Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕುಮಾರಸ್ವಾಮಿ ಪ್ರಧಾನಿಯನ್ನು ಟೀಕಿಸುವಾಗ...

ಕುಮಾರಸ್ವಾಮಿ ಪ್ರಧಾನಿಯನ್ನು ಟೀಕಿಸುವಾಗ ಯಾಕೆ ಕಿವಿ ಹಿಂಡಿ ಬುದ್ದಿ ಹೇಳಿರಲಿಲ್ಲ?: ದೇವೇಗೌಡ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

"ಎಚ್.ಡಿ. ದೇವೇಗೌಡರ ಹೇಳಿಕೆ ಕನಿಕರ ಉಂಟು ಮಾಡಿದೆ"

ವಾರ್ತಾಭಾರತಿವಾರ್ತಾಭಾರತಿ15 April 2024 7:23 PM IST
share
ಕುಮಾರಸ್ವಾಮಿ ಪ್ರಧಾನಿಯನ್ನು ಟೀಕಿಸುವಾಗ ಯಾಕೆ ಕಿವಿ ಹಿಂಡಿ ಬುದ್ದಿ ಹೇಳಿರಲಿಲ್ಲ?: ದೇವೇಗೌಡ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ‘ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು’ ಎಂಬ ನಿಮ್ಮ (ಎಚ್.ಡಿ. ದೇವೇಗೌಡ)ರ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ, ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿ, ಒಂದು ಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರಕಾರ ಮತ್ತು ಪ್ರಧಾನಮಂತ್ರಿಯನ್ನು ಟೀಕಿಸುತ್ತಾ ಬಂದವರು. ಇದೀಗ ಈ ಇಳಿವಯಸ್ಸಿನಲ್ಲಿ ಈ ಬಗೆಯ ಶರಣಾಗತಿಯ ಸ್ಥಿತಿ ಯಾಕೆ ಬಂತು? ಎಂದು ಪ್ರಶ್ನಿಸಿದ್ದಾರೆ.

ದೇವೇಗೌಡರೇ, ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು. ಎರಡೂ ಪದವಿಗಳು ಸಮಾನವಾದುದು, ವಯಸ್ಸಿನ ಹಿರಿ-ಕಿರಿತನಗಳು ಪದವಿಗಳಿಗೆ ಅನ್ವಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಅತಿ ಸಣ್ಣ ವಯಸ್ಸಿಗೆ ಪ್ರಧಾನಿಯಾದ ರಾಜೀವ್ ಗಾಂಧಿಯವರಿದ್ದಾಗಲೂ ಅವರಿಗಿಂತ ಹಿರಿಯರಾದ ಮುಖ್ಯಮಂತ್ರಿಗಳೂ ಇದ್ದರು. ಆಗಲೂ ಪರಸ್ಪರ ಟೀಕೆ-ಟಿಪ್ಪಣಿಗಳು ವಿನಿಮಯವಾಗುತ್ತಿದ್ದವು. ಇಲ್ಲಿಯವರೆಗೆ ಯಾರೂ ಕೂಡಾ ನಿಮ್ಮ ರೀತಿಯ ಉಪದ್ವಾಪ್ಯತನದ ಪ್ರಶ್ನೆಗಳನ್ನು ಎತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ದೇವೇಗೌಡರೇ, ನೀವು ಹಿಂದಿನ ಪ್ರಧಾನಿಗಳನ್ನು ಯಾವ ಯಾವ ರೀತಿಯಲ್ಲಿ ಪ್ರಶ್ನಿಸಿದ್ದೀರಿ, ದೂರಿದ್ದೀರಿ, ಕೆಣಕಿದ್ದೀರಿ ಎನ್ನುವ ಪಟ್ಟಿಯನ್ನು ನಾನು ನಿಮಗೆ ಕೊಡಬಲ್ಲೆ. 2002ರ ಗುಜರಾತ್ ಗಲಭೆಯ ಬಗ್ಗೆ ಲೋಕಸಭೆಯಲ್ಲಿ ನಡುರಾತ್ರಿ ವರೆಗೆ ನಡೆದ ಚರ್ಚೆಯಲ್ಲಿ ನೀವು ಆಗಿನ ಪ್ರಧಾನಿ ಅಟಲ್‍ಬಿಹಾರಿ ವಾಜಪೇಯಿ ವಿರುದ್ಧ ಪ್ರಯೋಗ ಮಾಡಿರುವ ಟೀಕಾಸ್ತ್ರಗಳು ಸದನದ ದಾಖಲೆಯಲ್ಲಿರಬಹುದು. ಇದನ್ನು ಈಗಲೂ ನಾನು ತಪ್ಪೆಂದು ಹೇಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಇವೆಲ್ಲವೂ ಸಂಸದೀಯ ಪ್ರಜಾಪ್ರಭುತ್ವದ ನಡವಳಿಕೆಗಳ ಭಾಗವಾಗಿರುತ್ತದೆ. ಆಗ ನೀವು ಮುಖ್ಯಮಂತ್ರಿಯೂ ಆಗಿರಲಿಲ್ಲ, ನೀವು ಕೇವಲ ಒಂದು ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿದ್ದವರು. ಆಗ ಈ ನೂರು ಕೋಟಿ, ಆರು ಕೋಟಿ ವ್ಯತ್ಯಾಸಗಳು ಬಾಧಿಸಿರಲಿಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದೇವೇಗೌಡರೇ, ಕೆಲವೇ ತಿಂಗಳುಗಳ ಹಿಂದೆ ನರೇಂದ್ರ ಮೋದಿ ಅವರಿಗಿಂತ ಕನಿಷ್ಠ ಹತ್ತು ವರ್ಷ ಸಣ್ಣವರಾಗಿರುವ ಮತ್ತು ಕೇವಲ ಒಬ್ಬ ಶಾಸಕರಾಗಿರುವ ನಿಮ್ಮ ಮಗ ಎಚ್.ಡಿ.ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವ ಭಾಷೆ ಬಳಸಿ ತರಾಟೆಗೆ ತೆಗೆದುಕೊಂಡಿದ್ದರೆನ್ನುವುದನ್ನು ನಾಡಿನ ಜನ ಇನ್ನೂ ಮರೆತಿಲ್ಲ, ನಿಮ್ಮ ನೆನಪಲ್ಲಿಯೂ ಇರಬಹುದು ಎಂದು ಅವರು ತಿಳಿಸಿದ್ದಾರೆ.

ಆಗ ಯಾಕೆ ನೀವು ನೂರು ಕೋಟಿ ಜನರನ್ನು ಪ್ರತಿನಿಧಿಸುವ ಪ್ರಧಾನಮಂತ್ರಿಯನ್ನು ಟೀಕಿಸಬಾರದು ಎಂದು ಮಗನಿಗೆ ಕಿವಿ ಹಿಂಡಿ ಬುದ್ದಿ ಹೇಳಿರಲಿಲ್ಲ? ಇವೆಲ್ಲವೂ ಅನುಕೂಲಶಾಸ್ತ್ರ ಅಷ್ಟೇ ಎನ್ನುವುದು ರಾಜ್ಯದ ಜನರಿಗೆ ತಿಳಿದಿದೆ. ರಾಜ್ಯ ಸರಕಾರಕ್ಕೆ ಅನ್ಯಾಯವಾದಾಗ ಅದನ್ನು ವಿರೋಧಿಸಿ ಕೇಂದ್ರ ಸರಕಾರ ಮತ್ತು ಪ್ರಧಾನಿಯನ್ನು ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ದೇಶ ಕಂಡ ಅತ್ಯಂತ ಸಭ್ಯ ಮತ್ತು ಗೌರವಾರ್ಹ ರಾಜಕೀಯ ನಾಯಕ ಮನಮೋಹನ್ ಸಿಂಗ್ ವಿರುದ್ಧ ಯಾವ ಭಾಷೆ ಬಳಸಿದ್ದರೆನ್ನುವುದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ. ನೀವು ಪ್ರಧಾನಿಯಾಗಿದ್ದಾಗ ಕನ್ನಡಿಗರು ಎದೆಯುಬ್ಬಿಸಿ ಖುಷಿಪಟ್ಟರು. ನೀವು ರಾಜ್ಯದ ನೆಲ-ಜಲ-ಭಾಷೆಯ ರಕ್ಷಣೆಗಾಗಿ ಕೇಂದ್ರ ಸರಕಾರದ ವಿರುದ್ಧ ಆಯಾ ಕಾಲಗಳ ಪ್ರಧಾನಿಗಳ ವಿರುದ್ಧ ಹೋರಾಟಕ್ಕಿಳಿದಾಗಲೂ ಕನ್ನಡಿಗರು ನಿಮ್ಮನ್ನು ತಲೆಮೇಲೆ ಕೂರಿಸಿ ಕೊಂಡಾಡಿದರು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳು ತಮ್ಮ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎಂಬ ಏಕೈಕ ಕಾರಣಕ್ಕಾಗಿ ಪ್ರಧಾನಮಂತ್ರಿ ಈ ರಾಜ್ಯಗಳ ವಿರುದ್ಧ ಸೇಡು ತೀರಿಸಿಕೊಳ್ಳುವವರಂತೆ ನಡೆದುಕೊಳ್ಳುತ್ತಿರುವ ಸಂದರ್ಭದಲ್ಲಿ ನೀವು ಕೇಂದ್ರದ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರಬೇಕಾಗಿತ್ತು. ದುರ್ದೈವದ ಸಂಗತಿ ಎಂದರೆ ಈಗ ನೀವು ಕೇವಲ ನಿಮ್ಮ ಪಕ್ಷ ಮತ್ತು ಕುಟುಂಬದ ರಾಜಕೀಯ ಉಳಿವಿಗಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಪ್ರಧಾನಿ ಜೊತೆ ಹೊಂದಾಣಿಕೆ ಮಾಡಿಕೊಂಡು ಅವರ ಪರವಾಗಿ ನಮ್ಮ ವಿರುದ್ಧ ಕತ್ತಿ ಬೀಸುತ್ತಿದ್ದೀರಿ ಎಂದು ಅವರು ತಿಳಿಸಿದ್ದಾರೆ.

ದೇವೇಗೌಡರೇ, ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಿಗೆ ಕೇಂದ್ರ ಸರಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿ. ತೆರಿಗೆ ಹಂಚಿಕೆ, ಬರ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ನರೇಂದ್ರ ಮೋದಿ ಸರಕಾರ ಕನ್ನಡಿಗರ ಕತ್ತು ಕುಯ್ಯುತ್ತಿದೆ. ಇದರ ವಿರುದ್ಧ ನೀವು ದನಿ ಎತ್ತದೆ ಇರುವುದರಿಂದ ವರ್ತಮಾನದಲ್ಲಿ ನಿಮ್ಮ ಪಕ್ಷಕ್ಕೆ ಒಂದಷ್ಟು ಲಾಭವಾಗಲೂ ಬಹುದು. ಆದರೆ ಇತಿಹಾಸ ನಿಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

ದೇವೇಗೌಡರೇ, ಕೆಲವೇ ತಿಂಗಳುಗಳ ಹಿಂದೆ @narendramodi ಅವರಿಗಿಂತ ಕನಿಷ್ಠ ಹತ್ತು ವರ್ಷ ಸಣ್ಣವರಾಗಿರುವ ಮತ್ತು ಕೇವಲ ಒಬ್ಬ ಶಾಸಕರಾಗಿರುವ ನಿಮ್ಮ ಮಗ ಹೆಚ್.ಡಿ.ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಯಾವ ಭಾಷೆ ಬಳಸಿ ತರಾಟೆಗೆ ತೆಗೆದುಕೊಂಡಿದ್ದರೆನ್ನುವುದನ್ನು ನಾಡಿನ ಜನ ಇನ್ನೂ ಮರೆತಿಲ್ಲ, ನಿಮ್ಮ ನೆನಪಲ್ಲಿಯೂ ಇರಬಹುದು.… pic.twitter.com/WBStZZdUjv

— Siddaramaiah (@siddaramaiah) April 15, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X