Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಬಜೆಟ್ | ಅಲ್ಪಸಂಖ್ಯಾತರ...

ರಾಜ್ಯ ಬಜೆಟ್ | ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 7,900 ಕೋಟಿ ರೂ.ಪ್ರಸ್ತಾವನೆ ಸಲ್ಲಿಕೆ : ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ5 Feb 2026 7:40 PM IST
share
ರಾಜ್ಯ ಬಜೆಟ್ | ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 7,900 ಕೋಟಿ ರೂ.ಪ್ರಸ್ತಾವನೆ ಸಲ್ಲಿಕೆ : ಝಮೀರ್ ಅಹ್ಮದ್

ಬೆಂಗಳೂರು : ರಾಜ್ಯ ಸರಕಾರದ 2026-27ನೇ ಸಾಲಿನ ಬಜೆಟ್‍ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 7,900 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಗುರುವಾರ ನಗರದ ತಿರುಮೇನಹಳ್ಳಿಯಲ್ಲಿರುವ ಹಜ್ ಭವನದಲ್ಲಿ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ದ ವತಿಯಿಂದ ಆಯೋಜಿಸಲಾಗಿದ್ದ 2025-26ನೆ ಸಾಲಿನ ಸ್ವಾವಲಂಬಿ ಸಾರಥಿ, ವೃತ್ತಿ ಪ್ರೋತ್ಸಾಹ ಸೇರಿದಂತೆ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 10 ಸಾವಿರ ಕೋಟಿ ರೂ.ಗಳನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ, ಕಳೆದ ವರ್ಷ ನಮ್ಮ ಇಲಾಖೆಗೆ 4,500 ಕೋಟಿ ರೂ.ಗಳನ್ನು ನೀಡಿದ್ದರು. 2026-27ನೆ ಸಾಲಿಗೆ 7900 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವನೆ ಸಲ್ಲಸಿದ್ದೇವೆ. ಕನಿಷ್ಠ 6000 ರಿಂದ 6500 ಕೋಟಿ ರೂ.ಸಿಗುವ ನಿರೀಕ್ಷೆಯಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಅಲ್ಪಸಂಖ್ಯಾತರ ಸಮುದಾಯದವರು ನವೋದ್ಯಮಗಳನ್ನು ಆರಂಭಿಸಲು 2025-26ನೆ ಸಾಲಿನಲ್ಲಿ ಎಲಿವೇಟ್ ಮೈನಾರಿಟೀಸ್ ಕಾರ್ಯಕ್ರಮದ ಮೂಲಕ 30 ನವೋದ್ಯಮಗಳನ್ನು ಗುರುತಿಸಿ 9 ಕೋಟಿ ರೂ.ಆರ್ಥಿಕ ನೆರವು ಒದಗಿಸಲಾಗಿದೆ. ಪ್ರತಿಯೊಂದು ನವೋದ್ಯಮವು 21 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳ ನೆರವು ಪಡೆದಿದೆ ಎಂದು ಅವರು ಹೇಳಿದರು.

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ 12,751 ವಿದ್ಯಾರ್ಥಿಗಳಿಗೆ 131.39 ಕೋಟಿ ರೂ., ವಿದೇಶ ಶಿಕ್ಷಣ ಯೋಜನೆಯಡಿ 200 ಫಲಾನುಭವಿಗಳಿಗೆ 20 ಕೋಟಿ ರೂ., ನೇರ ವ್ಯಾಪಾರ ಸಾಲ ಯೋಜನೆಯಡಿ 100 ಫಲಾನುಭವಿಗಳಿಗೆ 15 ಕೋಟಿ ರೂ.ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಸಮುದಾಯ ಆಧಾರಿತ ತರಬೇತಿ ಯೋಜನೆಯಡಿ 1085 ಫಲಾನುಭವಿಗಳಿಗೆ 6.56 ಕೋಟಿ ರೂ. ನೆರವು ಒದಗಿಸಲಾಗಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ವೃತ್ತಿ ಪ್ರೋತ್ಸಾಹ ಯೋಜನೆಯಡಿ 550 ಫಲಾನುಭವಿಗಳಿಗೆ 50 ಸಾವಿರ ರೂ.ಸಬ್ಸಿಡಿ ಹಾಗೂ 50 ಸಾವಿರ ರೂ.ಸಾಲ ಸೇರಿದಂತೆ ಒಟ್ಟು ತಲಾ 1 ಲಕ್ಷ ರೂ.ಗಳಂತೆ 5.50 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಶ್ರಮ ಶಕ್ತಿ ಯೋಜನೆಯಡಿ 1000 ಫಲಾನುಭವಿಗಳಿಗೆ ತಲಾ 50 ಸಾವಿರ ರೂ.(25 ಸಾವಿರ ರೂ.ಸಬ್ಸಿಡಿ ಹಾಗೂ 25 ಸಾವಿರ ರೂ.ಸಾಲ)ಗಳಂತೆ 5 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.

ಚಾಲಕರು ಮಾಲಕರು ಆಗಬೇಕು ಎಂಬ ಉದ್ದೇಶದಿಂದ ಆರಂಭಿಸಲಾಗಿರುವ ಸ್ವಾವಲಂಬಿ ಸಾರಥಿ ಯೋಜನೆಯಡಿ(ಟ್ಯಾಕ್ಸಿ ಮತ್ತು ಗೂಡ್ಸ್) 623 ಫಲಾನುಭವಿಗಳಿಗೆ ಟ್ಯಾಕ್ಸಿ ಹಾಗೂ 174 ಫಲಾನುಭವಿಗಳಿಗೆ ಗೂಡ್ಸ್ ಆಟೋಗಳನ್ನು ನೀಡಲಾಗುತ್ತಿದೆ. ಈ ಯೋಜನೆಯಡಿ ಒಟ್ಟು 797 ಫಲಾನುಭವಿಗಳಿಗೆ 20 ಕೋಟಿ ರೂ.ಗಳ ಸಬ್ಸಿಡಿ ನೀಡುತ್ತಿದ್ದೇವೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಮನುಷ್ಯನಿಗೆ ಶಿಕ್ಷಣ ತುಂಬಾ ಮುಖ್ಯ. ಇತ್ತೀಚಿನ ವರ್ಷಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಗಳಲ್ಲಿ ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ. ಶಿಕ್ಷಣವು ಒಂದು ಪ್ರಬಲ ಅಸ್ತ್ರ. ಪ್ರತಿಯೊಬ್ಬರಿಗೂ ತನ್ನ ಹಾಗೂ ತನ್ನ ಕುಟುಂಬದ ಭವಿಷ್ಯ ರೂಪಿಸಲು ಶಿಕ್ಷಣ ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ, 2025-26ನೆ ಸಾಲಿನಲ್ಲಿ ಕೆಎಂಡಿಸಿ ವತಿಯಿಂದ ವಿವಿಧ ಸವಲತ್ತುಗಳಿಗಾಗಿ ಆನ್‍ಲೈನ್ ಮೂಲಕ 60 ಸಾವಿರ ಮಂದಿ ಅರ್ಜಿ ಹಾಕಿದ್ದರು. ಇದರಲ್ಲಿ 20 ಸಾವಿರ ಅರ್ಜಿಗಳನ್ನು ಸ್ವೀಕೃತಗೊಳಿಸಿ ಸುಮಾರು 250 ಕೋಟಿ ರೂ.ವೆಚ್ಚದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.

ಅಲ್ಪಸಂಖ್ಯಾತ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ರಾಜ್ಯ ಸರಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳು ಅದರ ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯೆ ಬಲ್ಕೀಸ್ ಬಾನು, ಮೌಲಾನಾ ಮಕ್ಸೂದ್ ಇಮ್ರಾನ್, ಕೆಎಂಡಿಸಿ ಅಧ್ಯಕ್ಷ ಬಿ.ಕೆ.ಅಲ್ತಾಫ್ ಖಾನ್, ವ್ಯವಸ್ಥಾಪಕ ನಿರ್ದೇಶಕ ಶೇಖ್ ಲತೀಫ್, ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಕರ್ ಅಹ್ಮದ್ ಖಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags

State Budgetminority welfareZameer Ahmed
share
ವಾರ್ತಾಭಾರತಿ
ವಾರ್ತಾಭಾರತಿ
Next Story
X