‘ಬೌದ್ಧಧರ್ಮ’ಕ್ಕೆ ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಪರಿಶಿಷ್ಟ ಜಾತಿಯವರು ಬೌದ್ಧಧರ್ಮಕ್ಕೆ ಮತಾಂತರ ಹೊಂದಿದ್ದಲ್ಲಿ, ಅಂತಹವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು ಎಂದು ರಾಜ್ಯ ಸರಕಾರವು ಸೋಮವಾರದಂದು ಆದೇಶ ಹೊರಡಿಸಿದೆ.
ಜಾತಿ ಪ್ರಮಾಣ ಪತ್ರ ನೀಡುವ ಸಂಬಂಧಪಟ್ಟ ಪ್ರಾಧಿಕಾರಿಗಳು, ಜಾತಿ ಪ್ರಮಾಣ ಪತ್ರ ಪಡೆಯುವ ಅರ್ಜಿಯ ಧರ್ಮದ ಕಾಲಂನಲ್ಲಿ ಬೌದ್ಧ ಎಂದು ನಮೂದಿಸಲು ಅವಕಾಶ ಕಲ್ಪಿಸಬೇಕು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಗಳು/ಖಾಸಗಿ ಶಾಲೆಗಳು/ಇತರೆ ಎಲ್ಲ ಶೈಕ್ಷಣಿಕ ಸಂಸ್ಥೆಗಳಲ್ಲಿನ ದಾಖಲೆಗಳಲ್ಲಿ ಅರ್ಜಿದಾರರು, ಪೋಷಕರು ಇಚ್ಚಿಸಿದಲ್ಲಿ ಧರ್ಮದ ಕಾಲಂನಲ್ಲಿ ಬೌದ್ಧ ಎಂದು ನಮೂದಿಸಲು ಅವಕಾಶ ನೀಡಬೇಕು.
ಸರಕಾರದ ಎಲ್ಲ ಇಲಾಖೆಗಳು ನಿಗಮ ಮಂಡಳಿಗಳು ಸೇರಿ ಇತರೆ ಸಂಸ್ಥೆಗಳು ಸರಕಾರದ ಈ ಆದೇಶದಂತೆ ಕ್ರಮವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ ಎಂ.ಸುಮಿತ್ರ ತಿಳಿಸಿದ್ದಾರೆ.
Next Story





