ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಕಲಬುರಗಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಪಾಂಡವೆ ರಾಹುಲ್ ತುಕಾರಾಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಯಾದಗಿರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ಬೆಂಗಳೂರಿನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ)ಯ ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವೀಸಸ್ (ಇಡಿಸಿಎಸ್) ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
Next Story




