Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಳೆ ಹೊಸದಿಲ್ಲಿಗೆ ಸಿಎಂ-ಡಿಸಿಎಂ :...

ನಾಳೆ ಹೊಸದಿಲ್ಲಿಗೆ ಸಿಎಂ-ಡಿಸಿಎಂ : ಕುತೂಹಲ ಮೂಡಿಸಿರುವ ವರಿಷ್ಠರ ಭೇಟಿ

ಸಂಪುಟ ಪುನರ್ ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ29 July 2024 7:51 PM IST
share
ನಾಳೆ ಹೊಸದಿಲ್ಲಿಗೆ ಸಿಎಂ-ಡಿಸಿಎಂ : ಕುತೂಹಲ ಮೂಡಿಸಿರುವ ವರಿಷ್ಠರ ಭೇಟಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ಹೊಸದಿಲ್ಲಿಗೆ ತೆರಳುತ್ತಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಲೋಕಸಭಾ ಚುನಾವಣೆಯ ಫಲಿತಾಂಶ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ, ಮುಡಾ ಹಗರಣದ ಸದ್ದಿನ ಬೆನ್ನಲ್ಲೆ ಸಚಿವ ಸಂಪುಟ ಪುನರ್ ರಚನೆ ಹಾಗೂ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಪಟ್ಟಂತೆ ಉಭಯ ನಾಯಕರು ವರಿಷ್ಠರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಸುಮಾರು ಆರರಿಂದ ಏಳು ಸಚಿವರ ಖಾತೆ ಬದಲಾಗಬಹುದು ಅಥವಾ ಕ್ರಿಯಾಶೀಲವಾಗಿ ಕೆಲಸ ಮಾಡದವರನ್ನು ಕೈ ಬಿಟ್ಟು ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದಿಂದಾಗಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನವಾಗಿರುವುದು ಹಾಗೂ ಮುಡಾದಿಂದ ಮುಖ್ಯಮಂತ್ರಿ ಕುಟುಂಬಕ್ಕೆ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಸರಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ.

ಇದೇ ವಿಷಯವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸರಕಾರದ ವಿರುದ್ಧ ಸದನದಲ್ಲಿ ನಿರಂತರ ಹೋರಾಟ ನಡೆಸಿದವು. ಅಲ್ಲದೆ, ಆ.3ರಿಂದ ಬೆಂಗಳೂರಿನಿಂದ ಮೈಸೂರು ವರೆಗೆ ಪಾದಯಾತ್ರೆಯನ್ನು ಹಮ್ಮಿಕೊಂಡಿವೆ. ಈ ವಿಚಾರಗಳ ಬಗ್ಗೆ ಹೈಕಮಾಂಡ್‍ಗೆ ಉಭಯ ನಾಯಕರು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಅಲ್ಲದೆ, ಹೆಚ್ಚುವರಿ ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿ ಮಾಡಬೇಕು ಎಂದು ಪದೇ ಪದೇ ಕಾಂಗ್ರೆಸ್‍ನ ಹಿರಿಯ ಸಚಿವರು ಪ್ರಸ್ತಾವ ಮುಂದಿಡುತ್ತಿರುವ ಕುರಿತು ವರಿಷ್ಠರ ಭೇಟಿ ವೇಳೆ ಚರ್ಚೆಯಾಗುವ ಸಾಧ್ಯತೆಗಳಿವೆ.

ಬೆಂಗಳೂರಿನ ಮೌಲಾನ ಆಝಾದ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್, ‘ದೇವರು ಹಣೆ ಬರಹ ಬರೆದಿರುತ್ತಾನೆ. ಮುಂದಿನ ದಿನಗಳಲ್ಲಿ ನಾನು ಸಚಿವನಾಗಿ ಇರುತ್ತೇನೋ, ಇಲ್ಲವೋ ಗೊತ್ತಿಲ್ಲ. ಈಗ ನನ್ನನ್ನು ಅಲ್ಪಸಂಖ್ಯಾತ ಸಚಿವನಾಗಿ ಮಾಡಿದ್ದಾರೆ. ಮುಂದಿನ ನಾಲ್ಕು ವರ್ಷ ನಮ್ಮ ಕಾಂಗ್ರೆಸ್ ಸರಕಾರ ಇರುತ್ತದೆ’ ಎಂದು ಹೇಳುವ ಮೂಲಕ ಸಂಪುಟ ಪುನರ್ ರಚನೆ ಅಥವಾ ಸಚಿವರ ಖಾತೆ ಬದಲಾವಣೆಯಾಗುವ ವಿಚಾರಕ್ಕೆ ಪುಷ್ಠಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X