ಮಾವು ಖರೀದಿಗೆ 101 ಕೋಟಿ ಬಿಡುಗಡೆಗೊಳಿಸಿದ ರಾಜ್ಯ ಸರಕಾರ

ಸಾಂದರ್ಭಿಕ ಚಿತ್ರ (Grok)
ಬೆಂಗಳೂರು : ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರವು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ.
ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆ ಮಾಡುವಂತೆ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ.
ಈಗಾಗಲೇ ಘೋಷಿಸಿರುವಂತೆ ಶೇ.50ರಷ್ಟು ಮೊತ್ತವನ್ನು ಕೇಂದ್ರ ಸರಕಾರದಿಂದ ಮರುಪಾವತಿ ಪಡೆಯಲು ಸಹ ಕ್ರಮ ವಹಿಸುವಂತೆ ಆದೇಶದಲ್ಲಿ ನಿರ್ದೇಶನ ನೀಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
Next Story





