Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಎಸ್‍ಐಆರ್ ಪ್ರಕ್ರಿಯೆ ನಿಲ್ಲಿಸಲು’ ಕೋರಿ...

‘ಎಸ್‍ಐಆರ್ ಪ್ರಕ್ರಿಯೆ ನಿಲ್ಲಿಸಲು’ ಕೋರಿ ಸಿಎಂ, ಡಿಸಿಎಂ ಜೊತೆ ಪ್ರಗತಿಪರ ಸಂಘಟನೆ-ಪಕ್ಷಗಳ ಮುಖಂಡರು ಚರ್ಚೆ

ವಾರ್ತಾಭಾರತಿವಾರ್ತಾಭಾರತಿ8 May 2026 7:33 PM IST
share
‘ಎಸ್‍ಐಆರ್ ಪ್ರಕ್ರಿಯೆ ನಿಲ್ಲಿಸಲು’ ಕೋರಿ ಸಿಎಂ, ಡಿಸಿಎಂ ಜೊತೆ ಪ್ರಗತಿಪರ ಸಂಘಟನೆ-ಪಕ್ಷಗಳ ಮುಖಂಡರು ಚರ್ಚೆ

ಬೆಂಗಳೂರು, ಮೇ 8: ವಿಶೇಷ ತೀವ್ರ ಪರಿಷ್ಕರಣೆ(ಎಸ್‍ಐಆರ್)ಯು ಮತದಾರರನ್ನು ಹೊರನೂಕುವ, ಅಪ್ರಜಾಸತ್ತಾತ್ಮಕ, ಅವೈಜ್ಞಾನಿಕ ಪ್ರಕ್ರಿಯೆ. ಈ ಪ್ರಕ್ರಿಯೆಯಿಂದ ಮತದಾರರ ಹಕ್ಕನ್ನು ರಕ್ಷಿಸಿಕೊಳ್ಳಲು ತುರ್ತಾಗಿ ಕೆಲವು ತಿರ್ಮಾನಗಳನ್ನು ಸರಕಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ‘ಎಸ್‍ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು-ಜನಪರ ಸಂಘಟನೆಗಳ ಒಕ್ಕೂಟ’ದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ಡಾ.ಶರಣಪ್ರಕಾಶ್ ಪಾಟೀಲ್, ಭೋಸರಾಜು, ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್, ಶಾಸಕ ಬಿ.ಆರ್.ಪಾಟೀಲ್ ಸೇರಿದಂತೆ ಇತರರೊಂದಿಗೆ ಸಮಾಲೋಚನೆ ನಡೆಸಿದರು.

ಶುಕ್ರವಾರ ನಗರದ ಕೃಷ್ಣಾದಲ್ಲಿ ನಡೆದ ಚರ್ಚೆಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಎಸ್.ಜಿ. ದೇವಸಹಾಯಂ, ರಾಜಕೀಯ ವಿಶ್ಲೇಷಕರಾದ ಪರಕಾಲ ಪ್ರಭಾಕರ್, ನಿಖಿಲ್ ಡೆ., ಮಾಜಿ ಸಚಿವ ಮನೋ ತಂಗರಾಜ್, ಮತದಾನ ಹಕ್ಕು ಚಳವಳಿಯ ಥಾಮಸ್ ಫ್ರಾಂಕೋ, ಎದ್ದೇಳು ಕರ್ನಾಟಕದ ತಾರಾರಾವ್, ನೂರ್ ಶ್ರೀಧರ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಹೋರಾಟಗಾರರಾದ ಎನ್.ವೆಂಕಟೇಶ, ಯೂಸುಫ್ ಕನ್ನಿ, ಅರುಣ್ ಲೂಯಿಸ್, ಬಡಗಲಪುರ ನಾಗೇಂದ್ರ, ವಿನಯ್ ಶ್ರೀನಿವಾಸ್, ಕೆ.ವಿ.ಭಟ್, ಕೆ.ಎಲ್.ಅಶೋಕ್, ಬಿ.ಅಮ್ಜದ್, ಮಹಾಂತೇಶ್, ತಾಹೀರ್ ಹುಸೇನ್, ಶ್ರೀರಾಂ, ಅಬ್ದುಲ್ ಮಜೀದ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಭಾರತದ ಚುನಾವಣಾ ಆಯೋಗವು 2025ರ ಜೂನ್‍ನಿಂದ ಎಸ್‍ಐಆರ್ ಅನ್ನು ಪರಿಚಯಿಸಿದ ಮತ್ತು ಅದನ್ನು ಅನುಷ್ಠಾನಗೊಳಿಸಿದ ರೀತಿಯಿಂದಾಗಿ ಅದು ತನ್ನ ಎಲ್ಲ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ಸಂವಿಧಾನದ ಆರ್ಟಿಕಲ್ 324ರ ಪ್ರಕಾರ ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸಂಪೂರ್ಣ ವಿಫಲಗೊಂಡಿದೆ. ಅದೊಂದು ರಾಜಕೀಯವಾಗಿ ಪಕ್ಷಪಾತಿಯಾದ ಸಂಸ್ಥೆ ಎಂಬುದು ಬಟಾಬಯಲಾಗಿದೆ. ಬಹುತೇಕ ಜನರು ಸುಪ್ರೀಂಕೋರ್ಟ್ ಮೇಲೂ ತೀವ್ರ ನಿರಾಸೆ ಹೊಂದಿದ್ದಾರೆ. ಮತದಾರರ ಮತ್ತು ನಾಗರಿಕರ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸುವಲ್ಲಿ ಅದು ವಿಫಲವಾಗಿದೆ ಎಂದು ಹೋರಾಟಗಾರರು ವಿವರಿಸಿದ್ದಾರೆ.

ಎಸ್‍ಐಆರ್ ಪ್ರಕ್ರಿಯೆಯನ್ನು ಇದೇ ಸ್ವರೂಪದಲ್ಲಿ ಮುಂದುವರಿಸಲು ಸಾಧ್ಯವಿಲ್ಲ ಮತ್ತು ಅದನ್ನು ಕೂಡಲೇ ನಿಲ್ಲಿಸಬೇಕು. ಇದುವರೆಗೆ ಕೈಗೊಳ್ಳಲಾದ ಪ್ರಕ್ರಿಯೆಯನ್ನು ಸಂಪೂರ್ವಾಗಿ ಪರಿಶೀಲಿಸಬೇಕು. ಎಸ್‍ಐಆರ್‌ ನ ಸಂವಿಧಾನಿಕ ಮಾನ್ಯತೆ ಕುರಿತು ಸುಪ್ರೀಂಕೋರ್ಟ್‍ನಲ್ಲಿ ನಡೆಯುತ್ತಿರುವ ವಿಚಾರಣೆ ಮೊದಲು ಪೂರ್ಣಗೊಳ್ಳಬೇಕು. ಪ್ರತಿಯೊಬ್ಬ ನಾಗರಿಕರ ಮತದಾನದ ಹಕ್ಕನ್ನು ಗ್ಯಾರಂಟಿ ಮಾಡುವ, ಮತದಾರರ ಸೇರ್ಪಡೆಯನ್ನು ಸುಲಲಿತಗೊಳಿಸುವ ರೀತಿಯಲ್ಲಿ, ಪ್ರತಿಯೊಂದು ಹಂತವೂ ಪಾರದರ್ಶಕವಾಗಿರುವ ರೀತಿಯಲ್ಲಿ ನಿಯಮಗಳನ್ನು ಪುನರ್ ರೂಪಿಸಿಯೇ ಜಾರಿಗೆ ತರಬೇಕು ಎಂಬ ಆಗ್ರಹವನ್ನು ಸರಕಾರ ಮುಂದಿಡಬೇಕು ಎಂದು ಹೇಳಿದರು.

ಎಸ್‍ಐಆರ್ ಒಂದು ವೇಳೆ ಜಾರಿಗೆ ಬರುವುದಾದರೂ, ಪ್ರಕ್ರಿಯೆಯ ಕಾಲಾವಧಿಯನ್ನು 3 ತಿಂಗಳ ಬದಲು 6 ತಿಂಗಳಿಗೆ ವಿಸ್ತರಿಸಬೇಕು. ತರಾತುರಿಯ ಪರಿಷ್ಕರಣೆ ನಡೆಸಬಾರದು. ಮತದಾರರ ನೆರವಿಗೆ ಎಲ್ಲ ಗ್ರಾಮ ಪಂಚಾಯಿತಿ, ವಾರ್ಡುಗಳಲ್ಲಿ ಮತದಾರರ ನೆರವು ಕೇಂದ್ರಗಳನ್ನು ಸ್ಥಾಪಿಸಬೇಕು. ಸೂಕ್ತ ದಾಖಲೆ ಇಲ್ಲದ ಜನರಿಗೆ, ದಾಖಲೆ ಒದಗಿಸುವ ಕೆಲಸದಲ್ಲಿ ಸರಕಾರ ಜನರಿಗೆ ನೆರವಾಗಬೇಕು. ಮತದಾರರ ಕರಡು ಪಟ್ಟಿ ತಯಾರಾದ ನಂತರ ಚುನಾವಣಾ ಆಯೋಗದ ಮ್ಯಾನ್ಯುಯಲ್‍ನಲ್ಲಿ ಸೂಚಿಸಿರುವಂತೆ ಕಡ್ಡಾಯವಾಗಿ ಗ್ರಾಮ ಸಭೆ, ವಾರ್ಡ್ ಸಭೆಗಳನ್ನು ಕರೆದು, ಕರಡು ಪಟ್ಟಿಯನ್ನು ಮತ್ತು ಅದರಲ್ಲಿ ಬಂದಿರುವ ತಿದ್ದುಪಡಿಗಳನ್ನು ಜನರ ಮುಂದಿಟ್ಟು, ಮುಕ್ತ ಪರಿಶೀಲನೆಗೆ ಒಳಪಡಿಸಿದ ನಂತರವೇ ಅಂತಿಮಗೊಳಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.

ಡಿಲೀಟ್ ಆದ ಮತದಾರರು ಮನವಿ ಸಲ್ಲಿಸಲು 6 ತಿಂಗಳ ಸಮಯವಕಾಶವನ್ನು ನೀಡಬೇಕು. ಕರ್ನಾಟಕ ಸ್ವಾವಲಂಬಿಯಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ವಿಚಾರವನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಇದನ್ನು ಸಮರ್ಥ ರೀತಿಯಲ್ಲಿ ಕಾರ್ಯರೂಪಕ್ಕೆ ತರಬೇಕು. ಸೋಷಿಯಲ್ ಆಡಿಟಿಂಗ್ ಪದ್ಧತಿಯನ್ನು ಬಳಸಿ ರಾಜ್ಯದ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು. ಈ ನಾಲ್ಕು ಅಂಶಗಳನ್ನೂ ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ಕ್ರಿಯಾ ಯೋಜನೆಯನ್ನು ರೂಪಿಸಬೇಕು. ಕರ್ನಾಟಕ ತನ್ನ ಪ್ರತಿರೋಧವನ್ನು ಪರಿಣಾಮಕಾರಿಯಾಗಿ ದಾಖಲಿಸಬೇಕು ಮಾತ್ರವಲ್ಲ, ದೇಶಕ್ಕೆ ಹೊಸ ಮಾದರಿಯನ್ನು ಕಟ್ಟಿಕೊಡಬೇಕು ಎಂದು ಹೋರಾಟಗಾರರು ಮನವಿ ಮಾಡಿದ್ದಾರೆ.


‘ನಾಗರಿಕ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳು ಎಸ್‍ಐಆರ್ ಪ್ರಕ್ರಿಯೆ ಸಂಬಂಧ ಸಿಎಂ ಮುಂದಿಟ್ಟ ಪ್ರಸ್ತಾವಗಳ ಕುರಿತು 2 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಯಿತು. ಅಂತಿಮವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಎಲ್ಲ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಶೀಘ್ರದಲ್ಲೇ ವಿಸ್ತೃತ ಸಭೆ ಕರೆಯುತ್ತೇವೆ. ಎಲ್ಲರ ಜೊತೆಯೂ ಸಮಾಲೋಚನೆ ನಡೆಸಿ, ನಂತರ ನಿಮ್ಮೊಟ್ಟಿಗೆ ಮತ್ತೊಮ್ಮೆ ಮಾತನಾಡುತ್ತೇನೆ’ ಎಂದು ಭರವಸೆ ನೀಡಿದ್ದಾರೆಂದು ಗೊತ್ತಾಗಿದೆ.

Tags

SIRSiddaramaiahD.K.Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X