Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ...

ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ -ಶೈಕ್ಷಣಿಕ ಸಮೀಕ್ಷೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ23 July 2025 3:43 PM IST
share
ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ -ಶೈಕ್ಷಣಿಕ ಸಮೀಕ್ಷೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರ ವರೆಗೆ 15 ದಿನಗಳ ಕಾಲ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ನಿರ್ಧಾರಿಸಲಾಗಿದೆ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ತನ್ನ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರಕಾರಕ್ಕೆ ಪ್ರಸ್ತಾವನ ಸಲ್ಲಿಸಿದೆ. ಅದರಂತೆ ರಾಜ್ಯದ ಎಲ್ಲಾ ಏಳು ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.

ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.

ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ಮಾಡಬೇಕು. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು ಎಂದರು.

ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ ನೀಡಿರುವ ಸಿಎಂ, ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನಿಸಲಾಯಿತು.

ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು ಎಂದು ಸಿಎಂ ತಿಳಿಸಿದರು.

ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಯನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

•ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ಸಚಿವ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X