ಸ್ಪೀಕರ್ ಯುಟಿ ಖಾದರ್ ಅವರಿಗೆ ʼಸಿಲ್ವರ್ ಎಲಿಫೆಂಟ್ʼ ರಾಷ್ಟ್ರೀಯ ಪ್ರಶಸ್ತಿ

ಪ್ರೌಢ ಶಾಲೆಯಲ್ಲಿ ಸ್ಕೌಟ್ಸ್ ಸಮವಸ್ತ್ರದಲ್ಲಿ ಯು.ಟಿ.ಖಾದರ್/ ಹೊಸದಿಲ್ಲಿಯಲ್ಲಿ ಭಾರತ್ ಸ್ಕೌಟ್& ಗೈಡ್ಸ್ನ ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯು.ಟಿ.ಖಾದರ್
ಹೊಸದಿಲ್ಲಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೀಡುವ ʼಸಿಲ್ವರ್ ಎಲಿಫೆಂಟ್ʼ ರಾಷ್ಟ್ರೀಯ ಪ್ರಶಸ್ತಿಗೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ಆಯ್ಕೆಯಾಗಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಸ್ಕೌಟ್ಸ್ ಮತ್ತು ಗೈಡ್ಸ್ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಸಿಲ್ವರ್ ಎಲಿಫೆಂಟ್ ಪ್ರಶಸ್ತಿಯನ್ನು ಯು.ಟಿ.ಖಾದರ್ ಅವರಿಗೆ ನೀಡುತ್ತಿದ್ದೇವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ ಸಮಿತಿಯು ತಿಳಿಸಿದೆ.
ನವೆಂಬರ್ 26ರಂದು ಲಕ್ನೋದಲ್ಲಿ ನಡೆಯಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಜ್ರಮಹೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪಸ್ಥಿತರಿರಲಿದ್ದಾರೆ.
Next Story





