Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಬಜೆಟ್ ಗಾತ್ರ 4.48 ಲಕ್ಷ ಕೋಟಿ...

ರಾಜ್ಯ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.ಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 March 2026 5:20 PM IST
share
ರಾಜ್ಯ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.ಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ
► 22,957 ಕೋಟಿ ರೂ.ರಾಜಸ್ವ ಕೊರತೆ; ರಾಜ್ಯದ ಮೇಲಿನ ಒಟ್ಟು ಸಾಲ 8,24,389 ಕೋಟಿ ರೂ.ಗಳಿಗೆ ಏರಿಕೆ ► ಯಾವ ಇಲಾಖೆಗೆ ಎಷ್ಟು ಅನುದಾನ?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ 4,48,004 ಕೋಟಿ ರೂ.ಗಳ 2026-27ನೆ ಸಾಲಿನ ಬೃಹತ್ ಗಾತ್ರದ ಬಜೆಟ್ ಮಂಡನೆ ಮಾಡಿದ್ದು, 22,957 ಕೋಟಿ ರೂ.ಗಳ ರಾಜಸ್ವ ಕೊರತೆ ಹಾಗೂ 2026-27ರ ಅಂತ್ಯಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆಗಳು(ಸಾಲ) 8,24,389 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2026-27ನೆ ಸಾಲಿಗೆ ಒಟ್ಟು 3,15,050 ಕೋಟಿ ರೂ.ಗಳ ರಾಜಸ್ವ ಸ್ವೀಕೃತಿಯನ್ನು ಅಂದಾಜಿಸಲಾಗಿದೆ. ಇದರಲ್ಲಿ 2.20 ಲಕ್ಷ ಕೋಟಿ ರೂ.ಗಳ ಸ್ವಂತ ತೆರಿಗೆ ರಾಜಸ್ವ, 16 ಸಾವಿರ ಕೋಟಿ ರೂ.ಗಳ ತೆರಿಗೆಯೇತರ ರಾಜಸ್ವ ಮತ್ತು ಕೇಂದ್ರ ಸರಕಾರದ ಸ್ವೀಕೃತಿ 79,050 ಕೋಟಿ ರೂ.ಗಳು ಸೇರಿವೆ ಎಂದು ಅವರು ಹೇಳಿದರು.

2026-27ನೆ ಸಾಲಿಗೆ ಒಟ್ಟು 1.32 ಲಕ್ಷ ಕೋಟಿ ರೂ.ಗಳ ಸಾಲ ಮತ್ತು 190 ಕೋಟಿ ರೂ.ಗಳ ಸಾಲೇತರ ಬಂಡವಾಳ ಸ್ವೀಕೃತಿಯನ್ನು ಅಂದಾಜಿಸಲಾಗಿದೆ. ಈ ಎಲ್ಲ ಸ್ವೀಕೃತಿಗಳು ಸೇರಿ 2026-27ನೆ ಸಾಲಿನಲ್ಲಿ ಒಟ್ಟು 4,47,240 ಕೋಟಿ ರೂ.ಗಳ ಸ್ವೀಕೃತಿಯನ್ನು ಅಂದಾಜಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಆಯವ್ಯಯದಲ್ಲಿ ಒಟ್ಟು 4,48,004 ಕೋಟಿ ರೂ.ಗಳ ವೆಚ್ಚವನ್ನು ಅಂದಾಜಿಸಲಾಗಿದೆ, ಇದರಲ್ಲಿ 3,38,007 ಕೋಟಿ ರೂ.ಗಳ ರಾಜಸ್ವ ವೆಚ್ಚ, 74,682 ಕೋಟಿ ರೂ.ಗಳ ಬಂಡವಾಳ ವೆಚ್ಚ ಮತ್ತು 35,316 ಕೋಟಿ ರೂ.ಗಳ ಸಾಲ ಮರುಪಾವತಿ ಒಳಗೊಂಡಿದೆ. ವಿತ್ತೀಯ ಕೊರತೆ 97,449 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದ್ದು, ಜಿ.ಎಸ್.ಡಿ.ಪಿ ಯ ಶೇ.2.95 ರಷ್ಟಿದೆ ಎಂದು ಅವರು ಹೇಳಿದರು.

2026-27ರ ಅಂತ್ಯಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆಗಳು 8,24,389 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದ್ದು, ಜಿ.ಎಸ್.ಡಿ.ಪಿಯ ಶೇ.24.94 ರಷ್ಟಿದೆ. 2026-27ನೆ ಸಾಲಿಗೆ ರಾಜ್ಯದ ವಿತ್ತೀಯ ಕೊರತೆ ಮತ್ತು ಒಟ್ಟು ಹೊಣೆಗಾರಿಕೆಗಳನ್ನು, ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡದಂತೆ ಪಾಲನೆ ಮಾಡಲಾಗಿದ್ದು, ವಿತ್ತೀಯ ಶಿಸ್ತನ್ನು ಕಾಯ್ದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು.

ಪರಿಷ್ಕೃತ ಅಂದಾಜು: 2025-26ರ ಪರಿಷ್ಕೃತ ಅಂದಾಜಿನಲ್ಲಿ ಒಟ್ಟು ಸ್ವೀಕೃತಿಗಳು 3,93,572 ಕೋಟಿ ರೂ.ಗಳು. ರಾಜಸ್ವ ಸ್ವೀಕೃತಿಗಳು 2,77,402 ಕೋಟಿ ರೂ.ಗಳೆಂದು ಅಂದಾಜಿಸಲಾಗಿದ್ದು, ಇದರಲ್ಲಿ ರಾಜ್ಯದ ಸ್ವಂತ ತೆರಿಗೆ ರಾಜಸ್ವವು 1,93,100 ಕೋಟಿ ರೂ., ತೆರಿಗೆಯೇತರ ರಾಜಸ್ವವು 17,500 ಕೋಟಿ ರೂ. ಮತ್ತು ಕೇಂದ್ರದಿಂದ 66,802 ಕೋಟಿ ರೂ.ಗಳ ರಾಜಸ್ವ ಸ್ವೀಕೃತಿ ಸೇರಿದೆ ಎಂದು ಅವರು ಮಾಹಿತಿ ನೀಡಿದರು.

2025-26ರ ಪರಿಷ್ಕೃತ ಅಂದಾಜಿನಲ್ಲಿ, ಒಟ್ಟು ವೆಚ್ಚವು 3,95,307 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ, ಇದರಲ್ಲಿ 3,02,851 ಕೋಟಿ ರೂ.ಗಳ ರಾಜಸ್ವ ವೆಚ್ಚ ಮತ್ತು ಸಾಲ ಮರುಪಾವತಿ ಒಳಗೊಂಡು ಬಂಡವಾಳ ವೆಚ್ಚ 92,456 ಕೋಟಿ ರೂ.ಗಳು ಸೇರಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಸ್ವಂತ ತೆರಿಗೆ ರಾಜಸ್ವಗಳ ವಿವರ

ಮೋಟಾರು ವಾಹನ ತೆರಿಗೆ-15,500 ಕೋಟಿ ರೂ.(ಶೇ.7).

ನೋಂದಣಿ ಮತ್ತು ಮುದ್ರಾಂಕ-29 ಸಾವಿರ ಕೋಟಿ ರೂ.(ಶೇ.13).

ರಾಜ್ಯ ಅಬಕಾರಿ-45 ಸಾವಿರ ಕೋಟಿ ರೂ.(ಶೇ.20).

ವಾಣಿಜ್ಯ ತೆರಿಗೆಗಳು-1.25 ಲಕ್ಷ ಕೋಟಿ ರೂ.(ಶೇ.57).

ಇತರೆ-5500 ಕೋಟಿ ರೂ.(ಶೇ.3).

ಇಲಾಖಾವಾರು ಹಂಚಿಕೆ

ಪಶುಸಂಗೋಪನೆ ಮತ್ತು ಮೀನುಗಾರಿಕೆ-4084 ಕೋಟಿ ರೂ.

ಕೃಷಿ ಮತ್ತು ತೋಟಗಾರಿಕೆ-8373 ಕೋಟಿ ರೂ.

ಆಹಾರ ಮತ್ತು ನಗಾರಿಕ ಸರಬರಾಜು-7942 ಕೋಟಿ ರೂ.

ಲೋಕೋಪಯೋಗಿ-11,424 ಕೋಟಿ ರೂ.

ಸಮಾಜ ಕಲ್ಯಾಣ-18,612 ಕೋಟಿ ರೂ.

ಕಂದಾಯ-19,843 ಕೋಟಿ ರೂ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ-17,817 ಕೋಟಿ ರೂ.

ಒಳಾಡಳಿತ ಮತ್ತು ಸಾರಿಗೆ-23,100 ಕೋಟಿ ರೂ.

ನಗರಾಭಿವೃದ್ಧಿ ಮತ್ತು ವಸತಿ-22,203 ಕೋಟಿ ರೂ.

ನೀರಾವರಿ-22,436 ಕೋಟಿ ರೂ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್-26,559 ಕೋಟಿ ರೂ.

ಇಂಧನ-29,947 ಕೋಟಿ ರೂ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ-34,929 ಕೋಟಿ ರೂ.

ಶಿಕ್ಷಣ-47,224 ಕೋಟಿ ರೂ.

ಇತರೆ-1,72,757 ಕೋಟಿ ರೂ.

Tags

SiddaramaiahKarnataka Budget
share
ವಾರ್ತಾಭಾರತಿ
ವಾರ್ತಾಭಾರತಿ
Next Story
X