ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚ ವಿವಾದ: ಶಿಕ್ಷಣ ಇಲಾಖೆ ಸ್ಪಷ್ಟಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು: ಹಿಂದಿನ ನಾಲ್ಕು ವರ್ಷಗಳಿಂದ ವಿದ್ಯಾರ್ಥಿಗಳಿಂದಲೇ ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚವನ್ನು ಭರಿಸುತ್ತಿದ್ದು, ಈ ವರ್ಷವೂ ಅದೇ ಕ್ರಮವನ್ನು ಅನುಸರಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆಯು ಸ್ಪಷ್ಟಪಡಿಸಿದೆ.
ಪ್ರಸಕ್ತ ಸಾಲಿನ ರಾಜ್ಯ ಪಠ್ಯಕ್ರಮದಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಂಡಳಿ ವತಿಯಿಂದ ಫೆ.26ರಿಂದ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಪರೀಕ್ಷೆಗೆ ತಗಲುವ 50ರೂ.ವೆಚ್ಚವನ್ನು ಪ್ರತಿ ವಿದ್ಯಾರ್ಥಿಯಿಂದ ಶಾಲಾ ಹಂತದಲ್ಲಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದೆ.
Next Story





