ಕಾಲ್ತುಳಿತ ಪ್ರಕರಣ : ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲು

ವಿರಾಟ್ ಕೊಹ್ಲಿ | PC : X/@RCBTweets
ಬೆಂಗಳೂರು: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿಯ ಖ್ಯಾತ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ಇಲ್ಲಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ್ ಎಂಬುವರು ಇದೀಗ ವಿರಾಟ್ ಕೊಹ್ಲಿ ವಿರುದ್ಧವೂ ಎಫ್ಐಆರ್ ದಾಖಲಿಸುವಂತೆ ದೂರು ನೀಡಿದ್ದಾರೆ.
ಮೊದಲು ದೂರು ಸ್ವೀಕರಿಸಲು ಹಿಂದೇಟು ಹಾಕಿದ ಕಬ್ಬನ್ಪಾರ್ಕ್ ಠಾಣಾ ಪೊಲೀಸರು, ಹಲವು ಗಂಟೆಗಳ ಬಳಿಕ ಕೊನೆಗೂ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಆರ್ಸಿಬಿ ಫ್ರಾಂಚೈಸಿ, ಕೆಎಸ್ಸಿಎ ಹಾಗೂ ಡಿಎನ್ಎ ಸಂಸ್ಥೆಯ ವಿರುದ್ಧ ಈಗಾಗಲೇ ದಾಖಲಾಗಿರುವ ಎಫ್ಐಆರ್ ಜತೆಗೆ ಕೊಹ್ಲಿ ವಿರುದ್ಧದ ಈ ದೂರನ್ನೂ ಪರಿಗಣಿಸುವುದಾಗಿ ಪೊಲೀಸರು ಹಿಂಬರಹ ನೀಡಿದ್ದಾರೆ.
Next Story





