ರಾಜ್ಯ ಬಜೆಟ್ | ಅಲ್ಪಸಂಖ್ಯಾತ ಸಮುದಾಯದ ಸಚಿವರು, ಶಾಸಕರೊಂದಿಗೆ ಸಿಎಂ ಸಭೆ

ಬೆಂಗಳೂರು: 2026-27ನೆ ಸಾಲಿನ ರಾಜ್ಯ ಬಜೆಟ್ ಸಂಬಂಧ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳ ಕುರಿತು ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಝಮೀರ್ ಅಹ್ಮದ್ ಖಾನ್, ರಹೀಂ ಖಾನ್, ಡಿ.ಸುಧಾಕರ್, ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಶಾಸಕರಾದ ತನ್ವೀರ್ ಸೇಠ್, ಕನೀಝ್ ಫಾತಿಮಾ, ಯಾಸೀರ್ ಅಹ್ಮದ್ ಖಾನ್ ಪಠಾಣ್, ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಬಲ್ಕೀಸ್ ಬಾನು, ಐವನ್ ಡಿ’ಸೋಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Next Story




