Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ; SIT...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ; SIT ರಚಿಸುವಂತೆ ಗೃಹ ಸಚಿವರಿಗೆ 'ನೈಜ ಹೋರಾಟಗಾರರ ವೇದಿಕೆ' ಮನವಿ

ವಾರ್ತಾಭಾರತಿವಾರ್ತಾಭಾರತಿ3 July 2023 3:30 PM IST
share
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ; SIT ರಚಿಸುವಂತೆ ಗೃಹ ಸಚಿವರಿಗೆ ನೈಜ ಹೋರಾಟಗಾರರ ವೇದಿಕೆ ಮನವಿ

ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ(SIT) ರಚನೆ ಮಾಡುವಂತೆ ‘ನೈಜ ಹೋರಾಟಗಾರರ ವೇದಿಕೆ’ ಗೃಹ ಸಚಿವ ಡಾ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮನವಿ ಮಾಡಿದೆ.

ಪ್ರಕರಣದ ಆರೋಪಿ ಎನ್ನಲಾದ ಸಂತೋಷ ರಾವ್ ನಿರ್ದೋಷಿ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಹಾಗಾದರೆ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವವರು ಯಾರು? ಈ ಪ್ರಕರಣದ ಮರುತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸೌಜನ್ಯಾಳ ಮೇಲೆ ಅತ್ಯಾಚಾರ ಆಗಿ ಹತ್ಯೆ ಆಗಿರುವುದಂತೂ ಸತ್ಯ. ಸ್ಥಳೀಯ ಹಾಗೂ ಪೊಲೀಸ್ ಅಧಿಕಾರಿಗಳು ಮತ್ತು ಸಿಒಡಿ ತಂಡದವರು ಪ್ರಾಥಮಿಕ ಹಂತದಲ್ಲಿಯೇ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ನಂತರ ತನಿಖೆ ನಡೆಸಿದ ಸಿಬಿಐನವರು, ಸಮಗ್ರವಾದ ತನಿಖೆ ನಡೆಸಿಲ್ಲ ಹಾಗೂ ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಹಾಜರುವಡಿಸಲಿಲ್ಲವೆಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕರ್ನಾಟಕ ರಾಜ್ಯದ ಪೊಲೀಸರು ಯಾವುದೇ ಪ್ರಕರಣಗಳನ್ನು ಅತ್ಯಂತ ಚಾಣಾಕ್ಷತನದಿಂದ ತನಿಖೆ ನಡೆಸಿ ಆರೋಪಿಗಳು ಎಲ್ಲಿ ಅಡಗಿದ್ದರೂ ಅವನನ್ನು ಹೊರಗೆ ತಂದು ಕಾನೂನು ಕ್ರಮ ಕೈಗೊಂಡು ಜೈಲಿಗೆ ಕಳಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂಬುದು ನಮ್ಮೆಲ್ಲರ ನಂಬಿಕೆ. ಆದರೆ, ಈ ಪ್ರಕರಣದಲ್ಲಿ ಪ್ರಭಾವಿಗಳ ಒತ್ತಡಕ್ಕೆ ಮಣಿದಿರುವ ಬಗ್ಗೆ ನಮಗೆಲ್ಲ ಸಂಶಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಪ್ರಾಥಮಿಕ ಹಂತದಲ್ಲಿಯೇ ಪ್ರಕರಣವನ್ನು ಭೇದಿಸಲು ವಿಫಲರಾಗಿದ್ದಾರೆ. ಈ ಪ್ರಕರಣದ ಹಿಂದೆ ಕಾಣದ ಕೈಗಳು ಹೇಗೆ ಕೆಲಸ ಮಾಡಿರಬಹುದು. ಅಮಾಯಕ ಸಂತೋಷ್ ಅವರ ಜೀವನದಲ್ಲಿ ಅಸಂತೋಷ ಮೂಡಿಸಿ ಅವನ ಜೀವನಕ್ಕೆ ಕಲ್ಲು ಹಾಕಿದವರು ಯಾರು? ಇಂತಹ ಹಲವಾರು ಪ್ರಶ್ನೆಗಳು ಸಾರ್ವಜನಿಕರಲ್ಲಿ ಉತ್ತರ ಸಿಗದಿರುವುದು ವಿಪರ್ಯಾಸ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಮನವಿಗೆ ಸ್ಪಂದಿಸಿದ ಗೃಹ ಸಚಿವ ಡಾ ಜಿ. ಪರಮೇಶ್ವರ್ ಅವರು ಈ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್ಎಂ ವೆಂಕಟೇಶ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಗೃಹ ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಸಾಮಾಜಿಕ ಕಾರ್ಯಕರ್ತರಾದ L S ಮಲ್ಲಿಕಾರ್ಜುನ್ ಮತ್ತು ಶ್ರೀಮತಿ ಜಯಲಕ್ಷ್ಮಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X