Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರ ಪಟ್ಟಿಯಲ್ಲಿ ‘ಇಂಡಿ’ ತಾಲೂಕಿಗೆ...

ಬರ ಪಟ್ಟಿಯಲ್ಲಿ ‘ಇಂಡಿ’ ತಾಲೂಕಿಗೆ ದೊರೆಯದ ಸ್ಥಾನ: ಕಾಂಗ್ರೆಸ್ಸಿನ ಶಾಸಕನಿಂದ ರಾಜೀನಾಮೆ: ವಿಧಾನಸಭೆಯಲ್ಲಿ ಪ್ರತಿಧ್ವನಿ

ವಾರ್ತಾಭಾರತಿವಾರ್ತಾಭಾರತಿ23 Sept 2026 6:19 PM IST
share
ಬರ ಪಟ್ಟಿಯಲ್ಲಿ ‘ಇಂಡಿ’ ತಾಲೂಕಿಗೆ ದೊರೆಯದ ಸ್ಥಾನ: ಕಾಂಗ್ರೆಸ್ಸಿನ ಶಾಸಕನಿಂದ ರಾಜೀನಾಮೆ: ವಿಧಾನಸಭೆಯಲ್ಲಿ ಪ್ರತಿಧ್ವನಿ

ಬೆಂಗಳೂರು : ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ತಾನು ಪ್ರತಿನಿಧಿಸುವ ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳು ಸೇರ್ಪಡೆಯಾಗದಿದ್ದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ.ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತಲ್ಲದೆ, ಸದನದಲ್ಲಿ ಕೆಲಕಾಲ ಗದ್ದಲಕ್ಕೆ ಕಾರಣವಾಯಿತು.

ವಿಜಯಪುರ ಜಿಲ್ಲೆಯ ಇಂಡಿ, ಚಡಚಣ ತಾಲೂಕುಗಳನ್ನು ಬರಪಟ್ಟಿಗೆ ಸೇರ್ಪಡೆಗೊಳಿಸದ ಹಿನ್ನೆಲೆ ಅಸಮಾಧಾನಗೊಂಡ ಯಶವಂತರಾಯಗೌಡ ಪಾಟೀಲ್ ಅವರು ವಿಧಾನಸೌಧದಲ್ಲಿ ಸ್ಪೀಕರ್ ಜಿ.ಎಸ್. ಪಾಟೀಲ್ ಅವರನ್ನು ಖುದ್ದು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ‘ನನ್ನ ಕ್ಷೇತ್ರದ ಜನರ ಆಸೆ, ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ನಾನು ಸ್ವ-ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ದಯವಿಟ್ಟು ಅಂಗೀಕರಿಸಬೇಕು’ ಎಂದು ಯಶವಂತರಾಯಗೌಡ ಪಾಟೀಲ್ ಕೋರಿದ್ದಾರೆ.

ಸದನದಲ್ಲಿ ಪ್ರತಿಧ್ವನಿ, ಗದ್ದಲ: ಇತ್ತ ಬರ ಪರಿಸ್ಥಿತಿಯ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿರುವ ವೇಳೆ ಆಡಳಿತ ಪಕ್ಷದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ರಾಜೀನಾಮೆ ಪತ್ರ ಸಲ್ಲಿಕೆ ಸದನದಲ್ಲಿ ಪ್ರತಿಧ್ವನಿಸಿತು. ವಿಪಕ್ಷ ಆರ್.ಅಶೋಕ್ ಕಾಂಗ್ರೆಸ್ ಶಾಸಕರ ರಾಜೀನಾಮೆ ಪತ್ರದ ಪ್ರತಿಯನ್ನು ವಿಧಾನಸಭೆಯಲ್ಲಿ ಪ್ರದರ್ಶಿಸಿ, ವಿಷಯ ಪ್ರಸ್ತಾಪಿಸಿ ಸರಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

ಮತ್ತೊಂದು ಆಘಾತಕಾರಿ ಸುದ್ದಿ, ಹೀಗೂ ಉಂಟೆ..?: ‘ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಂಡಿ ಕ್ಷೇತ್ರದ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸರಕಾರದ ಯೋಗ್ಯತೆ ಏನು?. ಶಾಸಕರು ರಾಜೀನಾಮೆ ನೀಡುತ್ತೇವೆ ಎನ್ನುತ್ತಾರೆ. ಮೊನ್ನೆ ಎಚ್.ಕೆ.ಪಾಟೀಲ್ ರಾಜೀನಾಮೆ ನೀಡಿರುವುದಾಗಿ ಹೇಳಿದ್ದರು’ ಎಂದು ವಾಗ್ದಾಳಿ ನಡೆಸಿದರು. ಈ ವಿಚಾರವು ಆಡಳಿತ ಹಾಗೂ ವಿಪಕ್ಷ ಸದಸ್ಯರುಗಳ ನಡುವೆ ವಾಗ್ವಾದ ನಡೆಯಿತು.

ರಾಜಕಾರಣಕ್ಕೆ ಬಡಿದಾಟ: ಇದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ನಮ್ಮ ಪಕ್ಷದ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪ ಹೇಳಿದ್ದ ರೀತಿಯಲ್ಲಿ 15 ಜನರನ್ನು ಹಣ ಕೊಟ್ಟು, ಖರೀದಿಸಿದ ರಾಜೀನಾಮೆ ರೀತಿಯಲ್ಲಿ ಅಲ್ಲ’ ಎಂದು ಲೇವಡಿ ಮಾಡಿದರು.

ವಿರೋಧ ಪಕ್ಷದವರು ಬಹಳ ಆತುರದಲ್ಲಿ ರಾಜಕಾರಣ ಮಾಡಲು ಬಡಿದಾಡುತ್ತಿದ್ದಾರೆ. ಏನೋ ದೊಡ್ಡದಾಗಿ ಆಚೆ ಬಂದಿದೆ ಎಂದು ಕೂಗಾಡುತ್ತಿರುವುದನ್ನು ನಾನು ಟಿವಿಯಲ್ಲಿ ನೋಡಿ ಇಲ್ಲಿಗೆ ಬಂದೆ. ನಾವೆಲ್ಲರೂ ಸಾರ್ವಜನಿಕ ಜೀವನದಲ್ಲಿದ್ದು, ಪ್ರಧಾನಿ ಮೋದಿ ನಮಗೆ ಭೀಕರ ಬರ ಪರಿಸ್ಥಿತಿ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ನಾವು ವಿವಿಧ ಪ್ರದೇಶಗಳ ಪರಿಸ್ಥಿತಿಗಳನ್ನು ಖುದ್ದು ನೋಡಿದ್ದೇವೆ. ಕಳೆದ ಅಧಿವೇಶನದಲ್ಲಿ ವಿಪಕ್ಷದವರು ರಾಜಕೀಯ ಮಾಡಲೆಂದೇ, ಬರದ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಅವಕಾಶ ನೀಡಿರಲಿಲ್ಲ. ಇಂದು ಎಲ್ಲ ಶಾಸಕರು ಅವರವರ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲು ಅವಕಾಶ ನೀಡುವ ಉದ್ದೇಶದಿಂದಲೇ ಈ ಅಧಿವೇಶನ ನಡೆಸಲಾಗುತ್ತಿದೆ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

ಸದ್ಯ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ನಾನು ರಾಜ್ಯದ ವಿವಿಧ ಭಾಗಗಳಿಗೆ ಹೋಗಿ, ನನಗಿದ್ದ ಸಮಯದಲ್ಲಿ ಸಾಧ್ಯವಾದಷ್ಟು ಪ್ರದೇಶದಲ್ಲಿ ಪರಿಶೀಲನೆ ಮಾಡಿದ್ದೇನೆ. ನಾನು ಮೊದಲು ಗದಗ ಜಿಲ್ಲೆಗೆ ಹೋಗಿ ಪರಿಶೀಲನೆ ಮಾಡಿದ್ದೆ. ಯಶವಂತರಾಯಗೌಡ ಪಾಟೀಲ್ ವಿಚಾರ ಪ್ರಸ್ತಾಪಿಸಲಾಗಿದೆ. ನಾನು ಯಶವಂತರಾಯಗೌಡ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಎಲ್ಲ ಕ್ಷೇತ್ರಗಳಲ್ಲಿ ಜನರು ಸಾಲ ಮಾಡಿ ಬೆಳೆ ಹಾಕಿದ್ದಾರೆ. ಈ ರೈತರಿಗೆ ಪರಿಹಾರ ನೀಡಬೇಕು ಎಂದು ಅವರು ಹೇಳಿದರು.

‘ನಮ್ಮ ಶಾಸಕ ಯಶವಂತರಾಯಗೌಡ ಪಾಟೀಲ್ ಭಾವನಾತ್ಮಕವಾಗಿ ರಾಜೀನಾಮೆ ನೀಡಿದ್ದು ನಿಜ. ಅವರು ಸ್ಪೀಕರ್ ಜಿ.ಎಸ್.ಪಾಟೀಲ್ ಅವರ ಬಳಿಗೂ ಬಂದಿದ್ದು, ನೀವು(ಸ್ಪೀಕರ್) ಸಿಎಂ ಜತೆ ಮಾತನಾಡಿ ಎಂದು ಸಲಹೆ ನೀಡಿದ್ದೀರಿ. ನಾನು ಅವರೊಂದಿಗೆ ಮಾತನಾಡಿ, ಸಮಾಧಾನ ಮಾಡಿ ಅವರನ್ನು ಕಳುಹಿಸಿ ಇಲ್ಲಿಗೆ ಬಂದಿರುವೆ. ಅವರಿಗೂ ಕ್ಷೇತ್ರದ ಜನರ ಒತ್ತಡವಿದೆ. ಅವರು ತಮ್ಮ ಕ್ಷೇತ್ರದ ಜನರಿಗೆ ಉತ್ತರ ನೀಡಬೇಕಲ್ಲವೇ? ಅವರು ಭಾವನಾತ್ಮಕವಾಗುವುದರಲ್ಲಿ ತಪ್ಪೇನಿಲ್ಲ’ ಎಂದು ಚರ್ಚೆ ವಿಷಯಕ್ಕೆ ತೆರೆ ಎಳೆದರು.

ರಾಜೀನಾಮೆ ಪತ್ರದಲ್ಲಿ ಏನಿದೆ?: ‘ವಿಜಯಪುರ ಜಿಲ್ಲೆಯ ನಾನು ಪ್ರತಿನಿಧಿಸುವ ಇಂಡಿ ತಾಲೂಕು 2026-27ನೆ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಬರಗಾಲಕ್ಕೆ ತುತ್ತಾಗಿದ್ದು, ಆರಂಭದಲ್ಲಿ ಸ್ವಲ್ಪ ಮಳೆ ಬಿದ್ದ ಪ್ರಯುಕ್ತ ರೈತರು ಸಾಲ ಮಾಡಿ ಬೀಜ, ಗೊಬ್ಬರಗಳನ್ನು ಖರೀದಿಸಿ, ಬಿತ್ತನೆ ಮಾಡಿರುತ್ತಾರೆ. ಆದರೆ, ಸಕಾಲಕ್ಕೆ ಮಳೆಯಾಗದ ಕಾರಣ ಬೆಳೆಗಳು ಬತ್ತಿಹೋಗಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯುಂಟಾಗಿರುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಆ.28ರಂದು ಮನವಿ ಪತ್ರವನ್ನು ಸಲ್ಲಿಸಿ, ಇಂಡಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಮನವಿ ಪತ್ರ ಸಲ್ಲಿಸಲಾಗಿತ್ತು. ಆದರೆ, ವಿಜಯಪುರ ಜಿಲ್ಲೆಯ ಒಟ್ಟು 13ತಾಲೂಕುಗಳ ಪೈಕಿ ನನ್ನ ಇಂಡಿ ಮತ್ತು ಚಡಚಣ ಈ 2 ತಾಲೂಕುಗಳನ್ನು ಹೊರತುಪಡಿಸಿ, ಇದುವರೆಗೂ ರಾಜ್ಯದ 177 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿರುತ್ತದೆ.

ನಾನು ಆಡಳಿತ ಪಕ್ಷದ ಶಾಸಕನಾಗಿದ್ದು, ನಮ್ಮ ಸರಕಾರಕ್ಕೆ ಮುಜಗರವಾಗಬಾರದು ಎಂದು ಸೂಕ್ಷ್ಮ ಮತಿಯನಾಗಿ ಹಲವಾರು ಬಾರಿ ಮನವಿ ಮಾಡಿಕೊಂಡಿದ್ದೇನೆ. ಆದರೂ ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದ್ದು, ಈಗಿನ ರಾಜಕೀಯ ವಾತಾವರಣದಲ್ಲಿ ಬಲಾಢ್ಯರಿಗೆ, ಒತ್ತಡ ತಂತ್ರಗಳನ್ನು ಎಣಿಯುವವರಿಗೆ ಮನ್ನಣೆ ನೀಡಲಾಗುತ್ತಿದೆ. ನಮ್ಮಂತಹ ಸೌಮ್ಯ ಸ್ವಭಾವದವರಿಗೆ ಯಾವುದೇ ಕೆಲಸಗಳಿಗೆ ಮನ್ನಣೆ ದೊರೆಯುತ್ತಿಲ್ಲ. ಆದುದರಿಂದ ನನ್ನ ಕ್ಷೇತ್ರದ ಜನರ ಆಶೆ, ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಪ್ರಯುಕ್ತ ನಾನು ಸ್ವ-ಇಚ್ಛೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ಅಂಗೀಕರಿಸಿ’ ಎಂದು ರಾಜೀನಾಮೆ ಪತ್ರದ ಮೂಲಕ ಯಶವಂತರಾಯಗೌಡ ವಿ.ಪಾಟೀಲ್ ಮನವಿ ಮಾಡಿದ್ದಾರೆ.

Tags

Special Sessiondrought-hit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X