ಕಾಲ್ತುಳಿತ ಪ್ರಕರಣ | ಸಿಐಡಿ ತನಿಖೆಗೆ ನೀಡಿರುವ ಆದೇಶ ಪ್ರತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಹೈಕೋರ್ಟ್
ಬೆಂಗಳೂರು : ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರ್ಸಿಬಿ ಅಭಿಮಾನಿಗಳ ಸಾವು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ ಆದೇಶದ ಪ್ರತಿ ಹಾಜರುಪಡಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಬಂಧನ ಕಾನೂನುಬಾಹಿರವೆಂದು ಬಿಡುಗಡೆ ಕೋರಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಶಮಂತ್ ಮಾವಿನಕೆರೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠವು, ಸಿಐಡಿ ತನಿಖೆಗೆ ವಹಿಸಿದ ಆದೇಶದ ಪ್ರತಿ ಹಾಜರುಪಡಿಸಲು ಸರಕಾರದ ಪರ ವಕೀಲ ಎಸ್ಪಿಪಿ ಬಿ.ಎ.ಬೆಳ್ಳಿಯಪ್ಪ ಅವರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಬಳಿಕ ವಿಚಾರಣೆಯನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದೆ.
Next Story