ಸ್ಪೀಕರ್ ಯು.ಟಿ. ಖಾದರ್ ರಿಗೆ 'ದಿ ಗ್ರೇಟ್ ಸನ್ ಆಫ್ ಇಂಡಿಯಾ' ಪ್ರಶಸ್ತಿ ಪ್ರದಾನ
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆ ನೀಡುವ 'ಗ್ರೇಟ್ ಸನ್ ಆಫ್ ಇಂಡಿಯಾ' ಪ್ರಶಸ್ತಿ ಪ್ರದಾನ ಸಮಾರಂಭ ರವಿವಾರ ಹೊಸದಿಲ್ಲಿಯಲ್ಲಿ ಜರುಗಿತು.
ಹೊಸದಿಲ್ಲಿ, ಜು.16: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯ ವತಿಯಿಂದ ನೀಡುವ 'ಗ್ರೇಟ್ ಸನ್ ಆಫ್ ಇಂಡಿಯಾ' ಪ್ರಶಸ್ತಿಗೆ ಭಾಜನರಾದರು.
ಇಂದು ಹೊಸದಿಲ್ಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಯು.ಟಿ.ಖಾದರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯ ಅಧ್ಯಕ್ಷ, ಒಡಿಶಾ ಹೈಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ. ಗೋಪಾಲ್ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಛತ್ತೀಸ ಢ ರಾಜ್ಯಪಾಲ ಬಿಸ್ವ ಭೂಷಣ ಹರಿಚರಣ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಇದೇವೇಳೆ ಬಿಸ್ವ ಭೂಷಣ್ ಹರಿಚರಣ್ ಅವರ ಆತ್ಮಕತೆ 'ಬ್ಯಾಟಲ್ ನಾಟ್ ಓವರ್' ಕೃತಿಯ ಇಂಗ್ಲೀಷ್ ಅನುವಾದವೂ ಬಿಡುಗಡೆಗೊಂಡಿತು.
Next Story