ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ದಿಲ್ಲಿಗೆ ಪ್ರಯಾಣ ಬೆಳೆಸಿದ ಸಿದ್ದರಾಮಯ್ಯ

ಸಿದ್ದರಾಮಯ್ಯ
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಲೋಕಭವನದಲ್ಲಿ ತೆರಳಿ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಹೊಸದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ.
ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ತಮ್ಮ ಆಪ್ತರ ಜತೆಗೆ ಹೊಸದಿಲ್ಲಿಗೆ ತೆರಳಿದರು. ಸಂಜೆ 7:30ರ ಸುಮಾರಿಗೆ ಹೊಸದಿಲ್ಲಿ ತಲುಪಲಿರುವ ಸಿದ್ದರಾಮಯ್ಯ ಅವರು, ಅಲ್ಲಿನ ಕರ್ನಾಟಕ ಭವನದಲ್ಲೆ ವಾಸ್ತವ್ಯ ಹೂಡಲಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕನ ಆಯ್ಕೆ, ಹೊಸ ಸಚಿವ ಸಂಪುಟ ರಚನೆ ಹಾಗೂ ಕೆಪಿಸಿಸಿ ಹೊಸ ಅಧ್ಯಕ್ಷರ ಆಯ್ಕೆ ಕುರಿತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ (ಮೇ 29) ಸಂಜೆ ಅಥವಾ ಶನಿವಾರ (ಮೇ 30) ಬೆಳಗ್ಗೆ ಬೆಂಗಳೂರಿಗೆ ಸಿದ್ದರಾಮಯ್ಯ ಅವರು ಹಿಂದಿರುಗುವ ಸಾಧ್ಯತೆಗಳಿವೆ.
Next Story




