Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಎಸ್‍ಐಆರ್’ | ಸರಕಾರದ ವಿರುದ್ಧ...

‘ಎಸ್‍ಐಆರ್’ | ಸರಕಾರದ ವಿರುದ್ಧ ರಾಜ್ಯಪಾಲರಿಗೆ ಎನ್‍ಡಿಎ ಮೈತ್ರಿಕೂಟ ಮುಖಂಡರ ದೂರು

ವಾರ್ತಾಭಾರತಿವಾರ್ತಾಭಾರತಿ6 Oct 2026 7:53 PM IST
share
‘ಎಸ್‍ಐಆರ್’ | ಸರಕಾರದ ವಿರುದ್ಧ ರಾಜ್ಯಪಾಲರಿಗೆ ಎನ್‍ಡಿಎ ಮೈತ್ರಿಕೂಟ ಮುಖಂಡರ ದೂರು

ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(ಎಸ್‍ಐಆರ್)ಪ್ರಕ್ರಿಯೆಗೆ ಸಂಬಂಧ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮುಖಂಡರ ನಡುವೆ ಆರೋಪ-ಪ್ರತ್ಯಾರೋಪ ತೀವ್ರವಾಗಿದೆ. ಈ ಮಧ್ಯೆ ಎಸ್‍ಐಆರ್ ಪ್ರಕ್ರಿಯೆಯಲ್ಲಿ ಸರಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿ ಎನ್‍ಡಿಎ ಮೈತ್ರಿಕೂಟದ ಮುಖಂಡರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಮಂಗಳವಾರ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಎನ್‍ಡಿಎ ಮೈತ್ರಿಪಕ್ಷಗಳ ಮುಖಂಡರ ನಿಯೋಗ, ಲೋಕಭವನದಲ್ಲಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜ್ಯ ಸರಕಾರ ಹಸ್ತಕ್ಷೇಪ ಮಾಡುತ್ತಿದೆ. ಅಲ್ಲದೆ, ಇಡೀ ಪ್ರಕ್ರಿಯೆಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಹಾಳು ಮಾಡುತ್ತಿದೆ ಎಂದು ಆರೋಪಿಸಿದರು.

ಪಾರದರ್ಶಕವಾಗಿ ನಡೆಯಬೇಕಿದ್ದ ಎಸ್‍ಐಆರ್ ಪ್ರಕ್ರಿಯೆಯನ್ನು ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಸರಕಾರ ದಾರಿ ತಪ್ಪಿಸುತ್ತಿದೆ ಹಾಗೂ ರಾಜ್ಯದ ಪ್ರಜೆಗಳಲ್ಲದ ವ್ಯಕ್ತಿಗಳನ್ನು ಪಟ್ಟಿಯಲ್ಲಿ ಉಳಿಸುವ, ಸೇರಿಸುವ ಹುನ್ನಾರವನ್ನು ನಡೆಸುತ್ತಿದೆ. ಹೀಗಾಗಿ ಸರಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದರ ಜೊತೆಗೆ ಅಗತ್ಯ ಸೂಚನೆ ನೀಡಬೇಕು ಎಂದು ನಿಯೋಗವು ಮನವಿ ಮಾಡಿದೆ.

ಕಾಂಗ್ರೆಸ್ ಸ್ಟೇಷನ್‍ಗಳು: ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ‘ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಸ್ಟೇಷನ್‍ಗಳೆಲ್ಲಾ ಕಾಂಗ್ರೆಸ್ ಸ್ಟೇಷನ್‍ಗಳಾಗಿವೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಸುಮ್ಮನೆ ಕೇಸುಗಳನ್ನು ಹಾಕಿ ಕಿರುಕುಳ ಕೊಡುತ್ತಿದ್ದಾರೆ. ಆದರೆ, ‘ನಮೂನೆ 7ಅನ್ನು ಯಾರು ಬೇಕಾದರೂ ಕೊಡಬಹುದು, ಎಷ್ಟು ಬೇಕಾದರೂ ಕೊಡಬಹುದು’ ಎಂದು ಆಯೋಗವೇ ಸ್ಪಷ್ಟಪಡಿಸಿದೆ. ಆದರೂ, ಪ್ರತಿಪಕ್ಷಗಳ ಕಾರ್ಯಕರ್ತರ ಮೇಲೆ ದೂರು ದಾಖಲಿಸಲಾಗುತ್ತಿದೆ’ ಎಂದು ದೂರಿದರು.

ಜಯನಗರ ಕ್ಷೇತ್ರದ ಶಾಸಕ ಕೆ.ಸಿ.ರಾಮಮೂರ್ತಿ ಅವರ ಮೇಲೆಯೂ ದೂರು ನೀಡಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲ ಕಡೆನೂ ಟಾರ್ಗೆಟ್ ಮಾಡಿಕೊಂಡು ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಕ್ರಿಮಿನಲ್ ಕೇಸುಗಳನ್ನು ಹಾಕುತ್ತಿದ್ದಾರೆ. ಇದು ಕಾಂಗ್ರೆಸ್ಸಿನ ಗುಂಡಾಗಿರಿ ಸಂಸ್ಕೃತಿಯನ್ನ ತೋರಿಸುತ್ತದೆ ಎಂದು ಶೋಕ್ ಟೀಕಿಸಿದರು.

ಬಿಜೆಪಿ ಕಾರ್ಯಕರ್ತರನ್ನು ಗುರಿ ಮಾಡುವ ಈ ಸರಕಾರಕ್ಕೆ ಎಚ್ಚರಿಕೆ ಕೊಡಬೇಕು, ಕಾನೂನನ್ನು ಕೈಗೆ ತೆಗೆದುಕೊಂಡು ಸಾಮೂಹಿಕವಾಗಿ ದೂರು ಪಡೆದು ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ಕೊಡುವ ಕೆಲಸ ಮಾಡುತ್ತಿದ್ದಾರೆ. ಆದುದರಿಂದ ಈ ಸರಕಾರ ವಜಾ ಮಾಡಬೇಕು. ಬಿಜೆಪಿ ಮತ್ತು ಎನ್‍ಡಿಎ ಕೂಟ ಶಕ್ತಿಶಾಲಿ ಆಗುವುದನ್ನು ಕಾಂಗ್ರೆಸ್‍ನವರಿಗೆ ಸಹಿಸಲು ಆಗುತ್ತಿಲ್ಲ. ಆದುದರಿಂದ ನಮ್ಮ ಕಾರ್ಯಕರ್ತರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

Tags

SIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X