Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಕ್ಟೋಬರ್...

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಕ್ಟೋಬರ್ 31ರವರೆಗೆ ವಿಸ್ತರಣೆ: ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ19 Oct 2025 7:37 PM IST
share
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಕ್ಟೋಬರ್ 31ರವರೆಗೆ ವಿಸ್ತರಣೆ: ಸಚಿವ ಶಿವರಾಜ್ ತಂಗಡಗಿ
"ಶಿಕ್ಷಕರನ್ನು ಹೊರತುಪಡಿಸಿ ಇತರೆ ಇಲಾಖೆಯ ಸಿಬ್ಬಂದಿ ಸಮೀಕ್ಷಾ ಕಾರ್ಯಕ್ಕೆ ಬಳಕೆ"

ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ತಿಳಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಇನ್ನೂ 9 ದಿನ ನಡೆಯಲಿರುವ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳದಿರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಸಮೀಕ್ಷಾದಾರರಿಗೆ ಮೂರು ದಿನ ರಜೆ:

ಮುಖ್ಯಮಂತ್ರಿಗಳ ನಿರ್ದೇಶನದಂತೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 20, 21 ಹಾಗೂ 22 ರಂದು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ರಜೆ ನೀಡಲಾಗಿದೆ. ಅ.23 ಮೂರರಿಂದ ಸಮೀಕ್ಷೆ ಮತ್ತೆ ಪ್ರಾರಂಭವಾಗಲಿದೆ. ಆಯಾ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿನ ವಿವಿಧ ಇಲಾಖೆಯ ಸಿಬ್ಬಂದಿಗಳನ್ನ ಬಳಸಿ ಅಕ್ಟೋಬರ್ 23 ರಿಂದ 31 ರವರೆಗೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರೇಟರ್ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಶೇಕಡ 95ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ರಾಮನಗರ ಶೇ.86%, ಧಾರವಾಡ ಶೇ.88% ಹಾಗೂ ಬೀದರ್ ಜಿಲ್ಲೆಗಳಲ್ಲಿ ಶೇ.79.46% ಸಮೀಕ್ಷೆ ಕಾರ್ಯ ತುಸು ಕುಂಠಿತವಾಗಿದೆ. ಬೆಂಗಳೂರಿನಲ್ಲಿ ಶೇಕಡ 45ರಷ್ಟು ಸಮೀಕ್ಷೆ ಕಾರ್ಯ ನಡೆದಿದೆ. ಬೆಂಗಳೂರಿನಲ್ಲಿ ತಡವಾಗಿ ಸಮೀಕ್ಷೆ ಪ್ರಾರಂಭವಾದ ಕಾರಣ ಸಮೀಕ್ಷೆ ಕಡಿಮೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ನೂರರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಜಿಲ್ಲೆಗಳಲ್ಲಿ ಮಾತ್ರ ಸಮೀಕ್ಷೆ ಅಕ್ಟೋಬರ್ 31ರವರೆಗೆ ನಡೆಯಲಿದ್ದು, ಕೆಲ ಜಿಲ್ಲೆಗಳಲ್ಲಿ ಈ ಕಾರ್ಯ ಶೀಘ್ರವೇ ಪೂರ್ಣಗೊಳ್ಳಬಹುದು ಎಂದರು.

ಶಾಸಕರ ಮೂಲಕ ಜನತೆಗೆ ಜಾಗೃತಿ:

ಬೆಂಗಳೂರಿನ ಜನರಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಬಗ್ಗೆ ಜಾಗೃತಿ ಮೂಡಿಸುವಂತೆ ಶಾಸಕರಿಗೆ ನಿರ್ದೇಶನ ನೀಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸೂಚನೆ ರವಾನೆಯಾಗಲಿದೆ ಎಂದು ಹೇಳಿದರು.

ಸುಧಾಮೂರ್ತಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಇನ್ಫೋಸಿಸ್ ನ ಸುಧಾಮೂರ್ತಿ ಅವರು ಸಮಾಜದಲ್ಲಿ ಜವಾಬ್ದಾರಿ ಸ್ಥಾನದಲ್ಲಿ ಇರುವವರು. ಇಂತಹ ಹೇಳಿಕೆ ನೀಡುವ ಬದಲು ಅದರ ಬಗ್ಗೆ ಸೂಕ್ತ ಮಾಹಿತಿಯನ್ನು ಪಡೆದುಕೊಳ್ಳಬೇಕು. ಸರ್ಕಾರ ನಡೆಸುತ್ತಿರುವುದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಈ ಸಮೀಕ್ಷೆಯಿಂದ ರಾಜ್ಯದ ಪ್ರತಿಯೊಂದು ಸಮುದಾಯದ ಅಥವಾ ಸಮಾಜದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕ ಮಾಹಿತಿ ದೊರೆಯಲಿದೆ. ಇದು ಯಾವುದೋ ಹಿಂದುಳಿದ ವರ್ಗ, ಎಸ್ಸಿ ಮತ್ತು ಎಸ್ ಟಿ ಸಮುದಾಯಕ್ಕೆ ಮಾತ್ರ ಸೀಮಿತವಾದ ಸಮೀಕ್ಷೆಯಲ್ಲ. ದಯವಿಟ್ಟು ಜನರನ್ನು ತಪ್ಪು ದಾರಿಗೆ ಕೊಂಡೊಯ್ಯುವ ಪ್ರಯತ್ನ ಮಾಡಬಾರದು ಎಂದು ಪ್ರತಿಕ್ರಿಸಿದರು.

ಧಾರವಾಡದಲ್ಲಿ ಶೇಕಡವಾರು ಸಮೀಕ್ಷೆ ಕಡಿಮೆಯಾಗಲು ರಾಜಕೀಯ ಕಾರಣಗಳು ಇರಬಹುದೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸ್ಥಳೀಯ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ನಾನು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ. ನೀವು ಪಾಲ್ಗೊಳ್ಳಬೇಡಿ ಎಂದು ಜನರಿಗೆ ಹೇಳಿದರು. ಇಂತಹ ವರ್ತನೆ ನಿಜಕ್ಕೂ ಸರಿಯಲ್ಲ. ಜವಾಬ್ದಾರಿಯಲ್ಲಿ ಸ್ಥಾನದಲ್ಲಿರುವವರನ್ನು ಜನತೆ ಗಮನಿಸುತ್ತಿರುತ್ತಾರೆ. ಈ ಹಾಗಾದರೆ ನಾವು ಕೇಂದ್ರ ಸರ್ಕಾರ ನಡೆಸುವ ಗಣತಿಯನ್ನ ಭವಿಷ್ಯದಲ್ಲಿ ವಿರೋಧ ಮಾಡಬಹುದೇ? ದೊಡ್ಡ ಜವಾಬ್ದಾರಿಯಲ್ಲಿರುವವರು ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಪ್ರತಿಕ್ರಿಸಿದರು.

Tags

SocialEducational SurveyMinister Shivraj Thangadgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X