ರಾಜ್ಯದಲ್ಲಿ ಶೇ.80.39ರಷ್ಟು ಸಮೀಕ್ಷೆ ಪೂರ್ಣ

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಇದುವರೆಗೂ ಶೇ.80.39ರಷ್ಟು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಪೂರ್ಣಗೊಂಡಿದೆ.
ಒಟ್ಟು 1,43,77,978 ಕುಟುಂಬಗಳ ಸಮೀಕ್ಷೆಯ ಗುರಿಯನ್ನು ಇಟ್ಟುಕೊಂಡಿದ್ದು, ಈಗ 1,15,56752 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದೆ.
ಈಗಾಗಲೇ 4,32,74,823 ಜನರ ಸಮೀಕ್ಷೆ ಪೂರ್ಣಗೊಂಡಿದೆ. ಸೋಮವಾರ ಒಂದೇ ದಿನ 5,52,407 ಕುಟುಂಬಗಳ ಸಮೀಕ್ಷೆ ಮುಕ್ತಾಯವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಇದುವರೆಗೂ 2,60,900 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ರವಿವಾರ ಒಂದೇ ದಿನ 1,36,277 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಒಟ್ಟು 39,82,335 ಕುಟುಂಬಗಳ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ಹೇಳಿದೆ.
Next Story





