Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್‍ಐಆರ್ ದುರುಪಯೋಗ ಆರೋಪ: ಮುಖ್ಯ...

ಎಸ್‍ಐಆರ್ ದುರುಪಯೋಗ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ ಎನ್‍ಡಿಎ ದೂರು

ವಾರ್ತಾಭಾರತಿವಾರ್ತಾಭಾರತಿ7 July 2026 7:15 PM IST
share
ಎಸ್‍ಐಆರ್ ದುರುಪಯೋಗ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ ಎನ್‍ಡಿಎ ದೂರು

ಹೊಸದಿಲ್ಲಿ : ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯನ್ನು ದುರುಪಯೋಗ ಮಾಡಿಕೊಂಡು ಮತದಾರರ ಪಟ್ಟಿ ತಿರುಚುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಎನ್‍ಡಿಎ ನಿಯೋಗವು ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿದೆ.

ಮಂಗಳವಾರ ದಿಲ್ಲಿಯಲ್ಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಮತ್ತು ಪ್ರಹ್ಲಾದ್ ಜೋಶಿ ನೇತೃತ್ವದ ನಿಯೋಗವು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ, ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಎಸ್‍ಐಆರ್ ಪ್ರಕ್ರಿಯೆಯ ಕುರಿತು ವಿಡಿಯೋ ದಾಖಲೆಗಳೊಂದಿಗೆ ದೂರು ಸಲ್ಲಿಸಿತು.

ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಎಚ್.ಡಿ.ಕುಮಾರಸ್ವಾಮಿ, ‘ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ವಿವರವಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ರಾಜ್ಯದಲ್ಲಿ ಚುನಾವಣಾ ವ್ಯವಸ್ಥೆಯ ಶುದ್ಧೀಕರಣಕ್ಕೆ ಹೆಚ್ಚಿನ ಕ್ರಮಗಳು ಅಗತ್ಯ ಎಂಬ ನಮ್ಮ ಬೇಡಿಕೆಗೆ ಸ್ಪಂದಿಸಿದ್ದಾರೆ’ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಜೆಡಿಎಸ್-ಬಿಜೆಪಿ ನಿಯೋಗದಿಂದ ದೂರು ಸಲ್ಲಿಸಲಾಗಿತ್ತು. ಇದೀಗ ರಾಷ್ಟ್ರ ಮಟ್ಟದ ಆಯೋಗದ ಮುಂದೆ ನಮ್ಮ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಆಗುತ್ತಿರುವ ಲೋಪಗಳನ್ನು ಸರಿಪಡಿಸುವ ಭರವಸೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ನಮ್ಮ ಆತಂಕ ಮತ್ತು ಕಳವಳಕ್ಕೆ ಸ್ಪಂದಿಸಿ ಈಗಾಗಲೇ ಕೇಂದ್ರದ ಚುನಾವಣಾ ಆಯೋಗವು ರಾಜ್ಯಕ್ಕೆ ವೀಕ್ಷಕರನ್ನು ಕಳುಹಿಸಿದ್ದು, ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‍ಐಆರ್ ಪ್ರಕ್ರಿಯೆ ಮೇಲುಸ್ತುವಾರಿ ವಹಿಸಲು ಹೊರ ರಾಜ್ಯದ ದಕ್ಷ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಕೋರಿದ್ದೇವೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.

ರಾಜ್ಯದಲ್ಲಿ ಏಳು ದಿನಗಳಿಂದ ಆಗಿರುವ ಎಸ್‍ಐಆರ್ ಪ್ರಕ್ರಿಯೆಯಲ್ಲಿ ಗಂಭೀರ ಲೋಪದೋಷಗಳು ಆಗಿವೆ. ಇದೆಲ್ಲವನ್ನು ಸರಿಪಡಿಸುವ ಉದ್ದೇಶದಿಂದ ಈವರೆಗಿನ ಎಲ್ಲ ಪ್ರಕ್ರಿಯೆಗಳನ್ನು ಕೈಬಿಡಬೇಕು. ಎಲ್ಲೆಲ್ಲಿ ಯಾವ ಬಗೆಯಲ್ಲಿ ಸರಕಾರ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಅಕ್ರಮ ಎಸಗಿದೆ ಎಂಬ ಬಗ್ಗೆ ದಾಖಲೆಗಳ ಸಮೇತ ದೂರು ಕೊಟ್ಟಿದ್ದೇವೆ. ಆಯೋಗ ರೂಪಿಸಿರುವ ಮಾರ್ಗಸೂಚಿಯನ್ನು ಹಾಳು ಮಾಡುತ್ತಿದೆ ಎಂಬ ವಿವರಗಳನ್ನು ಸಲ್ಲಿಸಲಾಯಿತು ಎಂದು ಅವರು ಹೇಳಿದರು.

ವೀಕ್ಷಕರ ನೇಮಕ: ಈಗಾಗಲೇ ಇಬ್ಬರು ವೀಕ್ಷರನ್ನು ರಾಜ್ಯಕ್ಕೆ ನೇಮಿಸಲಾಗಿದೆ. ರಾಜ್ಯ ಸರಕಾರ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂಬುದನ್ನು ಅವರಿಗೆ ಮಾಡಿಕೊಟ್ಟಿದ್ದೇವೆ. ನಕಲಿ ಮತಗಳನ್ನು ಸೃಷ್ಟಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಜನರನ್ನು ಅನಗತ್ಯ ಗಾಬರಿಪಡಿಸಲಾಗುತ್ತಿದೆ. ಗ್ಯಾರಂಟಿ ಕಡಿತಗೊಳ್ಳುವ ಭಯ ಹುಟ್ಟಿಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ನ್ಯಾಯಯುತವಾಗಿ ಎಸ್‍ಐಆರ್ ನಡೆಯಬೇಕೆಂದು ಒತ್ತಾಯಿಸಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

ಈ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ನಾಯಕ ಸಿ.ಬಿ.ಸುರೇಶ್ ಬಾಬು, ಸಂಸದರಾದ ಎಂ.ಮಲ್ಲೇಶ್ ಬಾಬು, ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಪ್ರತಿಪಕ್ಷದ ಉಪ ನಾಯಕ ಶಾಸಕ ಅರವಿಂದ್ ಬೆಲ್ಲದ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags

SIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X