Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಭಿಮಾನ್ ಸ್ಟುಡಿಯೋ ಜಾಗ ಹಿಂಪಡೆಯಲು...

ಅಭಿಮಾನ್ ಸ್ಟುಡಿಯೋ ಜಾಗ ಹಿಂಪಡೆಯಲು ಮುಂದಾದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ29 Aug 2025 7:57 PM IST
share
ಅಭಿಮಾನ್ ಸ್ಟುಡಿಯೋ ಜಾಗ ಹಿಂಪಡೆಯಲು ಮುಂದಾದ ರಾಜ್ಯ ಸರಕಾರ

ಬೆಂಗಳೂರು, ಆ.29: ಕನ್ನಡ ಚಿತ್ರರಂಗದ ಹಿರಿಯ ನಟ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಹಿನ್ನೆಲೆ ವಿವಾದಕ್ಕೆ ಗುರಿಯಾಗಿರುವ ಅಭಿಮಾನ್ ಸ್ಟುಡಿಯೋ ಜಾಗವನ್ನು ಹಿಂಪಡೆಯಲು ರಾಜ್ಯ ಸರಕಾರ ಮುಂದಾಗಿದ್ದು, ಅದರಂತೆ ಅರಣ್ಯ ಇಲಾಖೆಯು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ಆ.22ರಂದು ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ರವೀಂದ್ರಕುಮಾರ್ ಅವರು, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಪತ್ರ ಬರೆದಿದ್ದು, ಬೆಂಗಳೂರು ದಕ್ಷಿಣ ತಾಲೂಕಿನ, ಕೆಂಗೇರಿ ಹೋಬಳಿಯ ಮೈಲಸಂದ್ರ ಗ್ರಾಮದ ಸರ್ವೆ ನಂ.26ರಲ್ಲಿರುವ ಅಭಿಮಾನ್ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ನಿರ್ದೇಶನ ಮಾಡಿದ್ದಾರೆ.

ಏನಿದು ವಿವಾದ?: ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎನ್.ಬಾಲಕೃಷ್ಣ ಅವರಿಗೆ 1970ರಲ್ಲಿ ಸ್ಟುಡಿಯೋ ನಿರ್ಮಾಣದ ಉದ್ದೇಶಕ್ಕೆ 20 ಎಕರೆ ಭೂಮಿಯನ್ನು 20 ವರ್ಷ ಗುತ್ತಿಗೆಗೆ ನೀಡಲಾಗಿತ್ತು. ನಂತರ ಭೋಗ್ಯದ ಅವಧಿ ವಿಸ್ತರಣೆ ಮಾಡಿಕೊಳ್ಳಲಾಗಿತ್ತು. 2004ರಲ್ಲಿ ಆರ್ಥಿಕ ಸಂಕಷ್ಟದ ನೆಪ ಹೇಳಿ ಬಾಲಕೃಷ್ಣ ಅವರ ಮಕ್ಕಳಾದ ಶ್ರೀನಿವಾಸ್ ಹಾಗೂ ಗಣೇಶ್ ಜಿಲ್ಲಾಧಿಕಾರಿಗಳ ಬಳಿ 10 ಎಕರೆ ಮಾರಾಟ ಮಾಡಲು ಒಪ್ಪಿಗೆ ಕೇಳಿದ್ದರು ಎನ್ನಲಾಗಿದೆ.

ಜಿಲ್ಲಾಧಿಕಾರಿಗಳ ವಿಶೇಷ ಅಧಿಕಾರ ಬಳಸಿ ಇದ್ದನ್ನು ಮಾರಾಟ ಮಾಡಲಾಗಿದ್ದು, ಇದರಿಂದ ಬಂದ ಹಣವನ್ನು ಸ್ಟುಡಿಯೋ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಿಕೊಳ್ಳುವುದಾಗಿ ಸರಕಾರಕ್ಕೆ ತಿಳಿಸಿದ್ದರೆಂದು ತಿಳಿದುಬಂದಿದೆ. ಆದರೆ ಈವರೆಗೆ ಸ್ಟುಡಿಯೋ ಯಥಾಸ್ಥಿತಿಯಲ್ಲೇ ಇದೆ. ಇದರ ಅಭಿವೃದ್ಧಿಯಾಗಿಲ್ಲ. ಈಗ ಬಾಲಕೃಷ್ಣ ಸಂಬಂಧಿ ಕಾರ್ತಿಕ್ ಈ ಜಮೀನನ್ನು ಮಾರಾಟಕ್ಕೆ ಯೋಜನೆ ಮಾಡಿದ್ದರು. ಈ ವಿಚಾರ ಅರಣ್ಯಾಧಿಕಾರಿಗೆ ಗೊತ್ತಾಗಿದ್ದು, ಇದನ್ನು ವಶಕ್ಕೆ ಪಡೆಯುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಕೋರಿದ್ದಾರೆ.

ಅರಣ್ಯ ಇಲಾಖೆ ಪತ್ರದಲ್ಲಿ ಏನಿದೆ?

* ಬೆಂಗಳೂರು ದಕ್ಷಿಣ ತಾಲೂಕಿನ, ಕೆಂಗೇರಿ ಹೋಬಳಿಯ ಮೈಲಸಂದ್ರ ಗ್ರಾಮದ ಸರ್ವೆ ನಂ. 26ರಲ್ಲಿರುವ ಈ ಭೂಮಿಯನ್ನು ನೀಡುವಾಗ ವಿಧಿಸಲಾಗಿದ್ದ ಷರತ್ತುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಮತ್ತು ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲಾಗಿದೆ.

* ಮಾರಾಟಕ್ಕೆ ಅನುಮತಿ ಪಡೆದರೂ, ಸ್ಟುಡಿಯೋವನ್ನು ಅಭಿವೃದ್ಧಿಪಡಿಸುವ ಯಾವುದೇ ಕಾಮಗಾರಿಗಳನ್ನು ಕೈಗೊಂಡಿಲ್ಲ.

* ಅನುಮತಿ ಪಡೆದಿದ್ದ 10 ಎಕರೆ ಬದಲು 12 ಎಕರೆ ಪ್ರದೇಶವನ್ನು ಮಾರಾಟ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X