Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೀರ್ಘಾವಧಿ ಸಿಎಂ | ಜನರ ಸೇವೆಗೆ...

ದೀರ್ಘಾವಧಿ ಸಿಎಂ | ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 Jan 2026 7:39 PM IST
share
ದೀರ್ಘಾವಧಿ ಸಿಎಂ | ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ ಎನ್ನುವ ಕಾರಣಕ್ಕೆ ನನ್ನ ಹೃದಯದಲ್ಲಿ ಅವರಿಗೆ ವಿಶೇಷವಾದ ಸ್ಥಾನ ಇದೆ ಎಂದು ಸ್ಮರಿಸಿದ್ದಾರೆ.

ಸಾಮಾಜಿಕ ನ್ಯಾಯದ ಬಂಡಿಯ ಪಯಣಕ್ಕೆ ಕರ್ನಾಟಕದಲ್ಲಿ ದೀರ್ಘ ಪರಂಪರೆ ಇದೆ. ಬಸವಣ್ಣನವರಿಂದ ಪ್ರಾರಂಭಗೊಂಡು ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಡಿ.ದೇವರಾಜ ಅರಸು ವರೆಗೆ ಹಲವಾರು ಮಹನೀಯರು ಈ ಬಂಡಿಯನ್ನು ಎಳೆದುಕೊಂಡು ಬಂದಿದ್ದಾರೆ. ಇದನ್ನು ಇನ್ನಷ್ಟು ಮುಂದಕ್ಕೆ ಎಳೆದುಕೊಂಡು ಹೋಗುವ ಅವಕಾಶ ನನಗೆ ಸಿಕ್ಕಿದೆ. ಈ ಅವಕಾಶವನ್ನು ಬದಲಾಗಿರುವ ಸಾಮಾಜಿಕ ಮತ್ತು ರಾಜಕೀಯದ ಸ್ಥಿತ್ಯಂತರಗಳ ಇತಿ-ಮಿತಿಯಲ್ಲಿ ಜವಾಬ್ದಾರಿಯಾಗಿ ನಾನು ಸ್ವೀಕರಿಸಿ, ಮುನ್ನಡೆಯುತ್ತಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಧಿಕಾರ, ಸಂಪತ್ತು ಮತ್ತು ಅವಕಾಶಗಳ ಹೆಬ್ಬಾಗಿಲನ್ನು ಸರ್ವರಿಗೂ ತೆರೆದು ಸಮಾನವಾಗಿ ಹಂಚಿಕೆ ಮಾಡದ ಹೊರತು ಸುಸ್ಥಿರವಾದ ಅಭಿವೃದ್ದಿಯನ್ನು ಕಾಣಲು ಸಾಧ್ಯ ಇಲ್ಲ ಎನ್ನುವುದು ಅರಸರ ಅಚಲ ನಂಬಿಕೆಯಾಗಿತ್ತು. ಇದಕ್ಕಾಗಿಯೇ ಅವಕಾಶ ವಂಚಿತ ಸಮುದಾಯಗಳಿಗೆ ಸೇರಿರುವ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದರು ಎಂದು ಅವರು ಬಣ್ಣಿಸಿದ್ದಾರೆ.

ಭೂಸುಧಾರಣೆಯ ಮೂಲಕ ಸಂಪತ್ತಿನ ಸಮಾನ ಹಂಚಿಕೆಯ ಪ್ರಕ್ರಿಯೆ ಪ್ರಾರಂಭಿಸಿದರು. ಮೀಸಲಾತಿಯ ಮೂಲಕ ವಂಚಿತ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೂಡಾ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ಮಾಡಿದರು. ಜನಪ್ರತಿನಿಧಿಗಳೆಲ್ಲರಿಗೂ ಈ ಸಾಧನೆ ಪ್ರೇರಣೆಯಾಗಬೇಕು. ಇಂದಿನ ದಿನದ ವಿಶೇಷ ಸಂದರ್ಭದಲ್ಲಿ ನಮಗೆಲ್ಲ ಪ್ರೇರಣಾದಾಯಿಗಳು ಮತ್ತು ಪೂಜನೀಯರೂ ಆಗಿರುವ ಡಿ.ದೇವರಾಜ ಅರಸು ಅವರಿಗೆ ನಾನು ಗೌರವದ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ.

ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು… pic.twitter.com/oVV1gv2sHb

— Siddaramaiah (@siddaramaiah) January 6, 2026

Tags

Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X