Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಸರ್ಕಾರದ ಆದ್ಯತೆ ರಿಯಲ್ ಎಸ್ಟೇಟ್...

ರಾಜ್ಯ ಸರ್ಕಾರದ ಆದ್ಯತೆ ರಿಯಲ್ ಎಸ್ಟೇಟ್ ಹೊರತು ರೈತರಲ್ಲ: ಬಿ.ವೈ. ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ17 Jun 2026 12:09 PM IST
share
ರಾಜ್ಯ ಸರ್ಕಾರದ ಆದ್ಯತೆ ರಿಯಲ್ ಎಸ್ಟೇಟ್ ಹೊರತು ರೈತರಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಪ್ರಮುಖ ಆದ್ಯತೆ ರಿಯಲ್ ಎಸ್ಟೇಟ್. ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ತಮ್ಮ ಸರ್ಕಾರದ ಆದ್ಯತೆ ರಿಯಲ್ ಎಸ್ಟೇಟ್ ಎಂಬುದನ್ನು ತೋರಿಸಿದ್ದಾರೆ. ಈ ಸರ್ಕಾರಕ್ಕೆ ರೈತರ ಮೇಲೆ ಕಾಳಜಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಧವಳಗಿರಿ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಡದಿಯಲ್ಲಿ ಟೌನ್‌ಶಿಪ್ ಮಾಡಲು ಮುಂದಾಗಿರುವ ಸರ್ಕಾರ ಬಲಾತ್ಕಾರವಾಗಿ, ಅಕ್ರಮವಾಗಿ ರೈತರ ಜಮೀನು ಕಸಿಯಲು ಮುಂದಾಗಿದೆ. ಇದನ್ನು ಬಿಜೆಪಿ ವಿರೋಧಿಸಲಿದೆ. ಆದ್ದರಿಂದ ಇಂತಹ ಕೆಲಸವನ್ನು ಸರ್ಕಾರ ಕೈಬಿಡಬೇಕು. ಅನ್ನದಾತರಿಗೆ ಈ ಸರ್ಕಾರ ನೆರವಾಗಬೇಕಿತ್ತು. ಆದರೆ ದುರದೃಷ್ಟವೆಂದರೆ ಬೆಂಗಳೂರಿನ ರಿಯಲ್ ಎಸ್ಟೇಟ್ ಸರ್ಕಾರಕ್ಕೆ ಮುಖ್ಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಂಡತನ ಬಿಟ್ಟು ರೈತರ ಸಮಸ್ಯೆಗಳನ್ನು ಆಲಿಸಬೇಕು. ಅವರನ್ನು ಒಕ್ಕಲೆಬ್ಬಿಸಬಾರದು. ಟೌನ್‌ಶಿಪ್‌ಗಾಗಿ ಭೂಸ್ವಾಧೀನವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ನನ್ನ ವಿರುದ್ಧ, ಬಿಜೆಪಿ ನಾಯಕರ ವಿರುದ್ಧ, ವಿರೋಧಪಕ್ಷದ ನಾಯಕರ ವಿರುದ್ಧ ಪೋಸ್ಟರ್ ಆಂದೋಲನ ನಡೆಸಲಾಗುತ್ತಿದೆ. ಇದಕ್ಕೆ ಹೆದರಲ್ಲ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರಲು ನಾವು ಕಾಂಗ್ರೆಸ್ ಶಾಸಕರಲ್ಲ. ಈ ನಾಡಿನ ರೈತರ ಪರವಾಗಿ ನಿಲ್ಲುವ ಕರ್ತವ್ಯ ನಮ್ಮದು, ಅದನ್ನು ಮಾಡೇ ಮಾಡುತ್ತೇವೆ. ವಿರೋಧ ಪಕ್ಷದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತೇವೆ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಕತ್ತೆ ಕಾಯುತ್ತಿದೆಯೇ..

ಗ್ಯಾರಂಟಿಗಳಲ್ಲಿ ಅಕ್ರಮ ಆಗೋವರೆಗೆ ಅನುಷ್ಠಾನ ಸಮಿತಿಗಳು ಕತ್ತೆ ಕಾಯುತ್ತಿದ್ದವೇ. ಒಂದೂವರೆ ಲಕ್ಷಕ್ಕೂ ಹೆಚ್ಚು ಜನರು ಆದಾಯ ತೆರಿಗೆ ಪಾವತಿ ಮಾಡುವವರು ಗೃಹಲಕ್ಷ್ಮಿ ಪಡೆಯುತ್ತಿದ್ದಾರೆ ಎಂದು ಅನುಷ್ಠಾನ ಸಮಿತಿ ಹೇಳಿದೆ. ಗ್ಯಾರಂಟಿ ಜಾರಿ ಮಾಡುವಾಗ ಕಾಕಾ ಪಾಟೀಲ್, ಮಹಾದೇವಪ್ಪಗೆ ಫ್ರೀ ಎಂದಿದ್ದರು. ಈಗ ಹೇಗೆ ಅವರೆಲ್ಲ ತೆರಿಗೆ ಪಾವತಿದಾರರಾಗುತ್ತಾರೆ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ನೀಡಲಾಗಿದೆ. ಜಿಲ್ಲೆಯಲ್ಲಿ ಅಧ್ಯಕ್ಷರಿದ್ದಾರೆ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನ ಸಮಿತಿ ಇದೆ. ಇವರೆಲ್ಲ ಕತ್ತೆ ಕಾಯುತ್ತಿದ್ದಾರೆಯೇ ಎಂದು ವ್ಯಂಗ್ಯವಾಡಿದರು.

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಈಗ ಹೊರೆ ಆಗ್ತಾ ಇದೆ. ಸಮಿತಿಗಳಿಗೆ, ಅಧ್ಯಕ್ಷರಿಗೆ ಕಚೇರಿ, ವೇತನ, ಇತರ ಸೌಲಭ್ಯಗಳಿಗೆ ನೂರಾರು ಕೋಟಿ ವ್ಯಯಿಸಲಾಗುತ್ತಿದೆ. ಇದು ಸರ್ಕಾರದ ವೈಫಲ್ಯ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದೇ ಒಂದೊಂದೇ ನೆಪ ಹೇಳಿಕೊಂಡು ಈಗ ಸೌಲಭ್ಯಗಳಿಗೆ ಕತ್ತರಿ ಹಾಕ್ತ ಇದ್ದಾರೆ. ಇದಕ್ಕೆ ರಾಜ್ಯದ ಜನ ಛೀಮಾರಿ ಹಾಕ್ತ ಇದ್ದಾರೆ ಎಂದರು.

ರಾಜ್ಯ ಸರ್ಕಾರವೇ ಎಸ್‌ಐಆರ್ ವಿಚಾರದಲ್ಲಿ ದ್ವಂದ್ವ ನಿಲುವು ತೋರಿಸುತ್ತಿದೆ. ಅಧಿಕಾರಿಗಳನ್ನು ಎತ್ತಿಕಟ್ಟುವ ಕೆಲಸ ಮಾಡಲಾಗುತ್ತಿದೆ. ಬಿಎಲ್‌ಒಗಳಿಗೆ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುತ್ತಿದೆ ಎಂದು ದೂರಿದರು.

ಕಾಂಗ್ರೆಸ್‌ನ ಮಹಾನ್ ನಾಯಕ ರಾಹುಲ್ ಗಾಂಧಿ ಅವರು ಬೇರೆ ದೇಶದ ನೈಜ ಪೌರತ್ವ ಪಡೆದಿದ್ದಾರೆ. ಇನ್ನೊಂದು ದೇಶದ ಪೌರತ್ವ ಇಟ್ಟುಕೊಂಡು ಅಕ್ರಮವಾಗಿ ಸುಳ್ಳು ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಡಿ.ಕೆ. ಶಿವಕುಮಾರ್ ಹಾಗೂ ಪ್ರಿಯಾಂಕ್ ಖರ್ಗೆ ಅವರು ಬೆಳಕು ಚೆಲ್ಲುವ ಕೆಲಸವನ್ನು ಮಾಡಲಿ ಎಂದರು.

ಚುನಾವಣಾ ಆಯೋಗ ಅಕ್ರಮ ವಲಸಿಗರ ಪತ್ತೆಗೆ, ಮತಪಟ್ಟಿಯಲ್ಲಿ ಎರಡು ಕಡೆ ಹೆಸರು ಇದ್ದರೆ, ಮೃತಪಟ್ಟವರ ಹೆಸರು ಸೇರಿದ್ದರೆ ಸರಿಪಡಿಸಲು ಎಸ್‌ಐಆರ್ ಮಾಡುತ್ತಾ ಇದೆ. ಸಾಂವಿಧಾನಿಕ ಸಂಸ್ಥೆ ವಿರುದ್ಧ ಅಧಿಕಾರಿಗಳನ್ನು, ಜನರನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದರು.

ಬಾಯಿ ಚಪಲದ ಮಾತಿಗೆ ಉತ್ತರ ಕೊಡಲ್ಲ...

ಆರೆಸ್ಸೆಸ್ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಒಂದಲ್ಲ ಒಂದು ಹೇಳಿಕೆ ಪ್ರತಿದಿನ ನೀಡುತ್ತಾ ಇದ್ದಾರೆ. ಅವರ ಬಾಯಿ ಚಪಲಕ್ಕೆ ಉತ್ತರ ಕೊಡಲ್ಲ. ಅವರು ರಾಜ್ಯದ ಗೃಹ ಸಚಿವರು. ಅವರು ಮಾಡಬೇಕಾದ ಕೆಲಸ ತುಂಬಾ ಇವೆ. ಅಕ್ರಮ ನುಸುಳುಕೋರರು, ಲವ್ ಜಿಹಾದ್, ಹಿಂದೂ ಕಾರ್ಯಕರ್ತರ ಹತ್ಯೆ ಬಗ್ಗೆ ಗಮನ ಹರಿಸಲಿ. ಅದನ್ನು ಬಿಟ್ಟು ಬೇರೆ ಮಾತನಾಡುತ್ತಾರೆ ಎಂದರು.

Tags

State governmentreal estatefarmersB.Y. Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X