Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಮಟ್ಟದ 161ನೇ ಏಕಗವಾಕ್ಷಿ...

ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯಿಂದ 147 ಯೋಜನೆಗಳಿಗೆ ಒಪ್ಪಿಗೆ

6,825 ಕೋಟಿ ರೂ. ಬಂಡವಾಳ ಹೂಡಿಕೆಗೆ ಸಮ್ಮತಿ, 18,600 ಉದ್ಯೋಗಾವಕಾಶಗಳ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ9 Nov 2026 5:44 PM IST
share
ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯಿಂದ 147 ಯೋಜನೆಗಳಿಗೆ ಒಪ್ಪಿಗೆ

ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರಿನ ಆಚೆಗೂ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ನೀಡಲು ಒಟ್ಟು 6,825 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸುವ 147 ಕೈಗಾರಿಕಾ ಯೋಜನೆಗಳಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ 161ನೇ ಏಕಗವಾಕ್ಷಿ ಅನುಮೋದನಾ ಸಮಿತಿಯು ಒಪ್ಪಿಗೆ ನೀಡಿದೆ.

ʼಈ ಯೋಜನೆಗಳ ಮೂಲಕ ರಾಜ್ಯದಾದ್ಯಂತ 18,600 ಉದ್ಯೋಗಾವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. ಅನುಮೋದನೆ ಪಡೆದ ಯೋಜನೆಗಳ ಪೈಕಿ 131 ಯೋಜನೆಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಆಗಲಿದ್ದು, ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಗೆ ಇನ್ನಷ್ಟು ಉತ್ತೇಜನ ನೀಡಲಿದೆʼ ಎಂದು ಸಭೆ ಬಳಿಕ ಸಚಿವ ಎಂ. ಬಿ. ಪಾಟೀಲ್‌ ತಿಳಿಸಿದ್ದಾರೆ.

ಪ್ರಮುಖ ಹೂಡಿಕೆಗಳ ಪೈಕಿ ದೇವನಹಳ್ಳಿ ಬಳಿ ಅದ್ವೈತ್‌ ಟೆಕ್‌ನ 380 ಕೋಟಿ ವೆಚ್ಚದ ಐಟಿ ಹಾಗೂ ಐಟಿಇಎಸ್‌ ಪಾರ್ಕ್‌ ನಿರ್ಮಾಣ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಒಎಫ್‌ಬಿ ಟೆಕ್‌ ಲಿಮಿಟೆಡ್‌ನ 245 ಕೋಟಿ ವೆಚ್ಚದ ಕಂಟೇನರ್‌ ಗಾಜಿನ ಘಟಕ ನಿರ್ಮಾಣ, ಮೈಸೂರು ಜಿಲ್ಲೆಯ ಕೊಚನಹಳ್ಳಿಯಲ್ಲಿ ಎಫ್‌ಐಇಎಂ ಇಂಡಸ್ಟ್ರೀಸ್‌ನ 183 ಕೋಟಿ ಮೊತ್ತದ ಎಲೆಕ್ಟ್ರಾನಿಕ್‌ ಘಟಕಗಳ ತಯಾರಿಕೆ, ಬಳ್ಳಾರಿ ಜಿಲ್ಲೆಯ ಬೆಳಗಲ್ಲುವಿನಲ್ಲಿ ಅನಂತ್‌ ಸ್ಟೀಲ್ಸ್‌ನ 119.41 ಕೋಟಿ ಮೊತ್ತದ ಉಕ್ಕಿನ ಸರಳುಗಳ ತಯಾರಿಕೆ ಘಟಕಗಳು ಸೇರಿವೆ.

ವಿವಿಧ ವಲಯಗಳಲ್ಲಿ ಹೂಡಿಕೆಗೆ ಉತ್ತೇಜನ

ʼಅನುಮೋದನೆ ಪಡೆದ ಯೋಜನೆಗಳು ಆಹಾರ ಸಂಸ್ಕರಣೆ, ಜವಳಿ, ಡೇಟಾ ಸೆಂಟರ್, ಸೆಮಿಕಂಡಕ್ಟರ್, ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್‌ಡಿಎಂ), ಐಟಿ ಪಾರ್ಕ್, ಮುದ್ರಿತ ಸರ್ಕ್ಯೂಟ್ ಬೋರ್ಡ್‌ಗಳ ಜೋಡಣೆ, ವೈಮಾಂತರಿಕ್ಷ, ಸಕ್ಕರೆ, ಜನರಲ್‌ ಎಂಜಿನಿಯರಿಂಗ್ ಸೇರಿದಂತೆ ವಿವಿಧ ತಯಾರಿಕಾ ವಲಯಗಳಿಗೆ ಸಂಬಂಧಿಸಿವೆ. ಇದರಿಂದ ರಾಜ್ಯದ ಕೈಗಾರಿಕಾ ವಲಯದಲ್ಲಿ ವೈವಿಧ್ಯಮಯ ಹೂಡಿಕೆಗಳಿಗೆ ಗಮನಾರ್ಹ ಉತ್ತೇಜನ ದೊರೆಯಲಿದೆ ಎಂದು ಪಾಟೀಲ್‌ ಅವರು ತಿಳಿಸಿದ್ದಾರೆ.

ಬೆಂಗಳೂರು ಆಚೆಗಿನ ಕೈಗಾರಿಕಾ ಬೆಳವಣಿಗೆಗೆ ಆದ್ಯತೆ

ʼಬಹುತೇಕ ಯೋಜನೆಗಳು ರಾಜ್ಯದ ಇತರ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿವೆ. ಇದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಚಟುವಟಿಕೆಗಳ ವಿಸ್ತರಣೆ, ಸ್ಥಳೀಯ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಪ್ರಾದೇಶಿಕ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆʼ ಎಂದು ಸಚಿವರು ತಿಳಿಸಿದ್ದಾರೆ.

ಸಭೆಯಲ್ಲಿ 50 ಕೋಟಿಗೂ ಅಧಿಕ ಬಂಡವಾಳ ಹೂಡಿಕೆಯ 36 ಪ್ರಮುಖ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ 4,507.71 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, 12,074 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದು ಅವರು ವಿವರಿಸಿದ್ದಾರೆ.

15 ಕೋಟಿಯಿಂದ 50 ಕೋಟಿಯೊಳಗಿನ ಬಂಡವಾಳ ಹೂಡಿಕೆಯ 108 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 2,238.37 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 6,526 ಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದ ಮೂರು ಯೋಜನೆಗಳಿಗೂ ಅನುಮೋದನೆ ನೀಡಲಾಗಿದ್ದು, ಇವುಗಳಿಂದ₹79.85 ಕೋಟಿ ಹೂಡಿಕೆಯಾಗಲಿದೆ ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಖುಷ್ಬೂ ಜಿ. ಚೌಧರಿ, ಕೆಐಎಡಿಬಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

M. B. Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X