Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ಸಿದ್ದರಾಮಯ್ಯ ಯಶಸ್ವಿ ಆಡಳಿತ...

ರಾಜ್ಯದಲ್ಲಿ ಸಿದ್ದರಾಮಯ್ಯ ಯಶಸ್ವಿ ಆಡಳಿತ ನೀಡುತ್ತಿದ್ದಾರೆ: ಡಾ.ಎಚ್.ಸಿ‌ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ29 Oct 2023 3:58 PM IST
share
ರಾಜ್ಯದಲ್ಲಿ ಸಿದ್ದರಾಮಯ್ಯ ಯಶಸ್ವಿ ಆಡಳಿತ ನೀಡುತ್ತಿದ್ದಾರೆ: ಡಾ.ಎಚ್.ಸಿ‌ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಯಶಸ್ವಿ ಆಡಳಿತ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಹಂಚಿಕೆ ವಿಚಾರ ನನಗೆ ತಿಳಿದಿಲ್ಲ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ‌ಮಹದೇವಪ್ಪ ಹೇಳಿದ್ದಾರೆ.

ನಗರದ ಸರ್ಕಾರಿ ಅತಿಥಿಗೃಹದಲ್ಲಿ ರವಿವಾರ ದಸರಾ ಆಚರಣೆ ಯಶಸ್ವಿ ಹಿನ್ನಲೆಯಲ್ಲಿ ಮಾಧ್ಯಮದವರಿಗೆ ಏರ್ಪಡಿಸಿದ್ದ ಉಪಹಾರ ಕೂಟದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಆಪರೇಷನ್ ಬಿಜೆಪಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂತಹ ಪ್ರಕ್ರಿಯೆ ನಡೆದರೂ ಯಾವುದೇ ಪ್ರಯೋಜನವಾಗುವುದಿಲ್ಲ. 135 ಸ್ಥಾನ ಗಳಿಸಿರುವ ನಮ್ಮ ಅಸ್ಥಿತ್ವ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮಹಿಷ ದಸರಾ ಆಚರಣೆಗೆ ರಾಜ್ಯ ಸರ್ಕಾರ ಪ್ರೋತ್ಸಾಹ ನೀಡಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಮಹದೇವಪ್ಪ, ಸಂವಿಧಾನದಲ್ಲಿ ಎಲ್ಲಾ ಆಚರಣೆಗಳಿಗೂ ಅವಕಾಶ ಇದೆ. ಸಂವಿಧಾನವನ್ನು ಅರ್ಥ ಮಾಡಿಕೊಂಡಿದ್ದರೆ ಹೀಗೆಲ್ಲಾ ಮಾತನಾಡುತ್ತಿರಲಿಲ್ಲ. ಅದಕ್ಕಾಗಿಯೇ ನಮ್ಮ ಸರ್ಕಾರ ಸಂವಿಧಾನದ ಪೀಠಿಕೆಯನ್ನು ಶಾಲಾ, ಕಾಲೇಜು ಮಕ್ಕಳಿಗೆ ಕಡ್ಡಾಯವಾಗಿ ಬೋಧಿಸುವಂತೆ ಸೂಚನೆ ನೀಡಿರುವುದು ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನದಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯವಿದೆ.‌ ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ತಮ್ಮ ತಮ್ಮ ಅಭಿಪ್ರಾಯ ಹೇಳಲು ಕಾನೂನಿನಲ್ಲೇ ಅವಕಾಶ ಇದೆ. ಹಾಗಾಗಿ ಬೆದರಿಕೆ ಕರೆ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ಈ ಕುರಿತು ಪೊಲೀಸರು ಕ್ರಮ‌ಜರುಗಿಸಲಿದ್ದಾರೆ ಎಂದರು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮ ವಿಚಾರಕ್ಕೆ ಸಂಬಂಧಪಟ್ಟಂತೆ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಕಾರ್ಯಕ್ರಮ ನೀಡಲು ಆಮಿಷ ಒಡ್ಡಲಾಗಿತ್ತು ಎಂಬುದು ದೃಢಪಟ್ಟಿಲ್ಲ. ಆದರೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X