Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬರಗಾಲ ನಿರ್ವಹಿಸುವಲ್ಲಿ ರಾಜ್ಯ...

ಬರಗಾಲ ನಿರ್ವಹಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲ: ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ9 March 2024 12:49 PM IST
share
ಬರಗಾಲ ನಿರ್ವಹಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬರಗಾಲ ನಿರ್ವಹಿಸುವಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.

ನಗರದ ಮಲ್ಲೇಶ್ವರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ವಿಕಸಿತ ಭಾರತ ಎಲ್.ಇ.ಡಿ ಪ್ರಚಾರ ವಾಹನಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಭೀಕರ ಬರಗಾಲ ಇದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬರದ ಸಮಸ್ಯೆಯಿಂದ ಕುಡಿಯುವ ನೀರಿಗೂ ಹಾಹಾಕಾರ ಇದೆ. ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿ ಮರೆತಿದ್ದಾರೆ" ಎಂದು ತಿಳಿಸಿದರು.

"ಕಾಳಜಿ ಇಲ್ಲದ ಸರಕಾರ ಇದು. ಸೋಮವಾರ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ನಗರ ಜಿಲ್ಲಾಧ್ಯಕ್ಷರಿಗೆ ತಿಳಿಸಿದ್ದೇನೆ. ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ತಮ್ಮನ್ನು ಸೀಮಿತಗೊಳಿಸಿದ್ದಾರೆ. ಬೆಂಗಳೂರಿನ ನೀರಿನ ಸಮಸ್ಯೆಯತ್ತ ಗಮನ ಕೊಡುತ್ತಿಲ್ಲ. ಕುಡಿಯುವ ನೀರಿನ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ" ಎಂದು ದೂರಿದರು.

"ಇದು ದೇಶದ ಭವಿಷ್ಯ ರೂಪಿಸುವ ಚುನಾವಣೆ. ರಾಜ್ಯದಲ್ಲಿ 28 ಕ್ಷೇತ್ರದಲ್ಲೂ ಬಿಜೆಪಿ- ಜೆಡಿಎಸ್ ಗೆಲ್ಲಿಸಲು ಪ್ರಜ್ಞಾವಂತ ಜನರು ನಿರ್ಧರಿಸಿದ್ದಾರೆ. ಸಾಮಾನ್ಯ ಜನರ ಅಭಿಪ್ರಾಯ, ವಿವಿಧ ಕ್ಷೇತ್ರಗಳ ಜನರ ಅಭಿಮತ ಪಡೆದು ಸಂಕಲ್ಪ ಪತ್ರ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ" ಎಂದು ವಿವರಿಸಿದರು.

"ಸರಕಾರದ ಸಾಧನೆ ತಿಳಿಸುವುದು ಮಾತ್ರವಲ್ಲದೆ ಸಲಹಾ ಪೆಟ್ಟಿಗೆಯೊಂದಿಗೆ ಈ ವಾಹನ ತೆರಳಲಿದೆ. ಜನರ ಅಭಿಪ್ರಾಯ ಪಡೆಯುವುದು ಮತ್ತು ಅದನ್ನು ಅನುಷ್ಠಾನಕ್ಕೆ ತರಲು ಶ್ರಮಿಸುವುದು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ" ಎಂದು ನುಡಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, "ನರೇಂದ್ರ ಮೋದಿಯವರು ವಿಕಸಿತ ಭಾರತದ ಕೇಂದ್ರ ಬಿಂದು. ಮೋದಿ ಗ್ಯಾರಂಟಿ ಮೂಲಕ ನಾವು ಚುನಾವಣೆ ಎದುರಿಸೋಣ ಎಂದರಲ್ಲದೆ, ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ. ರಾಹುಲ್ ಎಂದರೆ ಏನಿಲ್ಲ, ಏನಿಲ್ಲ. ಅವರ ಹೆಸರು ಹೇಳಲು ಹಿಂದೇಟು ಹಾಕುವ ಸ್ಥಿತಿ ಆ ಪಕ್ಷದಲ್ಲೇ ಇದೆ ಎಂದು ಟೀಕಿಸಿದರು.

ದಲಿತರ ಬಗ್ಗೆ ಕಾಂಗ್ರೆಸ್‍ನಲ್ಲಿ ಅಸಹನೆ ಇದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ‘ಇಂಡಿ’ ನೇತೃತ್ವವನ್ನು ನೀಡಲು ಕಾಂಗ್ರೆಸ್ಸಿನವರೇ ಹಿಂದೇಟು ಹಾಕುತ್ತಾರೆ ಎಂದು ಅವರು ವಿವರಿಸಿದರು. ಕೈ ಕೆಸರಾದರೆ ಬಾಯಿ ಮೊಸರು ಎಂಬಂತೆ ನಾವು ಪ್ರಯತ್ನದ ಮೂಲಕ ಮೋದಿಜೀ ಅವರನ್ನು ಗೆಲ್ಲಿಸಬೇಕಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬರಗಾಲ ತೀವ್ರವಾಗಿದೆ. ತಮಿಳುನಾಡಿಗೆ ನೀರು ಕೊಡುವ ಮೂಲಕ ಕಾಂಗ್ರೆಸ್ ಮಾಡಿದ ತಪ್ಪಿನಿಂದ ನಾವು ನೀರಿನ ಬವಣೆ ಎದುರಿಸಬೇಕಾಗಿದೆ. ಬೋರ್ ವೆಲ್ ಕೊರೆಸಲೂ ಅವರ ಬಳಿ ಹಣ ಇಲ್ಲ ಎಂದು ಟೀಕಿಸಿದರು. ಜನರೆಲ್ಲ ಗುಳೆ ಹೋಗುವಂತಾಗಿದೆ. 2 ಸಾವಿರ ಕೊಟ್ಟಿದ್ದೇವೆ ಎನ್ನುತ್ತಾರೆ. ಜನರಿಗೆ ಉದ್ಯೋಗ, ನೀರು, ಆಹಾರ ಬೇಕಿದೆ. ಅದನ್ನು ಕೊಡಲಾಗದ ದಿವಾಳಿ ಸರಕಾರ ಇಲ್ಲಿದೆ ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರರ ತಪ್ಪು ನಡವಳಿಕೆಯಿಂದ ನೀರಿನ ಸಮಸ್ಯೆ ತೀವ್ರವಾಗಿದೆ. ಇದೊಂದು ಕೆಟ್ಟ ಸರಕಾರ. ಅದನ್ನು ತೊಲಗಿಸಬೇಕು. ಎಲ್ಲರೂ ಇಡೀ ರಾಜ್ಯ ಪ್ರವಾಸ ಮಾಡೋಣ. 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲೋಣ ಎಂದು ಮನವಿ ಮಾಡಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಬೈರತಿ ಬಸವರಾಜ್, ಮತ್ತಿತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X