Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸೆಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷಾ...

ಎಸೆಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷಾ ವಿಷಯಕ್ಕೆ ಅಂಕಗಳ ಬದಲಿಗೆ ಗ್ರೇಡ್‌: ಸರಕಾರದ ‌ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌

ವಾರ್ತಾಭಾರತಿವಾರ್ತಾಭಾರತಿ1 April 2026 7:56 PM IST
share
ಎಸೆಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷಾ ವಿಷಯಕ್ಕೆ ಅಂಕಗಳ ಬದಲಿಗೆ ಗ್ರೇಡ್‌: ಸರಕಾರದ ‌ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌

ಬೆಂಗಳೂರು : ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ (ಎಸೆಸೆಲ್ಸಿ) ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರಕಾರದ ಪ್ರಸ್ತಾವ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರಿನ ಎಚ್‌.ಎನ್‌. ಚಂದನಾ ಹಾಗೂ ಎಸ್. ವೆಂಕಟೇಶ್ ಅರ್ಜಿ ಸಲ್ಲಿಸಿದ್ದು, ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಾಗೂ ಆಯುಕ್ತರು, ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿಸಲಾಗಿದೆ. ಅರ್ಜಿ ಇನ್ನಷ್ಟೇ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ.

ಮನವಿ ಏನು?

ರಾಜ್ಯ ಸರಕಾರದ ನಿರ್ಧಾರದಿಂದ ಸಂವಿಧಾನದ ಪರಿಚ್ಛೇದ 14ರ ಅಡಿಯ ಸಮಾನತೆ ಹಕ್ಕಿನ ಉಲ್ಲಂಘನೆಯಾಗಲಿದೆ. 21ನೇ ಪರಿಚ್ಛೇದದ ಅಡಿ ಶಿಕ್ಷಣ ಹಕ್ಕಿನ ಮೇಲೆ ಪರಿಣಾಮ ಬೀರಲಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಅಸ್ಥಿರಗೊಳಿಸುತ್ತದೆ. ಸರಕಾರದ ಅಧಿಕೃತ ಆದೇಶವಿಲ್ಲದೆ ನೀತಿ ಜಾರಿಗೆ ತರಲು ಸಾಧ್ಯವಿಲ್ಲ. ಆದ್ದರಿಂದ, ಸರಕಾರದ ನಿರ್ಧಾರವನ್ನು ರದ್ದುಪಡಿಸುವ ನಿಟ್ಟಿನಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕು ಎಂದು ಪಿಐಎಲ್‌ನಲ್ಲಿ ಕೋರಲಾಗಿದೆ.

ಅರ್ಜಿಯಲ್ಲೇ‌ನಿದೆ?

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ರಾಜ್ಯದಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ಕಡ್ಡಾಯವಲ್ಲ. ಈ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲಾಗುತ್ತದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ಸೂತ್ರವನ್ನು ಜಾರಿಗೆ ತರವುದಾಗಿ ತಿಳಿಸಿದ್ದಾರೆ. ಅಲ್ಲದೆ, ಸಚಿವರು ಈ ನಿರ್ಧಾರವನ್ನು ಪ್ರಕಟಿಸುವುದಕ್ಕೂ ಮುನ್ನ ಸಾರ್ವಜನಿಕವಾಗಿ ಚರ್ಚೆ ನಡೆಸಿಲ್ಲ. ಸಚಿವ ಸಂಪುಟದ ಅನುಮೋದನೆ ಪಡೆದಿಲ್ಲ ಹಾಗೂ ಭಾಷಾ ತಜ್ಞರ ಸಲಹೆ ಇಲ್ಲದೇ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಅಂದರೆ ಮಾರ್ಚ್ 31ರಂದು ಈ ರೀತಿಯ ಹೇಳಿಕೆ ಹೊರಬಿದ್ದಿರುವುದರಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ಆದರೆ, ಈವರೆಗೂ ಈ ಕುರಿತಂತೆ ಯಾವುದೇ ಅಧಿಕೃತ ಸರಕಾರಿ ಆದೇಶ ಅಥವಾ ಅಧಿಸೂಚನೆ ಹೊರಬಂದಿಲ್ಲ. ಸಚಿವರ ಈ ನಿರ್ಧಾರಕ್ಕಾಗಿ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

Tags

SSLC ExamsThird LanguagePILHigh CourtGovernment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X