ಕಾಶ್ಮೀರ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನ ವ್ಯವಸ್ಥೆ: ಸಿದ್ದರಾಮಯ್ಯ

ಬೆಂಗಳೂರು : ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಿಎಂ ಪ್ರವಾಸಿಗರಿಗೆ ಅಭಯ ನೀಡಿದ್ದಾರೆ.
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
— CM of Karnataka (@CMofKarnataka) April 23, 2025
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ…
Next Story







