Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಾರಾಷ್ಟ್ರದಂತೆ ಒಂದೇ ರಾತ್ರಿಯಲ್ಲಿ...

ಮಹಾರಾಷ್ಟ್ರದಂತೆ ಒಂದೇ ರಾತ್ರಿಯಲ್ಲಿ ರಾಜ್ಯ ಸರಕಾರ ಪತನವಾಗಬಹುದು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ

ʼʼಜಗದೀಶ್ ಶೆಟ್ಟರ್ ಅವರನ್ನು ನಿನ್ನೆಯೂ ಭೇಟಿ ಮಾಡಿದ್ದೆ...ʼʼ

ವಾರ್ತಾಭಾರತಿವಾರ್ತಾಭಾರತಿ30 Oct 2023 6:38 PM IST
share
ಮಹಾರಾಷ್ಟ್ರದಂತೆ ಒಂದೇ ರಾತ್ರಿಯಲ್ಲಿ ರಾಜ್ಯ ಸರಕಾರ ಪತನವಾಗಬಹುದು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ

ಬೆಳಗಾವಿ, ಅ.30: ರಾಜ್ಯ ಸರಕಾರ ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವಲ್ಲಿ ವಿಫಲವಾಗಿದೆ. ಆದುದರಿಂದ, ನಮ್ಮ ಪಕ್ಷದ ವಿರುದ್ಧ ‘ಆಪರೇಷನ್ ಕಮಲ’ದ ಆರೋಪ ಮಾಡಲಾಗುತ್ತಿದೆ. ಮಹಾರಾಷ್ಟ್ರ ಮಾದರಿಯಲ್ಲಿ ರಾಜಕೀಯ ಬೆಳವಣಿಗೆಗಳು ನಡೆದರೆ ಒಂದೇ ರಾತ್ರಿಯಲ್ಲಿ ರಾಜ್ಯ ಸರಕಾರ ಪತನವಾಗಬಹುದು ಎಂದು ಮಾಜಿ ಸಚಿವ, ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಭವಿಷ್ಯ ನುಡಿದಿದ್ದಾರೆ.

ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಾವು ಯಾವುದೆ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಾವು ಅಧಿಕಾರಕ್ಕೆ ಬರಬೇಕಾದರೆ ಸಾಕಷ್ಟು ಜನ ಶಾಸಕರು ಬೇಕು. ಆದರೆ, ಮಹಾರಾಷ್ಟ್ರ ಮಾದರಿಯಲ್ಲಿ ಬೆಳವಣಿಗೆ ಆದರೆ ಸರಕಾರ ಬದಲಾಗಬಹುದು ಎಂದರು.

ಅಕ್ರಮ ಆಸ್ತಿಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ನಲ್ಲಿ ಹಿನ್ನಡೆ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಶೀಘ್ರವೆ ಮಾಜಿ ಆಗಲಿದ್ದಾರೆ. ಒಂದು ರೂಪಾಯಿ ತಿಂದವರನ್ನೆ ಜೈಲಿಗೆ ಹಾಕುತ್ತಾರೆ. ಡಿ.ಕೆ.ಶಿವಕುಮಾರ್ ಅವರದ್ದು ನೂರಾರು ಕೋಟಿ ರೂ.ಗಳ ಅಕ್ರಮ ಇದೆ. ಐದು ವರ್ಷದಲ್ಲಿ ಇವರ ಆಸ್ತಿ ಐದು ಪಟ್ಟು ಹೆಚ್ಚಾಗಿದ್ದು ಹೇಗೆ ಎಂಬುದನ್ನು ನ್ಯಾಯಾಲಯಕ್ಕೆ ತಿಳಿಸಬೇಕಲ್ಲ ಎಂದು ಅವರು ಹೇಳಿದರು.

2019ರಲ್ಲಿ ಅನಿವಾರ್ಯ ಕಾರಣಗಳಿಂದಾಗಿ, ಡಿ.ಕೆ.ಶಿವಕುಮಾರ್ ಅವರ ಸರ್ವಾಧಿಕಾರಿ ಧೋರಣೆ, ಸೊಕ್ಕಿನ ಪ್ರವೃತ್ತಿಯಿಂದಾಗಿ ಸರಕಾರ ಬೀಳಿಸಿದೆವು. ಮಲ್ಲಿಕಾರ್ಜುನ ಖರ್ಗೆ ಅಥವಾ ಸಿದ್ದರಾಮಯ್ಯ ವಿರುದ್ಧ ನಾವು ಏನು ಮಾಡಿಲ್ಲ. ಆದರೆ, ಈಗ ಡಿ.ಕೆ.ಶಿವಕುಮಾರ್ ನಾಟಕ ಮಂಡಳಿಯ ಸದಸ್ಯರು ಬಿಜೆಪಿ ನಾಯಕರು ಶಾಸಕರಿಗೆ 50, 100 ಕೋಟಿ ರೂ. ಆಮಿಷವೊಡ್ಡುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ನಿನ್ನೆಯೂ ಭೇಟಿ ಮಾಡಿದ್ದೆ. ಸರಿಯಾದ ಸಮಯಕ್ಕೆ ಅವರು ಸರಿಯಾದ ನಿರ್ಣಯ ತೆಗೆದುಕೊಳ್ಳುತ್ತಾರೆ. ಆದರೆ, ನಾನು ಯಾವುದೆ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಹೋಗುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ರಾಜ್ಯಕ್ಕೆ ಅಂಬೇಡ್ಕರ್ ಹೆಸರಿಡಿ: ವಿಜಯಪುರ ಜಿಲ್ಲೆಗೆ ಬಸವಣ್ಣನವರ ಹೆಸರಿಡುವ ಕುರಿತು ನಡೆಯುತ್ತಿರುವ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಾಲ್ಮೀಕಿ, ಬಸವಣ್ಣ, ಚನ್ನಮ್ಮ ಸೇರಿದಂತೆ ಅನೇಕ ಮಹನೀಯರನ್ನು ಅವರ ಇತಿಹಾಸದಿಂದ ನಾವು ತಿಳಿದುಕೊಂಡಿದ್ದೇವೆ. ಆದರೆ, ಅಂಬೇಡ್ಕರ್ ಅವರ ಜೀವನ, ಸಾಧನೆ ನಮ್ಮ ಮುಂದಿದೆ. ಆದುದರಿಂದ, ರಾಜ್ಯಕ್ಕೆ ಅಂಬೇಡ್ಕರ್ ನಾಡು ಎಂದು ಕರೆಯುವುದು ಸೂಕ್ತ ಎಂದರು.

ಇನ್ನು ಕರ್ನಾಟಕ ರಾಜ್ಯಕ್ಕೆ ಬಸವಣ್ಣನ ನಾಡು ಎಂದು ಹೆಸರಿಡಲು ಸಚಿವ ಎಂಪಿ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದಕ್ಕೆ ರಮೇಶ್ ಜಾರಕೊಹೊಳಿ ಪ್ರತಿಕ್ರಿಯಿಸಿ, ಬಸವಣ್ಣ ಅನ್ನೋದಕ್ಕಿಂತ ಅಂಬೇಡ್ಕರ್ ಹೆಸರಿಡಲು ನನ್ನ ಮನವಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X