Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ...

ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವೀಡಿಯೊ ಪ್ರಕಟಿಸದಂತೆ ಮಾಧ್ಯಮಗಳಿಗೆ ಕೋರ್ಟ್ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ13 Oct 2026 7:36 PM IST
share
ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವೀಡಿಯೊ ಪ್ರಕಟಿಸದಂತೆ ಮಾಧ್ಯಮಗಳಿಗೆ ಕೋರ್ಟ್ ನಿರ್ಬಂಧ

ಬೆಂಗಳೂರು : ಹನಿಟ್ರ್ಯಾಪ್ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಳಕು ಹಾಕಿ ಪ್ರಸಾರ ಮಾಡಲಾಗಿರುವ ಎರಡು ಆಕ್ಷೇಪಾರ್ಹ ವೀಡಿಯೊಗಳನ್ನು ಪ್ರಕಟಿಸದಂತೆ 42 ಮಾಧ್ಯಮ ಸಂಸ್ಥೆಗಳು, ಡಿಜಿಟಲ್ ವೇದಿಕೆಗಳು ಹಾಗೂ ಇತರ ಪ್ರತಿವಾದಿಗಳನ್ನು ನಿರ್ಬಂಧಿಸಿ ಬೆಂಗಳೂರಿನ ನ್ಯಾಯಾಲಯವು ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಕುರಿತು ನಗರದ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ. ಪುಷ್ಪಾಂಜಲಿ ಅವರು ಮಂಗಳವಾರ ಈ ಆದೇಶ ಹೊರಡಿಸಿದ್ದಾರೆ.

ಸೆಪ್ಟಂಬರ್ 27 ಮತ್ತು ಅಕ್ಟೋಬರ್ 2ರಂದು ಪ್ರಕಟಿಸಲಾದ ಎರಡು ವೀಡಿಯೊಗಳನ್ನು ಪ್ರಸಾರ ಮಾಡುವುದು, ಮರುಪ್ರಸಾರ ಮಾಡುವುದು ಅಥವಾ ಇತರ ಯಾವುದೇ ರೀತಿಯಲ್ಲಿ ಪ್ರಸಾರ ಮಾಡುವುದನ್ನು ನ್ಯಾಯಾಲಯ ನಿರ್ಬಂಧಿಸಿದೆ. ಅಲ್ಲದೆ, ಆ ವೀಡಿಯೊಗಳ ತುಣುಕುಗಳು, ಆಯ್ದ ಭಾಗಗಳು, ಸ್ಕ್ರೀನ್‌ಶಾಟ್‌ಗಳು, ಲಿಪ್ಯಂತರಗಳು ಹಾಗೂ ಸಂಪಾದಿತ ಆವೃತ್ತಿಗಳನ್ನು ಪ್ರಕಟಿಸದಂತೆಯೂ ಪ್ರತಿವಾದಿ ಮಾಧ್ಯಮಗಳಿಗೆ ನ್ಯಾಯಾಲಯ ನಿರ್ದೇಶಿಸಿದೆ.

ಸಂಬಂಧಿತ ಡಿಜಿಟಲ್ ವೇದಿಕೆಗಳಲ್ಲಿ ಈ ವಿಷಯವನ್ನು ತೆಗೆದುಹಾಕುವುದು ಮತ್ತು ಅದಕ್ಕೆ ಪ್ರವೇಶವನ್ನು ನಿರ್ಬಂಧಿಸುವಂತೆ ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ. ಜತೆಗೆ, ವಿವಾದಿತ ವೀಡಿಯೊಗಳು ಮತ್ತು ಸಂಬಂಧಿತ ವಿಷಯವನ್ನು ಭವಿಷ್ಯದಲ್ಲಿ ಪ್ರಕಟಿಸುವುದಕ್ಕೆ ಶಾಶ್ವತ ತಡೆ ನೀಡುವಂತೆಯೂ ಮನವಿ ಮಾಡಿದ್ದಾರೆ.

ಫ್ರೀಡಂ ಟಿವಿ ಕನ್ನಡ, ‘ಕರ್ನಾಟಕ ಹನಿಟ್ರ್ಯಾಪ್’ ಎಂಬ ಯೂಟ್ಯೂಬ್ ಚಾನೆಲ್, ಹಲವು ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳು, ಟಿವಿ ಸುದ್ದಿ ವಾಹಿನಿಗಳು ಸೇರಿದಂತೆ ಒಟ್ಟು 42 ಪ್ರತಿವಾದಿಗಳನ್ನು ಮೊಕದ್ದಮೆಯಲ್ಲಿ ಹೆಸರಿಸಲಾಗಿದೆ. ಜತೆಗೆ, ವಾಟ್ಸ್‌ಆ್ಯಪ್, ಯೂಟ್ಯೂಬ್ ಎಲ್‌ಎಲ್‌ಸಿ, ಗೂಗಲ್ ಇಂಡಿಯಾ, ಯಾಹೂ ಇಂಡಿಯಾ ಮತ್ತು ಫೇಸ್‌ಬುಕ್ ಇಂಡಿಯಾವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಸಿದ್ದರಾಮಯ್ಯ ಅರ್ಜಿಯಲ್ಲೇನಿದೆ?: ಸೆಪ್ಟಂಬರ್ 27ರಂದು ‘‘ಕರ್ನಾಟಕ ಹನಿ ಟ್ರ್ಯಾಪ್ ನೆಕ್ಸಸ್ ಪಾರ್ಟ್ 1’’ ಎಂಬ ಶೀರ್ಷಿಕೆಯಡಿ ‘ಕರ್ನಾಟಕ ಹನಿಟ್ರ್ಯಾಪ್’ ಯೂಟ್ಯೂಬ್ ಚಾನೆಲ್‌ನಲ್ಲಿ ಮೊದಲ ವೀಡಿಯೊ ಪ್ರಕಟಿಸಲಾಗಿತ್ತು ಎಂದು ಸಿದ್ದರಾಮಯ್ಯ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಈ ವೀಡಿಯೊ ಮತ್ತು ಅದರೊಂದಿಗೆ ಪ್ರಕಟಿಸಲಾದ ಬರಹವು ತಮ್ಮನ್ನು ಬ್ಲ್ಯಾಕ್‌ಮೇಲ್ ಮಾಡುವುದಾಗಿದೆ. ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯ ರಾಜಕೀಯ ಬೆಳವಣಿಗೆಗಳಿಗೂ ಈ ವಿಚಾರಕ್ಕೂ ಸಂಬಂಧವಿದೆ ಎಂಬ ರೀತಿಯಲ್ಲಿ ಬಿಂಬಿಸಲು ಪ್ರಯತ್ನಿಸಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ತಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲಾಗಿತ್ತೇ ಮತ್ತು ಈ ವರ್ಷದ ಆರಂಭದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಆಕ್ಷೇಪಾರ್ಹ ವಿಷಯಗಳು ಕಾರಣವಾಗಿದ್ದವೇ ಎಂಬ ಪ್ರಶ್ನೆಗಳನ್ನು ವೀಡಿಯೊದ ವಿವರಣೆಯಲ್ಲಿ ಎತ್ತಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅವು ಸುಳ್ಳು ಮತ್ತು ಆಧಾರರಹಿತವಾಗಿದ್ದು, ತಮ್ಮ ವ್ಯಕ್ತಿತ್ವ, ಪ್ರತಿಷ್ಠೆ ಹಾಗೂ ರಾಜಕೀಯ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವ ಉದ್ದೇಶ ಹೊಂದಿವೆ ಎಂದು ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.

ಅಕ್ಟೋಬರ್ 2, 2026ರಂದು ಫ್ರೀಡಂ ಟಿವಿ ಕನ್ನಡದಲ್ಲಿ ‘ಲೈವ್: ಬಿಗ್ಗೆಸ್ಟ್ ಸೀಡಿ ಬ್ಲಾಸ್ಟ್ ಇನ್ ಕರ್ನಾಟಕ ಪಾಲಿಟಿಕ್ಸ್?’ ಎಂಬ ಶೀರ್ಷಿಕೆಯಡಿ ಸುಮಾರು ಒಂದು ಗಂಟೆಯ ಕಾರ್ಯಕ್ರಮವನ್ನು ಪ್ರಸಾರ ಮಾಡಲಾಗಿತ್ತು ಅಥವಾ ಅಪ್‌ಲೋಡ್ ಮಾಡಲಾಗಿತ್ತು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಆ ಕಾರ್ಯಕ್ರಮದಲ್ಲಿ ವಿವಾದವನ್ನು ಸಂಚಲನಕಾರಿಯಾಗಿ ಬಿಂಬಿಸಲಾಗಿತ್ತು. ಆಕ್ಷೇಪಾರ್ಹ ಸೀಡಿ ಇದೆ ಎಂದು ಪದೇಪದೇ ಉಲ್ಲೇಖಿಸುವುದರ ಜೊತೆಗೆ, ಆರೋಪಗಳಿಗೆ ಪೂರಕವಾದ ಸ್ವತಂತ್ರವಾಗಿ ಪರಿಶೀಲಿಸಬಹುದಾದ ಸಾಕ್ಷ್ಯವನ್ನು ಪ್ರದರ್ಶಿಸದೆ ಪ್ರಮುಖ ರಾಜಕೀಯ ನಾಯಕನೊಬ್ಬರ ಭಾಗಿಯಾಗಿರುವ ಬಗ್ಗೆ ಸೂಚನೆ ನೀಡಲಾಗಿತ್ತು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಅಪ್ರಾಪ್ತ ವಯಸ್ಸಿನಲ್ಲಿದ್ದಾಗ, ಅಂದರೆ 2011ರ ಆಸುಪಾಸಿನಲ್ಲಿ ತಮ್ಮ ಮೇಲೆ ಲೈಂಗಿಕ ಶೋಷಣೆ ನಡೆದಿದೆ ಎಂದು ಮಹಿಳೆಯೊಬ್ಬರು ಹೇಳಿಕೊಂಡಿದ್ದಾರೆ ಎನ್ನಲಾದ ಧ್ವನಿಮುದ್ರಣವನ್ನೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಆ ಮಹಿಳೆ ಆರೋಪಿತ ವ್ಯಕ್ತಿಯಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಹೇಳಿರುವುದಾಗಿ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.

ಈ ಆರೋಪಗಳನ್ನು ಸಮರ್ಥಿಸುವ ಸಮಕಾಲೀನ ದೂರು, ಸ್ವತಂತ್ರ ಸಾಕ್ಷಿಗಳ ಹೇಳಿಕೆ ಅಥವಾ ಪರಿಶೀಲಿಸಬಹುದಾದ ಇತರ ಸಾಕ್ಷ್ಯಗಳು ಲಭ್ಯವಿಲ್ಲ ಎಂದು ಸಿದ್ದರಾಮಯ್ಯ ವಾದಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ದಾಖಲಿಸಿದ ಹಾಗೂ ಪ್ರಸ್ತುತಪಡಿಸಿದ ರೀತಿಯ ಬಗ್ಗೆಯೂ ಪ್ರಶ್ನೆ ಎತ್ತಿದ್ದಾರೆ. ನಿರ್ದಿಷ್ಟವಾದ ನಿರೂಪಣೆಯನ್ನು ಹೊರತರಲು ಅನುಕೂಲವಾಗುವ ರೀತಿಯಲ್ಲಿ ಪ್ರಶ್ನೆಗಳನ್ನು ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ವೀಡಿಯೊಗಳನ್ನು ಪ್ರಕಟಿಸಿದ ಸಮಯ ಮತ್ತು ಅವುಗಳೊಂದಿಗೆ ನೀಡಲಾದ ರಾಜಕೀಯ ವ್ಯಾಖ್ಯಾನಗಳು ಸಾರ್ವಜನಿಕ ವಲಯದಲ್ಲಿ ತಮ್ಮ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶ ಹೊಂದಿವೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪರವಾಗಿ ತಾತ್ಕಾಲಿಕ ಪ್ರತಿಬಂಧಕಾದೇಶದ ಮೂಲಕ ಮಾಧ್ಯಮಗಳನ್ನು ನಿರ್ಬಂಧಿಸಿರುವ ನ್ಯಾಯಾಲಯವು ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದೆ.

Tags

Siddaramaiahsting operation
share
ವಾರ್ತಾಭಾರತಿ
ವಾರ್ತಾಭಾರತಿ
Next Story
X