Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಉಭಯ ಸದನಗಳಲ್ಲಿ ‘ವಂದೇ ಮಾತರಂ’ ಜಟಾಪಟಿ:...

ಉಭಯ ಸದನಗಳಲ್ಲಿ ‘ವಂದೇ ಮಾತರಂ’ ಜಟಾಪಟಿ: ಸಂವಿಧಾನ ಪೀಠಿಕೆ ಬಿಟ್ಟು ಗೀತೆ ಹಾಡಿದ ಬಿಜೆಪಿ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ21 Sept 2026 6:36 PM IST
share
ಉಭಯ ಸದನಗಳಲ್ಲಿ ‘ವಂದೇ ಮಾತರಂ’ ಜಟಾಪಟಿ: ಸಂವಿಧಾನ ಪೀಠಿಕೆ ಬಿಟ್ಟು ಗೀತೆ ಹಾಡಿದ ಬಿಜೆಪಿ ಸದಸ್ಯರು

ಬೆಂಗಳೂರು : ಕಸ್ತೂರಿ ರಂಗನ್ ಮತ್ತು ಬರ ವಿಚಾರ ಸಂಬಂಧ ಚರ್ಚೆ ನಡೆಸಲು ಕರೆದಿರುವ ‘ವಿಶೇಷ ಅಧಿವೇಶನ’ದ ಆರಂಭದಲ್ಲೇ ವಿಧಾನ ಮಂಡಲದ ಉಭಯ ಸದನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ಸದಸ್ಯರ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಬಿಜೆಪಿ ಸದಸ್ಯರು ಸಂವಿಧಾನ ಪೀಠಿಕೆ ಕೈಬಿಟ್ಟು, ವಂದೇ ಮಾತರಂ ಗೀತೆ ಹಾಡಿದ್ದಾರೆ.

ಸೋಮವಾರ ಬೆಳಗ್ಗೆ ವಿಶೇಷ ಅಧಿವೇಶನ ಆರಂಭವಾಗುತ್ತಿದ್ದಂತೆ ವಿಧಾನಸಭೆಯಲ್ಲಿ ವಂದೇ ಮಾತರಂ ಗೀತೆಯನ್ನು ಎರಡೇ ಚರಣಕ್ಕೆ ಸೀಮಿತಗೊಳಿಸಿ ಹಾಡಲಾಯಿತು. ಅನಂತರ, ವಿಧಾನಸಭಾ ಸ್ಪೀಕರ್ ಜಿ.ಎಸ್.ಪಾಟೀಲ್ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಆದರೆ, ಇತ್ತ ಗಮನ ನೀಡದ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಸದಸ್ಯರು, ಸಂವಿಧಾನ ಪೀಠಿಕೆ ಕೈಬಿಟ್ಟು, ಪೂರ್ತಿ ವಂದೇ ಮಾತರಂ ಗೀತೆಯನ್ನು ಹಾಡಿದರು. ಬಳಿಕ ಭಾರತ್ ಮಾತಾ ಕೀ ಜೈ ಎಂದು ಘೋಷಣೆಯನ್ನು ಮೊಳಗಿಸಿದರು.

ಮೇಲ್ಮನೆಯಲ್ಲಿ ಗದ್ದಲ: ರಾಜ್ಯದ ಬರ ಪರಿಸ್ಥಿತಿ, ನೀರಿನ ಸಮಸ್ಯೆ ಮತ್ತು ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಬೇಕಿದ್ದ ವಿಶೇಷ ಅಧಿವೇಶನದ ಮೊದಲ ದಿನವೇ ಮೇಲ್ಮನೆಯಲ್ಲಿ ‘ವಂದೇ ಮಾತರಂ’ ಗಾಯನದ ವಿಚಾರ ಮುನ್ನೆಲೆಗೆ ಬಂದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಗದ್ದಲ ಹಾಗೂ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿತು.

ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಸಲೀಂ ಅಹ್ಮದ್ ವಂದೇ ಮಾತರಂ ಗೀತೆ ಗಾಯನಕ್ಕೆ ಅವಕಾಶ ನೀಡಿದರು. ಅಲ್ಲದೆ, ಸರಕಾರದ ಇತ್ತೀಚಿನ ಆದೇಶದಂತೆ ಎರಡು ಚರಣಗಳಿಗೆ ಗೀತೆ ಸ್ಥಗಿತಗೊಂಡಿತು.

ಇದನ್ನು ಆಕ್ಷೇಪಿಸಿದ ಬಿಜೆಪಿ ಸದಸ್ಯರು, ಸದನದಲ್ಲೇ ಪೂರ್ಣ ವಂದೇ ಮಾತರಂ ಗೀತೆ ಹಾಡಲು ಆರಂಭಿಸಿದರು. ಇದೇ ವೇಳೆ ಸಭಾಪತಿ ಸಲೀಂ ಅಹ್ಮದ್ ಸಂವಿಧಾನದ ಪೀಠಿಕೆಯನ್ನು ಬೋಧಿಸಲು ಮುಂದಾದರು. ಸಂವಿಧಾನದ ಪೀಠಿಕೆ ಬೋಧನೆಯ ನಡುವೆಯೂ ಬಿಜೆಪಿ ಸದಸ್ಯರು ಪೂರ್ಣ ವಂದೇ ಮಾತರಂ ಹಾಡಿದ್ದು, ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಬಿಜೆಪಿ ಸದಸ್ಯರು ವಂದೇ ಮಾತರಂ ಪೂರ್ಣ ಗೀತೆಯ ಗಾಯನಕ್ಕೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ವಂದೇ ಮಾತರಂ ಅನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಸದನದಲ್ಲಿ ಹಿಂದೆ ಪೂರ್ಣ ಗೀತೆ ಹಾಡಲಾಗುತ್ತಿತ್ತು. ಈಗ ಏಕೆ ಎರಡು ಚರಣಗಳಿಗೆ ಸೀಮಿತಗೊಳಿಸಲಾಗಿದೆ ಎಂದು ಪ್ರಶ್ನಿಸಿದರು.

ಆಗ ಸರಕಾರದ ಆದೇಶ ಉಲ್ಲೇಖಿಸಿ ಪ್ರತಿಕ್ರಿಯಿಸಿದ ಸಭಾನಾಯಕ ಡಾ.ಯತೀಂದ್ರ ಸಿದ್ದರಾಮಯ್ಯ, ಸರಕಾರಿ ಕಾರ್ಯಕ್ರಮಗಳಲ್ಲಿ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರಕಾರವೇ ಆದೇಶ ಹೊರಡಿಸಿದೆ ಎಂದು ಸಮರ್ಥಿಸಿಕೊಂಡರು. ರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತಿತರ ಪ್ರಮುಖ ಸಂವಿಧಾನಿಕ ಗಣ್ಯರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಪೂರ್ಣ ಗೀತೆ ಹಾಡಲಾಗುತ್ತದೆ ಎಂದು ತಿಳಿಸಿದರು.

ಸಭಾನಾಯಕರ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಸದಸ್ಯರು, ಸಭಾಪತಿ ಸಲೀಂ ಅಹ್ಮದ್ ಅವರಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂಬ ರೀತಿಯಲ್ಲಿ ಸಭಾ ನಾಯಕರು ನೀಡಿದ ಹೇಳಿಕೆಯನ್ನು ಪ್ರಶ್ನಿಸಿದರು.

ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಸಭಾಪತಿಗಳ ಕೈಯಲ್ಲಿ ಏನೂ ಇಲ್ಲ ಎಂದು ಸಭಾ ನಾಯಕರು ಹೇಳುತ್ತಾರೆ. ನೀವು ಕಾಂಗ್ರೆಸ್ ಸಭಾಪತಿಗಳಾ? ಸಭಾಪತಿಯ ಅಧಿಕಾರ ಮತ್ತು ಸದನದ ಸ್ವಾಯತ್ತತೆಯ ಕುರಿತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ, ಡಾ.ಯತೀಂದ್ರ ಮತ್ತು ಛಲವಾದಿ ನಾರಾಯಣಸ್ವಾಮಿ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿಯ ಸಿ.ಟಿ.ರವಿ ಎದ್ದುನಿಂತು, ಸಭಾಪತಿಗಳು ಹೆಲ್ಪ್‌ ಲೆಸ್ ಆಗಿದ್ದಾರೆ. ಸಭಾಪತಿ ಪೀಠ ಸಂವಿಧಾನ ಪೀಠವೋ? ಕಾಂಗ್ರೆಸ್ ಪೀಠವೋ? ಎಂದು ಪ್ರಶ್ನಿಸಿದರು. ಆಗ ಸದನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಗದ್ದಲ ಉಂಟಾದ ಪರಿಣಾಮ ಸಭಾಧ್ಯಕ್ಷರು ಕಲಾಪವನ್ನು ಕೆಲಕಾಲ ಮುಂದೂಡಿದರು.

ಎರಡು ಚರಣಗಳನ್ನೇ ಹಾಡಲಾಗುತ್ತಿತ್ತು: ಬಿ.ಕೆ.ಹರಿಪ್ರಸಾದ್

ಪ್ರತಿಪಕ್ಷದ ಸದಸ್ಯರು ಸದನದಲ್ಲಿ ವಂದೇ ಮಾತರಂ ಪೂರ್ಣ ಗೀತೆ ಹಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್, ಈ ಸದನದಲ್ಲಿ ಹಿಂದೆಯೂ ಎರಡು ಚರಣಗಳನ್ನೇ ಹಾಡಲಾಗುತ್ತಿತ್ತು. ಬಿಜೆಪಿ ಸದಸ್ಯರು ಸಭಾಪತಿ ಬಂದ ಸಂದರ್ಭದಲ್ಲಿ ಪೂರ್ಣ ಗೀತೆ ಹಾಡಲು ಆರಂಭಿಸಿದ್ದಾರೆ ಎಂದು ಆಕ್ಷೇಪಿಸಿದರು.

ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ, ಇದು ಕಾಂಗ್ರೆಸ್ ಕಚೇರಿಯಲ್ಲ, ವಿಧಾನಪರಿಷತ್ ಎಂದು ಆಕ್ಷೇಪಿಸಿದರು. ಹರಿಪ್ರಸಾದ್ ಅವರ ಮಾತಿನ ನಡುವೆ ವಿಪಕ್ಷಗಳ ಘೋಷಣೆಗಳು ಮೊಳಗಿದವು.

Tags

Special Session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X