ಕಾಲ್ತುಳಿತ ಪ್ರಕರಣ | ಬಿ.ದಯಾನಂದ್ ಸೇರಿ ಮೂವರು ಅಧಿಕಾರಿಗಳು ಆರೋಪ ಮುಕ್ತ; ಸರಕಾರ ಆದೇಶ

ಬಿ.ದಯಾನಂದ್
ಬೆಂಗಳೂರು : ಆರ್ಸಿಬಿ ಸಂಭ್ರಮಾಚಾರಣೆ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರದ ಅಂದಿನ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು ಆರೋಪ ಮುಕ್ತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
2025ರ ಜೂ.4ರಂದು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್ಸಿಬಿ ಗೆದ್ದ ಕಾರಣ ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚಾರಣೆ ಆಯೋಜಿಸಲಾಗಿತ್ತು. ಆಗ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಅಂದಿನ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಎಚ್.ತಕ್ಕಣ್ಣವರ್ ವಿರುದ್ಧ ಇಲಾಖೆ ವಿಚಾರಣೆಗೆ ಆದೇಶ ಮಾಡಲಾಗಿತ್ತು.
ಈಗ ಮೂವರು ಅಧಿಕಾರಿಗಳನ್ನು ಎಲ್ಲ ಆರೋಪಗಳಿಂದ ಮುಕ್ತಗೊಳಿಸಿದ್ದು, ಅವರ ವಿರುದ್ಧ ಇದ್ದ ವಿಚಾರಣೆಯನ್ನು ಮುಕ್ತಾಯಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
Next Story




