Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇದು ‘ಮುಂದುವರಿದ ಅಧಿವೇಶನ, ವಿಶೇಷವಲ್ಲ’...

ಇದು ‘ಮುಂದುವರಿದ ಅಧಿವೇಶನ, ವಿಶೇಷವಲ್ಲ’ ಸದನದಲ್ಲಿ ವಾಗ್ವಾದ

ವಾರ್ತಾಭಾರತಿವಾರ್ತಾಭಾರತಿ21 Sept 2026 8:36 PM IST
share
ಇದು ‘ಮುಂದುವರಿದ ಅಧಿವೇಶನ, ವಿಶೇಷವಲ್ಲ’ ಸದನದಲ್ಲಿ ವಾಗ್ವಾದ

ಬೆಂಗಳೂರು : ಕಸ್ತೂರಿ ರಂಗನ್ ವರದಿ ಹಾಗೂ ಬರದ ಬಗ್ಗೆ ಚರ್ಚೆ ನಡೆಸಲು ಸೋಮವಾರದಿಂದ ಆರಂಭವಾಗಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ‘ವಿಶೇಷ’ ಪದ ಉಲ್ಲೇಖ ವಿಚಾರವಾಗಿ ವಿಧಾನಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆಯಿತು.

ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿ, ಈ ಅಧಿವೇಶನವನ್ನು ವಿಶೇಷ ಅಧಿವೇಶನ ಎಂದು ಕರೆದಿರುವುದು ನಿಯಮಾವಳಿಗೆ ವಿರುದ್ಧ, ಇದು ಮುಂದುವರೆದ ಅಧಿವೇಶನವೇ, ಇಲ್ಲವೇ ವಿಶೇಷ ಎಂಬುದನ್ನು ಸ್ಪಷ್ಟಪಡಿಸಿ. ವಿಶೇಷ ಅಧಿವೇಶನ ಕರೆಯಲು ನಿಯಮಾವಳಿಯಲ್ಲಿ ಅವಕಾಶ ಇಲ್ಲ. ವಿಶೇಷ ಚರ್ಚೆಗೆ ನಮ್ಮ ತಕರಾರಿಲ್ಲ. ಯಾವ ನಿಯಮದಡಿ ಚರ್ಚೆ ಮಾಡಬೇಕು ಎಂಬುದನ್ನು ಸ್ಪಷ್ಟಪಡಿಸಿ ಎಂದರು.

ಆಗ ಆಡಳಿತರೂಢ ಮತ್ತು ವಿಪಕ್ಷ ಸದಸ್ಯರು ನಡುವೆ ಮಾತಿನ ಚಕಮಕಿಗೆ ಕಾರಣವಾಗಿ ಸದನದಲ್ಲಿ ಸ್ವಲ್ಪಮಟ್ಟಿನ ಕಾವೇರಿದ ಚರ್ಚೆಗೆ ಎಡೆ ಮಾಡಿಕೊಟ್ಟಿತು. ಪ್ರತಿಪಕ್ಷ ನಾಯಕರ ಮಾತಿಗೆ ನಿಯಮಾವಳಿಗಳನ್ನು ಉಲ್ಲೇಖಿಸಿ ಉತ್ತರ ನೀಡಿದ ಸಚಿವ ಕೃಷ್ಣ ಭೈರೇಗೌಡ ಅವರು, ನಮಗೆ ಪ್ರತಿಷ್ಠೆ ಇಲ್ಲ. ವಿಶೇಷ ಅಧಿವೇಶನ ಎಂಬುದು ನನ್ನಿಂದಾದ ತಪ್ಪಾಗಿದೆ. ಆ ತಪ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿ, ಈ ಕುರಿತ ಕಾವೇರಿದ ಚರ್ಚೆಗೆ ತೆರೆ ಎಳೆದರು.

ಇದಕ್ಕೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ನಿಲುವಳಿ ಸೂಚನೆ ಪ್ರಸ್ತಾಪಕ್ಕೆ ಮುಂದಾದಾಗ ಸಚಿವ ಕೃಷ್ಣ ಭೈರೇಗೌಡ ಅವರು ಎದ್ದುನಿಂತು ನಿಲುವಳಿ ಸೂಚನೆ ಅವಶ್ಯ ಇಲ್ಲ. ಅದೇ ವಿಚಾರದ ಬಗ್ಗೆ ಸದನದಲ್ಲಿ ವಿಶೇಷ ಚರ್ಚೆ ಇದೆ. ನಿಲುವಳಿ ಕೈಗೆತ್ತಿಕೊಳ್ಳಲು ಬರಲ್ಲ ಎಂದು ಹೇಳಿದರು.

ಆದರೆ ಅದನ್ನು ಒಪ್ಪದ ಪ್ರತಿಪಕ್ಷ ನಾಯಕರು ನಿಲುವಳಿ ಪ್ರಸ್ತಾವಕ್ಕೆ ಅವಕಾಶ ಕೊಡಬೇಕು. ನಂತರ ಅದು ಬರುತ್ತದೋ, ಇಲ್ಲವೋ ಎಂಬುದನ್ನು ಸಭಾಧ್ಯಕ್ಷರು ತೀರ್ಮಾನ ಮಾಡಬೇಕು. ಅದು ಬಿಟ್ಟು ಅವಕಾಶವೇ ಕೊಡುವುದಿಲ್ಲ ಎನ್ನುವುದು ಸರಿಯಲ್ಲ ಎಂದು ಹೇಳಿದರು.

ಈ ಹಂತದಲ್ಲಿ ಬಿಜೆಪಿ ಸದಸ್ಯರಾದ ಸುನೀಲ್‍ಕುಮಾರ್, ಡಾ.ಸಿ.ಎನ್.ಅಶ್ವತ್ಥ್‍ನಾರಾಯಣ, ಅರವಿಂದ ಬೆಲ್ಲದ ಸೇರಿದಂತೆ ಪ್ರಮುಖರು ಪ್ರತಿಪಕ್ಷ ನಾಯಕರ ಬೆಂಬಲಕ್ಕೆ ನಿಂತು, ಮೊದಲು ಮಾತನಾಡಲು ಅವಕಾಶ ಕೊಡಿ, ನಂತರ ತೀರ್ಮಾನ ಮಾಡಿ. ನಿಲುವಳಿ ಸೂಚನೆಯಡಿ ಮಾತನಾಡಲು ಅವಕಾಶ ಕೊಡದೇ ತೀರ್ಮಾನ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸದನದಲ್ಲಿ ಸ್ವಲ್ಪಮಟ್ಟಿಗೆ ಗದ್ದಲದ ವಾತಾವರಣ ರೂಪುಗೊಂಡಿತು. ನಂತರ ಮಾತು ಮುಂದುವರೆಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಶೇಷ ಅಧಿವೇಶನ ಇಲ್ಲವೇ ಮುಂದುವರೆದ ಅಧಿವೇಶನ ಎಂಬದುನ್ನು ಸ್ಪಷ್ಟಪಡಿಸಿ. ನಾನು ನನ್ನ ನಿಲುವಳಿ ಸೂಚನಾ ಪ್ರಸ್ತಾವವನ್ನು ವಾಪಸ್ ಪಡೆಯಲು ಸಿದ್ಧ. ಇದರಲ್ಲಿ ನನಗೆ ಯಾವುದೇ ಪ್ರತಿಷ್ಠೆ ಇಲ್ಲ. ಕಸ್ತೂರಿ ರಂಗನ್ ವರದಿಯ ಬಗ್ಗೆ ಒಂದು ದಿನ ಅಲ್ಲ, ಮೂರು ದಿನ ಮಾತನಾಡಲು ನಾವು ಸಿದ್ದರಿದ್ದೇವೆ. ಆದರೆ ಸರಕಾರವೇ ಒಂದು ದಿನಕ್ಕೆ ಚರ್ಚೆಯನ್ನು ಸೀಮಿತಗೊಳಿಸಿದೆ ಎಂದರು.

ಈ ಹಂತದಲ್ಲಿ ಮಧ್ಯೆ ಪ್ರವೇಶಿಸಿ ಮಾತನಾಡಿದ ಕೃಷ್ಣ ಭೈರೇಗೌಡ ಅವರು, ವಿಶೇಷ ಅಧಿವೇಶನ, ಮುಂದುವರೆದ ಅಧಿವೇಶನ ಎಲ್ಲವೂ ಸರಿ. ಇದು ಮುಂದುವರೆದ ಅಧಿವೇಶನ ಎಂದು ಹೇಳಿದಾಗ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ತಾವು ನಿಲುವಳಿ ಸೂಚನೆ ಪ್ರಸ್ತಾವವನ್ನು ವಾಪಸ್ ಪಡೆದಿರುವುದಾಗಿ ಹೇಳಿ, ಕಸ್ತೂರಿ ರಂಗನ್ ವರದಿಯ ವಿಶೇಷ ಚರ್ಚೆಗೆ ಅನುವು ಮಾಡಿಕೊಟ್ಟರು.

Tags

Special Session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X