Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸೌಜನ್ಯ ಕೊಲೆ ಪ್ರಕರಣ: ಎಸ್‍ಐಟಿ ರಚಿಸಿ...

ಸೌಜನ್ಯ ಕೊಲೆ ಪ್ರಕರಣ: ಎಸ್‍ಐಟಿ ರಚಿಸಿ ಮರು ತನಿಖೆಗೆ ಒಳಪಡಿಸುವಂತೆ ಸಂಘಟನೆಗಳ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ28 July 2023 7:32 PM IST
share
ಸೌಜನ್ಯ ಕೊಲೆ ಪ್ರಕರಣ: ಎಸ್‍ಐಟಿ ರಚಿಸಿ ಮರು ತನಿಖೆಗೆ ಒಳಪಡಿಸುವಂತೆ ಸಂಘಟನೆಗಳ ಒತ್ತಾಯ

ಬೆಂಗಳೂರು: ರಾಜ್ಯ ಸರಕಾರವು ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ವಿಶೇಷ ತನಿಖಾ ತಂಡ(ಸಿಟ್) ರಚಿಸಿ ನಿಷ್ಪಕ್ಷಪಾತವಾದ ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ 60ಕ್ಕೂ ಹೆಚ್ಚು ಪ್ರಗತಿಪರ ಸಂಘಟನೆಗಳು ಧರಣಿ ಕೈಗೊಂಡು ಆಗ್ರಹಿಸಿವೆ.

ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ‘ನಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಎಂತಹ ಸಮಾಜವನ್ನು ಬಿಟ್ಟು ಹೋಗುತ್ತಿದ್ದೇವೆ ಎಂದು ಯೋಚಿಸದರೆ ದುಗುಡವಾಗುತ್ತದೆ. ಜನತೆ ಈಗಿರುವ ರಾಜ್ಯ ಸರಕಾರದ ಬಗ್ಗೆ ಅಪಾರವಾದ ಭರವಸೆ ಇಟ್ಟುಕೊಂಡಿದ್ದಾರೆ. ಅದನ್ನು ಉಳಿಸಿಕೊಳ್ಳುವಂತೆ ಸೌಜನ್ಯ ಪ್ರಕರಣದ ಅಪರಾಧಿಗಳನ್ನು ಹಿಡಿದು ಶಿಕ್ಷಿಸಬೇಕು. ಮನುಷ್ಯತ್ವದ ನೆಲೆಯಲ್ಲಿ ರಾಜ್ಯ ಸರಕಾರ ಆಲೋಚನೆ ಮಾಡಬೇಕು’ ಎಂದು ಒತ್ತಾಯಿಸಿದರು.

ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ, ‘ನಾವು ಕಟ್ಟುವ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವವರಿಗೆ ಧಿಕ್ಕಾರವಿರಲಿ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ ಹಿಡಿಶಾಪ ತಟ್ಟುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೌಜನ್ಯ ಪ್ರಕರಣ ಕುರಿತು ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ‘ಪ್ರಕರಣದ ತನಿಖೆಯು ಲೋಪಗಳಿಂದ ಕೂಡಿದ್ದು, ಮರು ತನಿಖೆಗೆ ಅರ್ಹವಾಗಿದೆ’ ಎಂದು ಹೇಳಿದೆ. ಆದುದರಿಂದ ನ್ಯಾಯಾಲಯವೇ ಹೇಳುವಂತೆ ಪ್ರಕರಣವನ್ನು ಸಿಬಿಐ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ. ಹೀಗಾಗಿ, ಪ್ರಕರಣವನ್ನು ಎಸ್‍ಐಟಿ ಮೂಲಕ ಮರುತನಿಖೆ ನಡೆಸಬೇಕು’ ಎಂದು ಮಹೇಶ್ ಶೆಟ್ಟಿ ತಿಮರೋಡಿ ಒತ್ತಾಯಿಸಿದರು.

ಸಿಐಟಿಯು ಮುಖಂಡ ಪ್ರಕಾಶ್, ನಮ್ಮ ಅಳತೆಗೂ ಮೀರಿದ ಸಮಸ್ಯೆಗಳು ಸೌಜನ್ಯ ಪ್ರಕರಣವನ್ನು ಸುತ್ತುವರಿದಿವೆ ಎಂದು ಹೇಳಿದರು.

ಹಿರಿಯ ವಕೀಲ ಡಾ.ಸಿ.ಎಸ್.ದ್ವಾರಕಾನಾಥ್ ಮಾತನಾಡಿ, ‘ಸೌಜನ್ಯ ಪ್ರಕರಣದ ತನಿಖೆಯನ್ನು ನ್ಯಾಯಾಂಗದ ನೇರ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಸಮಾಜದಲ್ಲಿ ನಿರಪರಾಧಿಗಳಂತೆ ತಿರುಗಾಡುತ್ತಿರುವ ನೈಜ ಅಪರಾಧಿಗಳು ಮತ್ತು ಅವರ ರಕ್ಷಕರನ್ನು ಕೂಡಲೇ ವಿಚಾರಣೆಗೆ ಒಳಪಡಿಸಿ, ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.

ಎನ್‍ಎಫ್‍ಐಡಬ್ಲ್ಯುನ ಎ.ಜ್ಯೋತಿ ಮಾತನಾಡಿ, ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರವಾದ, ಅಮಾನುಷವಾದ ಹಿಂಸೆ, ದೌರ್ಜನ್ಯಗಳ ಈ ಕಾಲದಲ್ಲಿ ಸರಕಾರಗಳು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುವ ಮೂಲಕ ಮಹಿಳೆಯರಲ್ಲಿ ಬದುಕಿನ ಬಗ್ಗೆ, ಈ ರಾಜ್ಯದ ಸರಕಾರದ ಬಗ್ಗೆ ಭರವಸೆ ಮೂಡಿಸಬೇಕು. ಇಲ್ಲವಾದರೆ ಇಡೀ ಮಹಿಳಾ ಸಮೂಹ ಭರವಸೆಯೇ ಇಲ್ಲದೆ ತತ್ತರಿಸಿ ಹೋಗುವುದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದರು.

ಧರಣಿಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್.ವಿಮಲಾ, ಸ್ಟ್ಯಾನಿ, ಮಾಜಿ ಸಚಿವೆ ಬಿ.ಟಿ. ಲಲಿತಾನಾಯ್ಕ್, ಹೋರಾಟಗಾರ್ತಿ ಅಕ್ಕೈಪದ್ಮಶಾಲಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X