವರನ್ನು ಗೋಖಲೆಯವರು ಭಾರತದಲ್ಲಿ ಸ್ವಾತಂತ್ರ್ಯ ಹೋರಾಟದ ನಾಯಕತ್ವವನ್ನು ವಹಿಸಲು ಗಾಂಧಿಯವರನ್ನು ಆಹ್ವಾನಿಸುತ್ತಾರೆ. ಡಿಸೆಂಬರ್ 28 ಐತಿಹಾಸಿಕ ದಿನವಾಗಿದ್ದು, ಅದನ್ನು ಮರೆಯಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೆ ಅದಕ್ಕೆ ಕಾಂಗ್ರೆಸ್ ಕಾರಣ. ಜನಸಂಘ, ಆರೆಸ್ಸೆಸ್‌, ಹಿಂದೂ ಮಹಾ ಸಭಾ , ಬಿಜೆಪಿ ಸಂಘಟನೆಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಸ್ವಾತಂತ್ರ್ಯ ಹೋರಾಟದ ವಾರಸುದಾರರು ಕಾಂಗ್ರೆಸ್ ಪಕ್ಷ ಎಂದರು.

ದೇಶ ಮತ್ತು ಸಮಾಜ ಒಡೆಯುದೇ ಕೆಲಸವೇ ಬಿಜೆಪಿಯ ಸಾಧನೆ :

ಕಾಂಗ್ರೆಸ್ ನವರು ಎನ್ನುವುದೇ ನಮಗೆ ಹೆಮ್ಮೆಯ ಸಂಗತಿ. ಆಧುನಿಕ ಭಾರತದ ರೂವಾರಿ ಜವಾಹರ್ ಲಾಲ್ ನೆಹರೂ ಅವರು. ಜೈ ಜವಾನ್ ಜೈ ಕಿಸಾನ್ ಘೋಷಣೆ ನೀಡಿದ್ದು ಲಾಲ್ ಬಹದ್ದೂರ್ ಶಾಸ್ತ್ರಿ, ಸಾಮಾಜಿಕ ನ್ಯಾಯ ರೂವಾರಿ ಇಂದಿರಾ ಗಾಂಧಿ, ಗರೀಬಿ ಹಠಾವೋ ಎನ್ನುವುದು ಕೇವಲ ಘೋಷಣೆಯಲ್ಲ. ಅದಕ್ಕೆ ಪೂರಕವಾಗಿ 20 ಅಂಶದ ಕಾರ್ಯಕ್ರಮವನ್ನು ನೀಡಿದರು. ಆಹಾರದಲ್ಲಿ ಸ್ವಾವಲಂಬನೆ ಬರಲು ಇಂದಿರಾ ಗಾಂಧಿ ಹಾಗೂ ಜಗಜೀವನ ರಾಮ್ ಅವರು ಕಾರಣ. 21 ನೇ ಶತಮಾನಕ್ಕೆ ಸೂಕ್ತ ಕೊಡುಗೆಗಳನ್ನು ನೀಡಿದ್ದು ರಾಜೀವ್ ಗಾಂಧಿ. ಬಿಜೆಪಿಯ ಸಾಧನೆ ಏನೆಂದರೆ, ದೇಶ ಮತ್ತು ಸಮಾಜ ಒಡೆಯುವ ಕೆಲಸ ಎಂದರು.

MGNAREGA ಹೆಸರು ಬದಲಾವಣೆ: ಪ್ರಧಾನಮಂತ್ರಿಗಳ ಕಚೇರಿಯಿಂದಲೇ ತೀರ್ಮಾನ :

ರಾಜಕೀಯದಲ್ಲಿ ಅಧಿಕಾರ ಬರುತ್ತೆ ಹೋಗುತ್ತದೆ, ಆದರೆ ಬಿಜೆಪಿಯವರು ಅಧಿಕಾರ ಹಿಡಿಯಲು ಮತಗಳ್ಳತನ ಸೇರಿದಂತೆ ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ. MGNAREGA ಹೆಸರು ಬದಲಾವಣೆ ಮಾಡಿದ್ದರೂ ಮಹಾತ್ಮಾ ಗಾಂಧಿ ಹೆಸರು ಶಾಶ್ವತ. ಕಾರ್ಯಕ್ರಮದ ಹೆಸರು ಬದಲಾವಣೆ ಮಾಡಿದ್ದ ತಕ್ಷಣ ಅವರ ಹೆಸರನ್ನು ಅಳಿಸಲು ಸಾಧ್ಯವೇ. ಮನಮೋಹನ್ ಸಿಂಗ್ ಹಾಗೂ ಸೋನಿಯಾ ಗಾಂಧಿ ಅವರು ರೂಪಿಸಿದ ಕಾರ್ಯಕ್ರಮ 2005 ರಿಂದ ಇಂದಿನವರೆಗೂ ಇತ್ತು. ಈಗ ಬದಲಾಯಿಸಿದ್ದಾರೆ. ಇದು ಸಚಿವ ಸಂಪುಟದಲ್ಲಿ ತೀರ್ಮಾನವಾಗಿಲ್ಲ. ಪ್ರಧಾನಮಂತ್ರಿಗಳ ಕಚೇರಿಯಿಂದಲೇ ತೀರ್ಮಾನವಾಗಿದೆ. ಸಂಬಂಧಪಟ್ಟ ಇಲಾಖೆ ಸಚಿವರಿಗೂ ಇದರ ಬಗ್ಗೆ ತಿಳಿಲಿಲ್ಲ. ಇದನ್ನು ಉಳಿಸಿಕೊಳ್ಳುವ ರಕ್ಷಿಸುವ ಕರ್ತವ್ಯ ನಮ್ಮದು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್, ಇಂಧನ ಸಚಿವ ಕೆ. ಜೆ.ಜಾರ್ಜ್, ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X