Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶದ ಯುವಕರ ಆಕ್ರೋಶವನ್ನು ಬಂಧಿಸಲು...

ದೇಶದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ21 July 2026 10:17 PM IST
share
ದೇಶದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ : ಸಿದ್ದರಾಮಯ್ಯ

ಬೆಂಗಳೂರು : ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಇತರ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಯನ್ನು ವಿರೋಧಿಸಿ ಪ್ರಧಾನಮಂತ್ರಿಯವರ ನಿವಾಸದ ಸಮೀಪ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಪ್ರತಿಭಟನಾಕಾರರನ್ನು, ವಿಶೇಷವಾಗಿ ರಾಹುಲ್ ಗಾಂಧಿ ಸೇರಿದಂತೆ ಇತರ ನಾಯಕರನ್ನು ತಳ್ಳಾಡಿ, ಅವರೊಂದಿಗೆ ದುರ್ವರ್ತನೆ ನಡೆಸಿರುವ ದೃಶ್ಯಗಳು ಅತ್ಯಂತ ಆತಂಕಕಾರಿ ಹಾಗೂ ಖಂಡನೀಯ. ಮೊದಲು ಮೋದಿ ಸರ್ಕಾರ ಯುವಕರ ಪ್ರಶ್ನೆಗಳಿಗೆ ಲಾಠಿ ಮತ್ತು ಅಶ್ರುವಾಯು ಮೂಲಕ ಉತ್ತರ ನೀಡಿತು. ಈಗ, ಇದರ ವಿರುದ್ಧ ದನಿಯೆತ್ತಿದ ಜನಪ್ರತಿನಿಧಿಗಳ ವಿರುದ್ಧವೇ ಪೊಲೀಸರನ್ನು ಬಳಸುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಆಯ್ಕೆಯಾಗಿರುವ ಸರ್ಕಾರದ ನಡೆ ಅಲ್ಲ. ಬದಲಿಗೆ ವಿದ್ಯಾರ್ಥಿಗಳಿಂದ, ಪ್ರಶ್ನೆಗಳಿಂದ ಮತ್ತು ಶಾಂತಿಯುತ ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಗೆ ಬೆದರಿಕೂತ ಹೇಡಿ ಸರ್ಕಾರದ ಪ್ರತಿಕ್ರಿಯೆಯಾಗಿದೆ ಎಂದು ವ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರು ಪರೀಕ್ಷಾ ಅಕ್ರಮಗಳು, ನಿರುದ್ಯೋಗ ಹೀಗೆ ಯುವ ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಬಂಧಿಸುವುದರಿಂದ ಅಥವಾ ಅವರೊಂದಿಗೆ ದುರ್ವರ್ತನೆ ತೋರುವುದರಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಮರೆಮಾಚಲು ಸಾದ್ಯವಿಲ್ಲ. ಹಾಗೆಯೇ, ಕೇಂದ್ರ ಸರ್ಕಾರ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪೊಲೀಸ್ ಬಲವನ್ನು ಬಳಸುವುದನ್ನು ತಕ್ಷಣ ನಿಲ್ಲಿಸಿ, ದೇಶದ ಜನರಿಗೆ ಉತ್ತರ ನೀಡಬೇಕು. ಭಾರತದ ಯುವಜನತೆಗೆ ದಮನವಲ್ಲ; ನ್ಯಾಯ, ಹೊಣೆಗಾರಿಕೆ ಮತ್ತು ಗೌರವ ಬೇಕಾಗಿದೆ ಎಂಬುದನ್ನು ಮೋದಿಯವರು ಅರಿತು ವರ್ತಿಸಲಿ. ನಾವು ವಿದ್ಯಾರ್ಥಿಗಳ ಜೊತೆಗೆ ಹಾಗೂ ನ್ಯಾಯಕ್ಕಾಗಿ ಧ್ವನಿ ಎತ್ತುವ ಪ್ರತಿಯೊಂದು ಪ್ರಜಾಸತ್ತಾತ್ಮಕ ಧ್ವನಿಯೊಂದಿಗೂ ದೃಢವಾಗಿ ನಿಲ್ಲುತ್ತೇವೆ. ವಿರೋಧ ಪಕ್ಷದ ನಾಯಕರನ್ನು ಬಂಧಿಸಬಹುದು. ಆದರೆ ಸತ್ಯವನ್ನಾಗಲಿ, ಭಾರತದ ಯುವಕರ ಆಕ್ರೋಶವನ್ನಾಗಲಿ ಬಂಧಿಸಲು ಸಾಧ್ಯವಿಲ್ಲ. ಅದು ಜ್ವಾಲಾಮುಖಿಯಂತೆ ಹಬ್ಬಿ ನರೇಂದ್ರ ಮೋದಿಯವರ ಸುಳ್ಳಿನ ಕೋಟೆಯನ್ನು ಸುಟ್ಟು ಬೂದಿ ಮಾಡಲಿದೆ ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಶ್ರೀಮತಿ ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಇತರ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಯನ್ನು ವಿರೋಧಿಸಿ ಪ್ರಧಾನಮಂತ್ರಿಯವರ ನಿವಾಸದ ಸಮೀಪ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು… pic.twitter.com/V0Igq9gKSX

— Siddaramaiah (@siddaramaiah) July 21, 2026

Tags

Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X