ಎಸೆಸೆಲ್ಸಿ ಪರೀಕ್ಷೆ-3ರ ಫಲಿತಾಂಶ ನಾಳೆ ಪ್ರಕಟ

ಸಾಂದರ್ಭಿಕ ಚಿತ್ರ
ಬೆಂಗಳೂರು : ಎಸೆಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ(ಆ.26) ಮಧ್ಯಾಹ್ನ 12 ನಂತರ https://karresults.nic.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು.
ಪರೀಕ್ಷೆಯು ಆ.2ರಿಂದ ಆ.9ರವರೆಗೆ ರಾಜ್ಯಾದ್ಯಂತ ನಡೆಸಲಾಯಿತು. ಎಲ್ಲ ವಿಷಯಗಳ ಮೌಲ್ಯಮಾಪನ ಕಾರ್ಯವನ್ನು ಮುಕ್ತಾಯಗೊಳಿಸಲಾಗಿದ್ದು, ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.
Next Story





