ಇರಾನ್ ಪರ ನಿಲ್ಲುವಂತೆ ಕೇಂದ್ರ ಸರಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಕಾಶ್ಮೀರ ಸೇರಿದಂತೆ ನಿರ್ಣಾಯಕ ಕ್ಷಣಗಳಲ್ಲಿ ಇರಾನ್ ಭಾರತದ ಪರವಾಗಿ ನಿಂತಿರುವುದನ್ನು ನೆನಪಿಸಿದ ಸಿಎಂ

ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಇಸ್ರೇಲ್-ಇರಾನ್ ಸಂಘರ್ಷದ ಈ ಸನ್ನಿವೇಶದಲ್ಲಿ ಇರಾನ್ ಪರ ನಿಲ್ಲುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.
ಎಕ್ಸ್ನಲ್ಲಿ ಸೋನಿಯಾ ಗಾಂಧಿಯವರ ಲೇಖನವನ್ನು ಹಂಚಿಕೊಂಡ ಸಿಎಂ ಸಿದ್ದರಾಮಯ್ಯ, ಇರಾನ್ ಮೇಲೆ ಇಸ್ರೇಲ್ ನಡೆಸಿದ ಕಾನೂನುಬಾಹಿರ ದಾಳಿಯು ಅಪಾಯಕಾರಿ ಬೆಳವಣಿಗೆಯಾಗಿದೆ. ಇದು ಪ್ರಾದೇಶಿಕ ಶಾಂತಿಗೆ ಬೆದರಿಕೆ ಹಾಕುತ್ತದೆ ಮತ್ತು ಭಾರತದ ಹಿತಾಸಕ್ತಿಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿಯವರ ಲೇಖನವು ನಾಗರಿಕರ ಪ್ರಾಣ ಹಾನಿಯಾದಾಗ, ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದಾಗ ಮತ್ತು ರಾಜತಾಂತ್ರಿಕತೆಯನ್ನು ತಿರಸ್ಕರಿಸಿದಾಗ ಭಾರತ ಮೌನವಾಗಿರಲು ಸಾಧ್ಯವಿಲ್ಲ ಎಂಬುದನ್ನು ಪ್ರಬಲವಾಗಿ ನೆನಪಿಸುತ್ತದೆ ಎಂದು ಹೇಳಿದ್ದಾರೆ.
ಕಾಶ್ಮೀರ ಸೇರಿದಂತೆ ನಿರ್ಣಾಯಕ ಕ್ಷಣಗಳಲ್ಲಿ ಇರಾನ್ ಭಾರತದ ಪರವಾಗಿ ನಿಂತಿದೆ. ಆದರೂ, ಗಾಝಾ ಮತ್ತು ಇರಾನ್ ಬಗ್ಗೆ ಭಾರತದ ಮೌನ, ಶಾಂತಿ ಮತ್ತು ಸಮತೋಲನದಲ್ಲಿ ಬೇರೂರಿರುವ ನಮ್ಮ ತತ್ವಬದ್ಧ ವಿದೇಶಾಂಗ ನೀತಿಯ ನಿರ್ಗಮನವನ್ನು ಸೂಚಿಸುತ್ತದೆ. ಪಶ್ಚಿಮ ಏಷ್ಯಾದಲ್ಲಿ ನಮ್ಮದೇ ಆದ ದೀರ್ಘಕಾಲೀನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಭಾರತ ಈಗ ಮಾತನಾಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.
Israel's unlawful strike on Iran is a dangerous escalation -- one that threatens regional peace and directly impacts India’s interests.
— Siddaramaiah (@siddaramaiah) June 21, 2025
Smt. Sonia Gandhi’s article is a powerful reminder that India cannot remain silent when civilian lives are lost, international law is violated,… pic.twitter.com/lXNl1Q9TB8







