ಕಾಲ್ತುಳಿತ ಪ್ರಕರಣ : ಆರ್‌ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆಗೆ ಜಾಮೀನು

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಆಗಿದ್ದ ಆರ್‌ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿದೆ.
ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಷರತ್ತು ಬದ್ಧ ಜಾಮೀನು ನೀಡಿದೆ.
ಅಲ್ಲದೆ, ಶಮಂತ್ ಮಾವಿನಕೆರೆಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ನ್ಯಾಯಪೀಠ ಆದೇಶಿದೆ. ಆರೋಪಿಗಳು ದೇಶ ಬಿಟ್ಟು ತೆರಳದಂತೆ ನಿರ್ಬಂಧಿಸಿರುವ ಹೈಕೋರ್ಟ್, ಪಾಸ್ ಪೋರ್ಟ್ ಸರಂಡರ್ ಮಾಡುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ.
Next Story





