Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದರಾಮಯ್ಯ ಮತಾಂತರದ ರಾಯಭಾರಿ: ವಿಪಕ್ಷ...

ಸಿದ್ದರಾಮಯ್ಯ ಮತಾಂತರದ ರಾಯಭಾರಿ: ವಿಪಕ್ಷ ನಾಯಕ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ15 Sept 2025 11:03 PM IST
share
ಸಿದ್ದರಾಮಯ್ಯ ಮತಾಂತರದ ರಾಯಭಾರಿ: ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ. ಇಂತಹ ಜಾತಿ ಸಮೀಕ್ಷೆ ರದ್ದಾಗಲಿದೆ. ಈ ಸಮೀಕ್ಷೆ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಿ, ಹಿಂದೂಗಳನ್ನು ತುಳಿಯಲಾಗುತ್ತಿದೆ ಎಂದು ಹೇಳಿದರು.

ಏನೇ ಮಾಡಿದರೂ ಸಂವಿಧಾನದ ಪ್ರಕಾರ ಮಾಡಲಿ. ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವಿದೆ. ಅದರ ಪ್ರಕಾರ ಕ್ರಮ ವಹಿಸಲಿ. ಸಿದ್ದರಾಮಯ್ಯ ಎಲ್ಲದರಲ್ಲೂ ಮುಸ್ಲಿಮ್ ಓಲೈಕೆ ಮಾಡುತ್ತಾರೆ. ಹಿಂದೂಗಳ ಮತ ಮಾತ್ರ ಬೇಕು. ಮತ ಸಿಕ್ಕ ನಂತರ ಹಿಂದೂ ಧರ್ಮದಲ್ಲಿ ಲೋಪವಿದೆ ಎಂದಿದ್ದಾರೆ ಎಂದು ಅಶೋಕ್ ತಿಳಿಸಿದರು.

ಮುಸ್ಲಿಮರಲ್ಲಿ ಮಹಿಳೆಯರು ಮಸೀದಿಗೆ ಹೋಗುವಂತಿಲ್ಲ. ಇದು ಕೂಡ ತಪ್ಪೆಂದು ಅವರಿಗೆ ಅನ್ನಿಸಲಿಲ್ಲ. ಆದರೆ ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಕೇವಲ ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡುವ ಬದಲು ಬೇರೆ ಧರ್ಮಗಳ ಬಗ್ಗೆ ಕೂಡ ಅವರು ಮಾತನಾಡಲಿ ಎಂದು ಅವರು ಹೇಳಿದರು.

ದಸರಾ ಹಬ್ಬವನ್ನು ನಾಡಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ. ಅದೇ ರೀತಿ ಮುಸ್ಲಿಮ್ ಹಬ್ಬಗಳನ್ನು ಕೂಡ ನಾಡಹಬ್ಬ ಎನ್ನಲಿ ಮತ್ತು ಮುಸ್ಲಿಮ್ ಹಬ್ಬಗಳನ್ನು ಹಿಂದೂಗಳ ಕೈಯಲ್ಲಿ ಉದ್ಘಾಟನೆ ಮಾಡಿಸಲಿ. ದಸರಾ ಉದ್ಘಾಟನೆಯನ್ನು ಹಿಂದೂಗಳ ಕೈಯಲ್ಲಿ ಮಾಡಿಸಬೇಕಿತ್ತು ಎಂದು ಅಶೋಕ್ ತಿಳಿಸಿದರು.

ಬೆಂಗಳೂರಿನಲ್ಲಿ 5 ಸಾವಿರ ಕೋಟಿ ರೂ. ಬಿಡುಗಡೆಯಾಗಿದ್ದರೂ ರಸ್ತೆ ದುರಸ್ತಿ ಮಾಡಿಲ್ಲ. ಶುದ್ಧ ಕುಡಿಯುವ ನೀರಿನ ಘಟಕದ 20 ಲೀಟರ್ ನೀರಿನ ದರವನ್ನು 5 ರಿಂದ 10 ರೂ. ಗೆ ಏರಿಸಲಾಗಿದೆ. ತೈಲ ದರ, ಹಾಲಿನ ದರ ಏರಿಕೆ, ಹೊಸದಾಗಿ ಕಸ ಶುಲ್ಕ ಹೇರಲಾಗಿದೆ. ಇನ್ನು ಗಾಳಿಗೂ ಶುಲ್ಕ ತಂದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬ್ರ್ಯಾಂಡ್ ಬೆಂಗಳೂರು ಸಾಕಾರವಾಗಲಿದೆ. 65-70 ಸಾವಿರ ಕೋಟಿ ರೂ.ನಷ್ಟು ಹೆಚ್ಚುವರಿ ತೆರಿಗೆಯನ್ನು ಹೇರಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಬಂದ ನಂತರ ಪಾಲಿಕೆಯನ್ನು ಐದು ಹೋಳು ಮಾಡಲಾಗಿದೆ. 198 ವಾರ್ಡ್‍ಗೆ ಶೇ.90ರಷ್ಟು ಇಂಜಿನಿಯರ್ ಇಲ್ಲ. ಪಾಲಿಕೆಯೆ ಪಾಪರ್ ಆಗಿರುವ ಸಮಯದಲ್ಲಿ ಹೊಸದಾಗಿ ಇಂಜಿನಿಯರ್‍ಗಳನ್ನು ಹೇಗೆ ನೇಮಿಸುತ್ತಾರೆ? ಒಂದು ಸಾವಿರಕ್ಕೂ ಅಧಿಕ ನೇಮಕಾತಿ ಮಾಡಿದರೆ ಹಣ ಎಲ್ಲಿಂದ ತರುತ್ತಾರೆ? ಬಹಳ ಕಡೆ ಶಂಕುಸ್ಥಾಪನೆಯಾಗಿ, ಕಾಮಗಾರಿ ಸ್ಥಗಿತವಾಗಿದೆ. ಇಂತಹ ಸ್ಥಿತಿಯಲ್ಲಿ ಆಡಳಿತ ನಡೆಯುವುದಿಲ್ಲ ಎಂದು ಅಶೋಕ್ ಹೇಳಿದರು.

ವಯನಾಡಿನಲ್ಲಿ ಆನೆಯಿಂದ ಸತ್ತವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಹಾಸನದಲ್ಲಿ ನಡೆದ ಘಟನೆಯಲ್ಲಿ ಸಂತ್ರಸ್ತರಿಗೆ ಮಾನವೀಯತೆ ಆಧಾರದಲ್ಲಿ ಹೆಚ್ಚು ಪರಿಹಾರ ನೀಡಬೇಕಿತ್ತು. ಸಿದ್ದರಾಮಯ್ಯನವರಿಗೆ ನಮ್ಮ ರಾಜ್ಯದ ಜನರ ಮೇಲೆ ಮಾನವೀಯತೆ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆನೇಕಲ್‍ನಲ್ಲಿ ಫಲವತ್ತಾದ ಸಾವಿರಾರು ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ. ಬಿಡದಿ ನೀರಾವರಿ ಪ್ರದೇಶವಾಗಿದ್ದು, ಇಲ್ಲಿನ ಸ್ವಾಧೀನವನ್ನು ಹಿಂದಿನ ಸರಕಾರ ರದ್ದು ಮಾಡಿದೆ. ಆದರೆ ಈಗ ಮತ್ತೆ ಸ್ವಾಧೀನ ಮಾಡಲಾಗುತ್ತಿದೆ. ಕೆಂಗೇರಿ, ಯಲಹಂಕ ಸೇರಿದಂತೆ ರೈತರ 50 ಸಾವಿರ ಎಕರೆ ಜಮೀನನ್ನು ಸ್ವಾಧೀನ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಅಶೋಕ್ ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X